ಗೃಹಲಕ್ಷ್ಮೀ, ಅನ್ನಭಾಗ್ಯ ಹಣ ಯಾರಿಗೆ ಜಮೆಯಾಗಲಿದೆ?

Written by Ramlinganna

Updated on:

Gruha lakshmi annabhagya status  ಗೃಹಲಕ್ಷ್ಮೀ ಹಾಗೂ ಅನ್ನಭಾಗ್ಯ  ಯೋಜನೆಯಡಿ ನೋಂದಣಿ ಮಾಡಿಕೊಂಡವರಿಗೆ ಯಾರ್ಯಾರಿಗೆ ಹಣ ಜಮೆಯಾಗುತ್ತದೆ ಎಂಬುದನ್ನು ಫಲಾನುಭವಿಗಳು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.

ಹೌದು, ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರವು ಅನೇಕ ಯೋಜನೆಗಳನ್ನು ಹಮ್ಮಿಕೊಂಡಿರುತ್ತದೆ. ಕುಟುಂಬದ ನಿರ್ವಹಣೆಯಲ್ಲಿ ಕುಟುಂಬ ಯಜಮಾನಿಯ ಪಾತ್ರ ಪ್ರಮುಖವಾಗಿದ್ದು, ಯಜಮಾನಿಯ ಆರ್ಥಿಕವಾಗಿ ಸಬಲೀಕರಣಗೊಂಡಲ್ಲಿ ಕುಟುಂಬ ನಿರ್ವಹಣೆ ಉತ್ತಮ ಗುಣಮಟ್ಟದಲ್ಲಿರುತ್ತದೆ. ಆದ್ದರಿಂದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿಗಳನ್ನು ನೀಡುವ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೆ ತರಲಾಗಿದೆ.

ರಾಜ್ಯದ ಕುಟುಂಬದಲ್ಲಿನ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿಗಳನ್ನು ಈ ಕೆಳಗಿನ ಅರ್ಹತೆ ಪಡೆದವರಿಗೆ ನೀಡಲಾಗಿದೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ವಿತರಿಸುವ ಅಂತ್ಯೋದಯ, ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿಯಾಗಿರುತ್ತಾರೆ.

ಇದನ್ನೂ ಓದಿ FRUITS ID ಯಲ್ಲಿ ಎಷ್ಟು ಸರ್ವೆ ನಂಬರ್ ಲಿಂಕ್ ಆಗಿದೆ? ಚೆಕ್ ಮಾಡಿ

ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದಲ್ಲಿ ಒಂದು ಮಹಿಳೆಗೆ ಮಾತ್ರ ಯೋಜನೆ ಅನ್ವಯಿಸಲಾಗುತ್ತದೆ. ಅರ್ಜಿದಾರರು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿರಬೇಕು. ಅರ್ಜಿದಾರರು ಈ ಸೌಲಭ್ಯ ಪಡೆಯಲು ಫಲಾನುಭವಿಯ ಬ್ಯಾಂಕ್ ಖಾತೆ ಮತ್ತು ಆಧಾರ್ ಕಾರ್ಡ್ ಗಳನ್ನು ಜೋಡಣೆ ಮಾಡಬೇಕು. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿದಾರರಾಗಿರಬಾರದು. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಜಿಎಸ್ಟಿ ರಿಟರ್ನ್ಸ್ ಪಾವತಿದಾರರಾಗಿರಬಾರದು. ಇಂತಹವರು ತಮ್ಮ ಹೆಸರು ನೋಂದಣಿ ಮಾಡಿಸಿಕೊಂಡರೆ ಅವರಿಗೆ ಗೃಹಲಕ್ಷ್ಮೀ ಯೋಜನೆ ಹಣ ಜಮೆಯಾಗಲಿದೆ.

