Gruhalakshmi scheme installment released : ಗೃಹಲಕ್ಷ್ಮೀ ಯೋಜನೆಯ ಎರಡನೇ ಕಂತಿನ ಹಣ ಹಂತಹಂತವಾಗಿ ಬಿಡುಗಡೆ ಮಾಡಲಾಗುತ್ತಿದೆ. ಅತೀ ಶೀಘ್ರದಲ್ಲಿ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗಲಿದೆ ಎಂದು ಸಚಿವ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.
ಗೃಹಲಕ್ಷ್ಮೀ ಯೋಜನೆಗೆ ಎದುರಾಗಿರುವ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸಬೇಕು. ಬಾಕಿ ಉಳಿದ ಫಲಾನುಭವಿಗಳಿಗೆ ಶೀಘ್ರ ಹಣ ತಲುಪಿಸಬೇಕು. ಇನ್ನೂ ಕೆಲವರಿಗೆ ಎರಡನೇ ಕಂತಿನ ಹಣ ಜಮೆಯಾಗಿಲ್ಲ. ಹಂತ ಹಂತವಾಗಿ ಉಳಿದ ಫಲಾನುಭವಿಗಳಿಗೆ ಹಣ ಬಿಡುಗಡೆಯಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.
ವಿಧಾನಸೌಧದ ಕಚೇರಿಯಲ್ಲಿ ಗುರುವಾರ ನಡೆದ ಗೃಹಲಕ್ಷ್ಮೀ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ತಾಂತ್ರಿಕ ಕಾರಣಗಳಿಂದ ಸಮಸ್ಯೆ ಎದುರಿಸುತ್ತಿರುವ ಫಲಾನುಭವಿಗಳ ಖಾತೆಗೆ ಅತೀ ಶೀಘ್ರ ಹಣ ಸಂದಾಯ ಮಾಡಬೇಕೆಂದು ಸಂಬಂಧಿಸಿದ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕೆಂದು ಸೂಚಿಸಿದ್ದಾರೆ.
Gruhalakshmi scheme installment released ಈ ಪಟ್ಟಿಯಲ್ಲಿದ್ದವರಿಗೆ ಗೃಹಲಕ್ಷ್ಮೀ ಯೋಜನೆಯ ಹಣ ಜಮೆಃ ನಿಮ್ಮ ಹೆಸರು ಚೆಕ್ ಮಾಡಿ
ಗೃಹಲಕ್ಷ್ಮೀ ಯೋಜನೆಯ ಹಣ ಯಾರಿಗೆ ಜಮೆಯಾಗುತ್ತದೆ ಎಂಬುದನ್ನು ಚೆಕ್ ಮಾಡಲು ಈ
https://ahara.kar.nic.in/Home/EServices
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ e- Ration card ಮೇಲೆ ಕ್ಲಿಕ್ ಮಾಡಬೇಕು. ನಂತರ ಕೆಲವು ಆಯ್ಕೆಗಳು ಕಾಣಿಸುತ್ತವೆ. ಅದರಲ್ಲಿ Show village list (ಹಳ್ಳಿ ಪಟ್ಟಿ) ಮೇಲೆ ಕ್ಲಿಕ್ ಮಾಡಬೇಕು. ನಂತರ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಕಾಣುವ ವಿಲೇಜ್ ಲಿಸ್ಟ್ ಕೆಳಗಡೆ ನಿಮ್ಮ (District) ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ನಂತರ (Taluk) ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ನಂತರ (Gram Panchayat) ಗ್ರಾಮ ಪಂಚಾಯತ್ ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ನಿಮ್ಮ (village) ಊರು ಆಯ್ಕೆ ಮಾಡಿಕೊಳ್ಳಬೇಕು. ನಂತರ Go ಮೇಲೆ ಕ್ಲಿಕ್ ಮಾಡಬೇಕು. ಆಗ ಪಡಿತರ ಚೀಟಿ ಹೊಂದಿರುವ ಫಲಾನುಭವಿಗಳ ಪಟ್ಟಿ ಕಾಣಿಸುತ್ತದೆ. ಅಲ್ಲಿ ಕಾಣುವ ಪಡಿತರ ಚೀಟಿಯಲ್ಲಿ ಮಹಿಳೆ ಕುಟುಂಬದ ಮುಖ್ಯಸ್ಥರೆಂದು ನಮೂದಿಸಿರಬೇಕು. ಆ ಫಲಾನುಭವಿಗಳ ಖಾತೆಗೆ ಮಾತ್ರ ಹಣ ಜಮೆ ಮಾಡಲಾಗುವುದು.
