ಇಂದು ಗೃಹಲಕ್ಷ್ಮೀ ಯೋಜನೆಯ ಹಣ ಜಮೆ: ನಿಮ್ಮ ಹೆಸರು ಇಲ್ಲೇ ಚೆಕ್ ಮಾಡಿ

Written by Ramlinganna

Updated on:

ಕಾಂಗ್ರೆಸ್ ಸರ್ಕಾರದ ಐದು ಗ್ಯಾರೆಂಟಿಗಳಲ್ಲಿ ನಾಲ್ಕನೇ ಯೋಜನೆ ಗೃಹಲಕ್ಷ್ಮೀ ಯೋಜನೆಯಡಿ ಕುಟುಂಬದ ಮಹಿಳಾ ಒಡತಿಗೆ 2 ಸಾವಿರ ರೂಪಾಯಿ ಜಮೆ ಮಾಡಲಾಗುವುದು.

ಹೌದು, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯಡಿ ಕುಟುಂಬದ ಯಜಮಾನಿಗೆ 2 ಸಾವಿರ ರೂಪಾಯಿ ಜಮೆ ಮಾಡಲಾಗುವುದು. ಈ ಯೋಜನೆಗೆ ಇಂದು (ಬುಧವಾರ) ಮೈಸೂರಿನಲ್ಲಿ ಚಾಲನೆ ಸಿಗಲಿದೆ. ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ  ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪಾಲ್ಗೊಳ್ಳಲಿದ್ದಾರೆ. ಇಂದು ಸಾಂಕೇತಿಕವಾಗಿ ಐದು ಜಿಲ್ಲೆಯ ಫಲಾನುಭವಿಗಳಿಗೆ 2 ಸಾವಿರ ರೂಪಾಯಿ ನೀಡಲಿದ್ದಾರೆ.

ಗೃಹಲಕ್ಷ್ಮೀ ಯೋಜನೆಗೆ ಎಷ್ಟು ಮಹಿಳೆಯರು ನೋಂದಣಿ ಮಾಡಿಸಿದ್ದಾರೆ?

ಕುಟುಂಬ ನಿರ್ವಹಣೆಯ ಹೊಣೆ ಹೊತ್ತ ಮಹಿಳೆಯರಿಗೆ ನಿತ್ಯ ಎದುರಾಗುವ ಬೆಲೆಯೇರಿಕೆಯ ಸಂಕಷ್ಟಗಳನ್ನು ತಗ್ಗಿಸಿ, ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ನೆರವಾಗುವ ಉದ್ದೇಶದೊಂದಿಗೆ ಜಾರಿಗೊಂಡಿರುವ ಈ ಯೋಜನೆಯಡಿ ಈಗಾಗಲೇ ರಾಜ್ಯದಿಂದ 1.08 ಕೋಟಿ ಮಹಿಳೆಯರು ನೋಂದಣಿ ಮಾಡಿಸಿದ್ದಾರೆ. ಈ ಯೋಜನೆಗಾಗಿ ಸರ್ಕಾರವು ಈ ವರ್ಷ 17500 ರೂಪಾಯಿಗಳನ್ನು ಮೀಸಲಿಟ್ಟಿದೆ.

ಗೃಹಲಕ್ಷ್ಮೀ ಯೋಜನೆಯ ಹಣ ಯಾವ ಯಾವ ಮಹಿಳೆಯರಿಗೆ ಜಮೆಯಾಗಲಿದೆ?

ಗೃಹಲಕ್ಷ್ಮೀ ಯೋಜನೆಗೆ ಯಾವ ಯಾವ ಮಹಿಳೆಯರಿಗೆ ಜಮೆಯಾಗಬಹುದೆಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಲು ಈ

https://ahara.kar.nic.in/Home/EServices

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ತೆರೆದುಕೊಳ್ಳುವ ಪೇಜ್ ನಲ್ಲಿ  ಇ ಪಡಿತರ ಚೀಟಿ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿಲೇಜ್ ಲಿಸ್ಟ್ ಹಳ್ಳಿ ಪಟ್ಟಿ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ನಿಮ್ಮ ಜಿಲ್ಲೆ, ತಾಲೂಕು, ಗ್ರಾಮ ಪಂಚಾಯತ್ ಹಾಗೂ ನಿಮ್ಮ ಊರು ಆಯ್ಕೆ ಮಾಡಿಕೊಳ್ಳಬೇಕು. ನಂತರ ಗೋ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ಓಪನ್ ಆಗುವುದು. ಅಲ್ಲಿ ನಿಮ್ಮ ಆರ್.ಸಿ ನಂಬರ್, ಹೆಸರು, ವಿಳಾಸಾ ಹಾಗೂ ರೇಶನ್ ಕಾರ್ಡ್ ಯಾವ ಪ್ರಕಾರದ್ದಾಗಿದೆ. ಆ ರೇಶನ್ ಕಾರ್ಡ್ ನಲ್ಲಿ ಎಷ್ಟು ಜನ ಸದಸ್ಯರಿದ್ದಾರೆ ಎಂಬ ಮಾಹಿತಿ ಕಾಣಿಸುತ್ತದೆ.