ನಿಮ್ಮಅರ್ಜಿಯ ಸ್ಟೇಟಸ್ ಇಲ್ಲೇ ಚೆಕ್ ಮಾಡಿ

ಗೃಹಲಕ್ಷ್ಮೀ ಯೋಜನೆಯಡಿ ನೋಂದಣಿ ಮಾಡಿಸಿಕೊಂಡವರು ತಮ್ಮ ಅರ್ಜಿಯ ಸ್ಟೇಟಸ್  ಚೆಕ್ ಮಾಡಲು  ಈ

https://sevasindhugs.karnataka.gov.in/about_kannada.html

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಅಲ್ಲಿ ಕಾಣುವ ಗೃಹಲಕ್ಷ್ಮೀ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮ್ಮ ಅರ್ಜಿಯ ಸ್ಥಿತಿಯನ್ನು ತಿಳಿಯಿರಿ ಮೇಲೆ ಕ್ಲಿಕ್ ಮಾಡಿ ಅರ್ಜಿಯ ಸ್ಟೇಟಸ್ ಚೆಕ್ ಮಾಡಬಹುದು.

Gruha lakshmi annabhagya status  ಅನ್ನಭಾಗ್ಯ ಯೋಜನೆಯ ಹಣ ಯಾರಿಗೆ ಜಮೆಯಾಗಲಿದೆ?

ಅನ್ನಭಾಗ್ಯ ಯೋಜನೆಯ ಹಣ ಪಡೆಯಲು ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ಹೊಂದಿರುವವರು ಅರ್ಹರಾಗಿರುತ್ತಾರೆ. ಬಿಪಿಎಲ್ ಕಾರ್ಡ್ ಹೊಂದಿದರೆ ಮಾತ್ರ ಸಾಲದು, ಕಳೆದ ಮೂರು ತಿಂಗಳಲ್ಲಿ ಒಮ್ಮೆಯಾದರೂ ಸಹ ಅನ್ನಭಾಗ್ಯ ಯೋಜನೆಯಡಿ ಐದು ಕೆಜಿ ಅಕ್ಕಿ ಪಡೆದಿರಬೇಕು. ಆಗ ಅವರು ಅನ್ನಭಾಗ್ಯದ ಯೋಜನೆಯ ಹಣ ಪಡೆಯಲು ಅರ್ಹ ರಾಗಿರುತ್ತಾರೆ.

ಕಳೆದ ಮೂರು ತಿಂಗಳಲ್ಲಿ ತಮಗೆ ಅನ್ನಭಾಗ್ಯ ಯೋಜನೆಯಡಿ ಹಣ ಜಮೆ ಮಾಡಲಾಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ

https://ahara.kar.nic.in/lpg/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮ್ಮ ಜಿಲ್ಲೆಯ ಮೇಲ್ಗಡೆ ಇರುವ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.  ನಂತರ ಡಿಬಿಟಿ ಸ್ಟೇಟಸ್ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮ್ಮ ಆರ್.ಸಿ ನಂಬರ್ ನಮೂದಿಸಬೇಕು. ನಂತರ ಯಾವ ತಿಂಗಳ ಸ್ಟೇಟಸ್ ಚೆಕ್ ಮಾಡಬೇಕೆಂದುಕೊಂಡಿದ್ದೀರೋ ಆ ತಿಂಗಳು ಆಯ್ಕೆ ಮಾಡಿಕೊಂಡು ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಬೇಕು. ನಂತರ ಗೋ ಮೇಲೆ ಕ್ಲಿಕ್ ಮಾಡಿ ಅನ್ನಭಾಗ್ಯ ಯೋಜನೆಯ ಸ್ಟೇಟಸ್ ಚೆಕ್ ಮಾಡಿಕೊಳ್ಳಬಹುದು. ಇದನ್ನು ಫಲಾನುಭವಿಗಳು ತಮ್ಮ ಬಳಿಯಿರುವ ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಇದೇ ತಿಂಗಳು ಅಕ್ಟೋಬರ್ ತಿಂಗಳ ಅನ್ನಭಾಗ್ಯ ಯೋಜನೆಯ ಹಣವೂ ಜಮೆಯಾಗುವ ಸಾಧ್ಯತೆಯಿದೆ.

Leave a Comment