ದಾಖಲೆ ಸರಿಯಿದ್ದರೂ ಮಹಿಳೆಯರ ಖಾತೆಗೆ ಹಣ ತಲುಪಿಲ್ಲ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಜನರ ಕಲ್ಯಾಣಕ್ಕಾಗಿ ಐದು ಯೋಜನೆಗಳನ್ನು ಜಾರಿಗೆ ತರಲಾಗಿತ್ತು. ಅದರಲ್ಲಿ ಗೃಹಲಕ್ಷ್ಮೀ ಯೋಜನೆಯ ಪ್ರಮುಖವಾದ ಯೋಜನೆಯಾಗಿದೆ. ಒಂದು ತಿಂಗಳು ಮಾತ್ರ ಮೊದಲ ಕಂತಿನ ಹಣ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗಿತ್ತು. ಆದರೆ ನಂತರ ಎರಡನೇ ಕಂತಿನ ಹಣ ಕೆಲವು ಫಲಾನುಭವಿಗಳ ಖಾತೆಗೆ ಜಮೆಯಾಗಿದ್ದರೆ ಇನ್ನೂ ಕೆಲವರಿಗೆ ಹಣ ಜಮೆಯಾಗಿಲ್ಲ.
ಇದನ್ನೂ ಓದಿ : ನಿಮ್ಮ ಜಮೀನಿಗೆ ಹೋಗಲು ದಾರಿಯಿದೆಯೋ ಇಲ್ಲವೋ? ಮೊಬೈಲ್ ನಲ್ಲೇ ಚೆಕ್ ಮಾಡಿ
ಈಗಾಗಲೇ ಮೂರು ಕಂತಿನ ಹಣ ಜಮೆಯಾಗಬೇಕಿತ್ತು. ಕೂಡಲೇ ಎಲ್ಲಾ ಫಲಾನುಭವಿಗಳ ಖಾತೆಗೆ ಶೀಘ್ರ ಹಣ ಜಮೆ ಮಾಡಬೇಕೆಂದು ಮಹಿಳಾ ಫಲಾನುಭವಿಗಳು ಒತ್ತಾಯಿಸುತ್ತಿದ್ದಾರೆ.
ದಾಖಲೆ ಸರಿಯಿದ್ದರೂ ಹಣ ಜಮೆಯಾಗಿಲ್ಲ
ಗೃಹಲಕ್ಷ್ಮೀ ಯೋಜನೆಗೆ ಎಲ್ಲಾ ಅರ್ಹತೆಗಳು ಹೊಂದಿದ್ದರೂ ಸಹ ಯೋಜನೆಯ ಹಣ ಜಮೆಯಾಗುತ್ತಿಲ್ಲ. ಎಲ್ಲಾ ದಾಖಲೆಗಳು ಸರಿಯಿದ್ದರೂ ಸಹ ಕೆಲವು ಫಲಾನುಭವಿಗಳು ಬ್ಯಾಂಕಿಗೆ ಅಲೆದಾಡುತ್ತಿದ್ದಾರೆ. ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಜೋಡಣೆ ಸೇರಿದಂತೆ ಎಲ್ಲವೂ ಸರಿಯಿದ್ದರೂ ಹಣ ಜಮೆಯಾಗುತ್ತಿಲ್ಲ. ಹೀಗಾಗಿ ಮಹಿಳಾ ಫಲಾನುಭವಿಗಳು ನಿರಾಶೆಯಾಗಿದ್ದಾರೆ. ಅಕ್ಟೋಬರ್ ತಿಂಗಳಲ್ಲಿ ಹಣ ಜಮೆಯಾಗದವರಿಗೆ ದೀಪಾವಳಿ ಹಬ್ಬಕ್ಕಿಂತ ಮೊದಲು ಗೃಹಲಕ್ಷ್ಮೀ ಮನೆಗೆ ಬಂದರೆ ಮನೆಯಲ್ಲಿ ವಿಜೃಂಭಣೆಯಿಂದ ಲಕ್ಷ್ಮೀ ಪೂಜೆ ನೆರವೇರುವುದು.