ಆರ್.ಸಿ ನಂಬರ್ ನಂತರ ಮಹಿಳೆಯ ಹೆಸರಿದ್ದರೆ ಮಾತ್ರ ಅವರನ್ನು ಕುಟುಂಬದ ಮುಖ್ಯಸ್ಥರೆಂದು ಪರಿಗಣಿಸಲಾಗುವುದು. ಇಲ್ಲಿ ಮಹಿಳೆಯ ಹೆಸರಿದ್ದವರು ಗೃಹಲಕ್ಷ್ಮೀ ಯೋಜನೆಗೆ ಹೆಸರು ನೋಂದಣಿ ಮಾಡಿಸಿದ್ದರೆ ಮಾತ್ರ ಇಂದು ಗೃಹಲಕ್ಷ್ಮೀ ಯೋಜನೆಯ 2 ಸಾವಿರ ರೂಪಾಯಿ ಜಮೆಯಾಗುವುದು.

ಯಾವ ಉದ್ದೇಶಕ್ಕಾಗಿ ಈ ಯೋಜನೆ ಜಾರಿಗೆ ತರಲಾಗಿದೆ?  

ಕುಟುಂಬ ನಿರ್ವಹಣೆಯಲ್ಲಿ ಕುಟುಂಬ ಯಜಮಾನಿಯ ಪಾತ್ರ ಪ್ರಮುಖವಾಗಿದ್ದು, ಯಜಮಾನಿಯು ಆರ್ಥಿಕವಾಗಿ ಸಬಲೀಕರಣಗೊಂಡಲ್ಲಿ ಕುಟುಂಬದ ನಿರ್ವಹಣೆ ಉತ್ತಮ ಗುಣಮಟ್ಟದಲ್ಲಿರುತ್ತದೆ. ಹಾಗಾಗಿ ಕುಟುಂಬದ ಯಜಮಾನಿ ಮಹಿಳೆಯ ಖಾತೆಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿಗಳನ್ನು ನೀಡುವ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೆ ತರಲಾಗಿದೆ.

ಇದನ್ನೂ ಓದಿ ಅನ್ನಭಾಗ್ಯದ ಹಣ ಬಿಡುಗಡೆ- ನಿಮಗೆ ನಿಮಗೆಷ್ಟು ಜಮೆಯಾಗಿದೆ? ಮೊಬೈಲ್ ನಲ್ಲೇ ಚೆಕ್ ಮಾಡಿ

ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ಹೊಂದಿರುವ ಮಹಿಳಾ ಯಜಮಾನಿಗೆ ಮಾತ್ರ ಈ ಹಣ ಜಮೆಯಾಗಲಿದೆ. ರೇಶನ್ ಕಾರ್ಡ್ ನಲ್ಲಿ ಪುರುಷರು ಕುಟುಂಬದ ಮುಖ್ಯಸ್ಥರೆಂದು ತೋರಿಸಿದ್ದರೆ ಅಂತಹ ಕುಟುಂಬದ ಮಹಿಳೆಯರ ಖಾತೆಗೆ ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗುವುದಿಲ್ಲ. ಕುಟುಂಬದ ಯಜಮಾನಿಯ ಹೆಸರು ಮಹಿಳೆಯರ ಹೆಸರು ತಿದ್ದುಪಡಿ ಮಾಡಿಕೊಳ್ಳುವ ಅವಕಾಶ ನೀಡಲಾಗಿದೆ. ನಿಗದಿತ ಅವಧಿಯಲ್ಲಿ ಹೆಸರು ಬದಲಾಯಿಸಿಕೊಂಡರೆ ಆ ಕುಟುಂಬದ ಮಹಿಳಾ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ಜಮೆ ಮಾಡಲಾಗುವುದು.

ಗೃಹಲಕ್ಷ್ಮೀ ಯೋಜನೆಯಿಂದ ಮಹಿಳೆಯರ ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ಮಹಿಳೆಯರು ಈ ಹಣವನ್ನು ವಿವಿಧ ಉದ್ದೇಶಗಳಿಗೆ ಬಳಕೆ ಮಾಡುವುದರಿಂದ ಸರ್ಕಾರಕ್ಕೂ ಆದಾಯ ಬರಲಿದೆ. ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಸೃಷ್ಟಿ ಆಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ.

Leave a Comment