ಇಂದು ಗೃಹಲಕ್ಷ್ಮೀ 6ನೇ ಕಂತಿನ ಹಣ ಜಮೆ

Written by Ramlinganna

Published on:

Gruha lakshmi money credited: ಗೃಹಲಕ್ಷ್ಮೀ ಯೋಜನೆಯ 6ನೇ ಕಂತಿನ ಹಣ ನೋಂದಣಿ ಮಾಡಿಸಿದ ಎಲ್ಲಾ ಮಹಿಳೆಯರ ಖಾತೆಗೆ ಜಮೆಯಾಗಿದೆ. ನಿಮಗೂ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಮಹಿಳೆಯರು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ಮಾಹಿತಿ.

ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಿದ ಕೆಲವು ಮಹಿಳೆಯರಿಗೆ ತಾಂತ್ರಿಕ ಕಾರಣಗಳಿಂದ 4 ಮತ್ತು 5ನೇ ಕಂತಿನ ಹಣ ಜಮೆಯಾಗಿರಲಿಲ್ಲ. ಆದರೆ ಪ್ರಸಕ್ತ 6 ನೇ ಕಂತಿನಲ್ಲಿ ನೋಂದಣಿ ಮಾಡಿಸಿದ ಬಹುತೇಕ ಎಲ್ಲಾ ಮಹಿಳೆಯರ ಖಾತೆಗೆ ಗೃಹಲಕ್ಷ್ಮೀ ಯೋಜನೆಯ (Gruha lakshmi money credited)6ನೇ ಕಂತಿನ ಹಣ ಜಮೆಯಾಗಿದೆ.

ನಿಮಗೆಷ್ಟು ಕಂತುಗಳು ಗೃಹಲಕ್ಷ್ಮೀ ಹಣ ಜಮೆಯಾಗಿದೆ?

ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿದವರು ಮೊಬೈಲ್ ನಲ್ಲಿ ತಮಗೆ ಹಣ ಜಮೆಯಾಗಿದೆಯೋ ಇಲ್ಲವೋ ಎಂಬದನ್ನು ಚೆಕ್ ಮಾಡಬಹುದು.

ಸ್ಟೇಟಸ್ ಚೆಕ್ ಮಾಡಲು ಈ

https://mahitikanaja.karnataka.gov.in/Gruhalakshmi/GuhalakshmiStatus?ServiceId=5630&Type=SP&DepartmentId=3136

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಗೃಹಲಕ್ಷ್ಮೀ ಯೋಜನೆಯ ಸ್ಟೇಟಸ್ ಚೆಕ್ ಮಾಡುವ ಪೇಜ್ ಓಪನ್ ಆಗುತ್ತದೆ. ಅಲ್ಲಿ ನಿಮ್ಮ ರೇಶನ್ ಕಾರ್ಡ್ ನಂಬರ್ ಹಾಕಿದ ನಂತರ Submit ಮೇಲೆ ಕ್ಲಿಕ್ ಮಾಡಬೇಕು. ಇದಾದ ನಂತರ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮಗೆ  ಇಲ್ಲಿಯವರೆಗೆ ಎಷ್ಟು ಕಂತುಗಳು ಜಮೆಯಾಗಿದೆ? ಯಾವ ದಿನಾಂಕದಂದು ಯಾವ ಯಾವ ತಿಂಗಳು ಎಷ್ಟು ಹಣ ಜಮೆಯಾಗಿದೆ ಎಂಬ ಸಂಪೂರ್ಣ ಮಾಹಿತಿ ಕಾಣಿಸುತ್ತದೆ.

ಯಾವ ಕಾರಣದಿಂದ ಕೆಲವು ಮಹಿಳೆಯರ ಖಾತೆಗೆ 4 ಮತ್ತು 5ನೇ ಕಂತಿನ ಹಣ ಜಮೆಯಾಗಿರಲಿಲ್ಲ?

ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಿದ ರಾಜ್ಯದ ಸಹಸ್ರಾರು ಮಹಿಳೆಯರು ಮಾಸಿಕ ತಲಾ 2 ಸಾವಿರ ರೂಪಾಯಿ ಪಡೆಯುವುದರಿಂದ ವಂಚಿತರಾಗಿರುವುದನ್ನು ಗಂಭೀರವಾಗಿ ಪರಿಗಣಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ (ಇಡಿಸಿಎಸ್) ನಿರ್ದೇಶನಾಲಯದೊಂದಿಗೆ ಸಭೆ ನಡೆಸಿ ಸಮಸ್ಯೆ ಪರಿಹರಿಸಲು ಮುಂದಾಗಿದೆ.

ಇದನ್ನೂ ಓದಿ :  ಜಮೀನಿಗೆ ಹೋಗಲು ಕಾಲುದಾರಿ ಬಂಡಿದಾರಿ ಇದೆಯೇ? ಇಲ್ಲೇ ಚೆಕ್ ಮಾಡಿ

ಗೃಹಲಕ್ಷ್ಮೀ ಯೋಜನೆಗೆ ನೋಂದಣಿಯಾಗಿದ್ದು, ವಾಸ್ತವವಾಗಿ ತೆರಿಗೆ ಪಾವತಿಸದಿದ್ದರೂ ಐಟಿ (ಆದಾಯ ತೆರಿಗೆ) ಅಥವಾ ಜಿ.ಎಸ್.ಟಿ (ಸರಕು ಮತ್ತು ಸೇವಾ ತೆರಿಗೆ) ತೆರಿಗೆದಾರರೆಂದು ಡಿಬಿಟಿ ಪೋರ್ಟಲ್ ನಲ್ಲಿ ತೋರಿಸುತ್ತಿತ್ತು. ಇದರಿಂದಾಗಿ ಯೋಜನೆಗೆ ಫಲಾನುಭವಿಗಳಾಗಲು ನೋಂದಣಿ ಮಾಡಿಸಿ ಆರು ತಿಂಗಳಾಗಿದ್ದರೂ ಬಹಳಷ್ಟು ಮಹಿಳೆಯರು ಸರ್ಕಾರದಿಂದ ಹಣ ಪಡೆಯಲು ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ (ಇಡಿಸಿಎಸ್) ನಿರ್ದೇಶನಾಲಯದೊಂದಿಗೆ ಸಭೆ ನಡೆಸಿ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಇಲಾಖೆ ಕಾರ್ಯೋನ್ಮುಖವಾಗಿದೆ.

Leave a Comment