ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಿದ ಫಲಾನುಭವಿಗಳು Gruha lakshmi eligibility list ಯಾರು ಮತ್ತು ಅನರ್ಹರು ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.
ಹೌದು, ತಮಗೆಲ್ಲಾ ಗೊತ್ತಿದ್ದ ಹಾಗೆ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ಪಾವತಿಸಲು ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಗೃಹಲಕ್ಷ್ಮೀ ಯೋಜನೆ ಈಗಾಗಲೇ ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ.
ಈ ಯೋಜನೆಯಡಿಯಲ್ಲಿ ನೋಂದಣಿ ಮಾಡಿಸಿದ ಫಲಾನುಭವಿಗಳಿಗೆ ಈಗಾಗಲೇ 12 ಕಂತುಗಳ ಹಣ ಜಮೆ ಮಾಡಲಾಗಿದೆ. ಇನ್ನೂ ಲಕ್ಷಾಂತರ ಮಹಿಳೆಯರು ತಾಂತ್ರಿಕ ಕಾರಣಗಳಿಂದ ಯೋಜನೆಯಿಂದ ವಂಚಿತರಾಗಿದ್ದಾರೆ. 10 ಮತ್ತು 11ನೇ ಕಂತಿನಲ್ಲಿ ಹಣ ಜಮೆಯಾಗದವರಿಗೆ ಅತೀ ಶೀಘ್ರದಲ್ಲಿ ಹಿಂದಿನ ಕಂತಿನಲ್ಲಿ ವಂಚಿತರಾಗಿದ್ದವರಿಗೆಹಣ ಜಮೆ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದ್ದಾರೆ.
Gruha lakshmi eligibility list ಚೆಕ್ ಮಾಡುವುದು ಹೇಗೆ?
ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಿದವರೆಲ್ಲರಿಗೂ ಯೋಜನೆಯ ಹಣ ಜಮೆಯಾಗುವುದಿಲ್ಲ. ಈ ಪಟ್ಟಿಯಲ್ಲಿ ತಮ್ಮ ಹೆಸರಿದ್ದರೆ ಮಾತ್ರ ನಿಮಗೆ ಹಣ ಜಮೆಯಾಗುತ್ತದೆ. ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ
https://ahara.kar.nic.in/Home/EServices
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ತೆರೆದುಕೊಳ್ಳುವ ಪೇಜ್ ನಲ್ಲಿ ಇ ಪಡಿತರ ಚೀಟಿ ಮೇಲೆ ಕ್ಲಿಕ್ ಮಾಡಬೇಕು. ನಂತರ ಹಳ್ಳಿಪಟ್ಟಿ (village list) ಮೇಲೆ ಕ್ಲಿಕ್ ಮಾಡಬೇಕು. ಆಗ ಮತ್ತೊಂದು ಪೇಜ್ ಓಪನ್ ಆಗುತ್ತದೆ. ಅಲ್ಲಿ ನಿಮ್ಮ ಜಿಲ್ಲೆಆಯ್ಕೆ ಮಾಡಿಕೊಳ್ಳಬೇಕು. ತಾಲೂಕು ಆಯ್ಕೆ ಮಾಡಿಕೊಳ್ಳಬೇಕು.
ಗ್ರಾಮ ಪಂಚಾಯತ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಊರು ಆಯ್ಕೆ ಮಾಡಿಕೊಳ್ಳಬೇಕು. ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಪಡಿತರ ಚೀಟಿಯಲ್ಲಿ ಹೊಂದಿರುವವರ ಪಟ್ಟಿ ಕಾಣಿಸುತ್ತದೆ. ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ಹೊಂದಿರುವ ಹಾಗೂ ಪಡಿತರ ಲೀಸ್ಟ್ ನಲ್ಲಿ ಮಹಿಳೆಯ ಹೆಸರು ಮೊದಲು ಅಂದರೆ ಕುಟುಂಬದ ಯಜಮಾನಿ ಎಂದು ನಮೂದಾಗಿದ್ದರೆ ಅವರು ಗೃಹಲಕ್ಷ್ಮೀ ಯೋಜನೆಗೆ ಅರ್ಹರಾಗಿದ್ದಾರೆಂದರ್ಥ.
ಅನರ್ಹರ ಪಟ್ಟಿಯಲ್ಲಿ ಯಾರ ಯಾರ ಹೆಸರಿದೆ?
ಗೃಹಲಕ್ಷ್ಮೀ ಯೋಜನೆಗೆ ಹೆಸರು ನೋಂದಣಿ ಮಾಡಿಸಿದ್ದರೂ ಸಹ ಒಂದು ವೇಳೆ ಅವರ ಹೆಸರು ರದ್ದುಗೊಳಿಸಲಾದ / ತಡೆಹಿಡಿಯಲಾದ ಲಿಸ್ಟ್ ನಲ್ಲಿದ್ದರೆ ಅವರಿಗೆ ಜಮೆಯಾಗುವ ಸಾಧ್ಯತೆ ತುಂಬಾ ಕಡಿಮೆ ಇರುತ್ತದೆ. ಹೌದು, ರದ್ದುಗೊಳಿಸಲಾದ ಪಟ್ಟಿ ಮೇಲೆ ಕ್ಲಿಕ್ ಮಾಡಿದ ನಂತರ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ.
ಇದನ್ನೂ ಓದಿ : Bele vime ಹಣ ಬಿಡುಗಡೆ: ನಿಮಗೂ ಜಮೆಯಾಗಿದೆಯೇ? ಮೊಬೈಲ್ ನಲ್ಲೇ ಚೆಕ್ ಮಾಡಿ
ಅಲ್ಲಿ ನಿಮ್ಮ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ನಂತರ ತಿಂಗಳು ಆಯ್ಕೆ ಮಾಡಿಕೊಂಡು ಗೋ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ಓಪನ್ ಆಗುತ್ತದೆ.ಅಲ್ಲಿ ನಿಮ್ಮ ಹೆಸರಿದ್ದರೆ ನಿಮಗೆ ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗುವ ಸಾಧ್ಯತೆ ತುಂಬಾ ಕಡಿಮೆ ಇರುತ್ತದೆ.
ಈ ಪಟ್ಟಿಯಲ್ಲಿ ಹೆಸರಿಲ್ಲದಿದ್ದರೂ ನಿಮಗೆ ಹಿಂದಿನ ಕಂತಿನ ಹಣ ಜಮೆಯಾಗಿಲ್ಲವೇ? ಹಾಗಾದರೆ ನಿಮ್ಮ ಆಧಾರ್ ಕಾರ್ಡ್ ನಲ್ಲಿ ಹೆಸರು, ರೇಶನ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ನಲ್ಲಿ ಹೋಲಿಕೆ ಆಗದೆ ಇರಬಹುದು.ಅಥವಾ ಕುಟುಂಬದ ಯಜಮಾನಿಯಾಗಲಿ ಅಥವಾ ಅವರ ಪತಿಯಾಗಲಿ ಟಿಡಿಎಸ್ ಪಾವತಿಸುವವರಾಗಿದ್ದರೆ ಅವರಿಗೆ ಹಣ ಜಮೆಯಾಗುವುದಿಲ್ಲ. ತೆರಿಗೆ ಪಾವತಿಸುವವರಾಗಿದ್ದರೂ ಸಹ ನಿಮಗೆ ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗುವುದಿಲ್ಲ.
ಗೃಹಲಕ್ಷ್ಮೀ ಯೋಜನೆಯ ಹಣ 11 ಮತ್ತು 12ನೇ ಕಂತಿನ ಹಣ ಇದೇ ತಿಂಗಳು ಫಲಾನುಭವಿಗಳ ಖಾತೆಗೆ ಜಮೆಯಾಗುವ ಸಾಧ್ಯತೆಯಿದೆ. ಹಾಗಾಗಿ ಒಮ್ಮೆ ನಿಮ್ಮಹೆಸರು ಎಲ್ಲಾ ದಾಖಲೆಗಳಲ್ಲಿ ಒಂದೇ ರೀತಿಯಾಗಿದೆಯೇ ಎಂಬುದನ್ನು ಒಮ್ಮೆ ಪರಿಶೀಲಿಸಿಕೊಳ್ಳಬಹುದು.