Gruha lakshmi scheme ಗೃಹಲಕ್ಷ್ಮೀ ಯೋಜನೆಯ 12ನೇ ಕಂತಿನ ಹಣ ಬಿಡುಗಡೆಯಾಗಿದೆ. ಕೆಲವು ಮಹಿಳೆಯರ ಖಾತೆಗೆ ದಸರಾ ಹಬ್ಬದ ನಂತರ ಹಣ ಜಮೆಯಾಗಿದೆ. ಯಾರು ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಿದ್ದಾರೋ ಆ ಮಹಿಳೆಯರು ತಮ್ಮಮೊಬೈಲ್ ನಲ್ಲೇ ಸ್ಟೇಟಸ್ ಚೆಕ್ ಮಾಡಬಹುದು.
ಹೌದು, ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಇದು ಸಂತಸದ ಸುದ್ದಿಯಾಗಿದೆ. ಕಳೆದ ತಿಂಗಳು 12ನೇ ಕಂತಿನ ಹಣ ಜಮೆಯಾಯಿತು.ಈಗ ಕಳೆದ ತಿಂಗಳು ಯಾರು ಯಾರಿಗೆ ಹಣ ಜಮೆಯಾಗಿಲ್ಲವೋ ಅವರಿಗೂ 12 ನೇ ಕಂತಿನ ಹಣ ಜಮೆಯಾಗಿದೆ. ಕೆಲವು ತಾಂತ್ರಿಕ ಕಾರಣಗಳಿಂದ ಫಲಾನುಭವಿಗಳಿಗೆ ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗಿರಲಿಲ್ಲ. ಕೊನೆಗೂ ರಾಜ್ಯದ ಕೆಲವು ಜಿಲ್ಲೆಗಳ ಫಲಾನುಭವಿಗಳ ಖಾತೆಗೆ 12ನೇ ಕಂತಿನ ಹಣ ಜಮೆಯಾಯಿತು.
ಯಾರಿಗೆ ಜಮೆಯಾಯಿತು ಯಾರಿಗೆ ಜಮೆಯಾಗಿಲ್ಲ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಮಾಹಿತಿ.
ನಿಮ್ಮ ಬಳಿಯಿರುವ ರೇಶನ್ ಕಾರ್ಡ್ ನಂಬರ್ ಗೊತ್ತಿದ್ದರೆ ಸಾಕು, ಯಾರ ಸಹಾಯವೂ ಇಲ್ಲದೆ ಚೆಕ್ ಮಾಡಿಕೊಳ್ಳಬಹುದು.
ರೈತನ ಪ್ರಾಮಾಣಿಕ ಕಥೆ. ಈ ವೀಡಿಯೋ ನೋಡಿ ನೀವೂ ಲೈಕ್ ಮಾಡ್ತಿರಾ
ಈಗಾಗಲೇ ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ ನೋಂದಣಿ ಮಾಡಿಸಿದ ಫಲಾನುಭವಿಗಳ ಖಾತೆಗೆ ನಾಲ್ಕು ಕಂತುಗಳು ಜಮೆಯಾಗಿದೆ. ಈಗ ಐದನೇ ಕಂತು ಜಮೆಯಾಗಿದೆ. ನಿಮಗೆಷ್ಟು ಕಂತುಗಳು ಜಮೆಯಾಗಿದೆ? ಇಲ್ಲೇ ಚೆಕ್ ಮಾಡಿ.
Gruha lakshmi scheme 12 ನೇ ಕಂತಿನ ಸ್ಟೇಟಸ್ ಚೆಕ್ ಮಾಡುವುದು ಹೇಗೆ?
ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಿದ ಫಲಾನುಭವಿಗಳು ತಮಗೆ ಎಷ್ಟು ಕಂತುಗಳು ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಲು ಈ
https://mahitikanaja.karnataka.gov.in/Gruhalakshmi/GuhalakshmiStatus?ServiceId=5630&Type=SP&DepartmentId=3136
ಲಿಂಕ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ. ನಂತರ ಅಲ್ಲಿ ತೆರೆದುಕೊಳ್ಳುವ ಪೇಜ್ ನಲ್ಲಿ Details of Gruhalakshmi status ಕೆಳಗಡೆ ನಿಮ್ಮ ರೇಶನ್ ಕಾರ್ಡ್ ನಮೂದಿಸಬೇಕು. ನಂತರ submit ಮೇಲೆ ಕ್ಲಿಕ್ ಮಾಡಬೇಕು. ಆಗ ನೀವು ಯಾವ ದಿನಾಂಕದಂದು ಅರ್ಜಿ ಹಾಕಿದ್ದೀರಿ. ನಿಮ್ಮ ಅರ್ಜಿ ಸ್ವೀಕೃತವಾಗಿದೆಯೇ ಹಾಗೂ ಯಾವ ದಿನಾಂಕ ಅರ್ಜಿ ಸ್ವೀಕೃತವಾಗಿದೆ ಎಂಬ ಮಾಹಿತಿ ಕಾಣಿಸುತ್ತದೆ. ಅದರ ಮುಂದುಗಡೆ ಇರುವ Details ಮೇಲೆ ಕ್ಲಿಕ್ ಮಾಡಬೇಕು.
ಇದನ್ನೂ ಓದಿ : Baragala parihara ನನ್ನ ಖಾತೆಗೆ ಜಮೆ: ನಿಮಗೆಷ್ಟು ಜಮೆ? ಚೆಕ್ ಮಾಡಿ
ಆಗ ನಿಮಗೆ ಇಲ್ಲಿಯವರೆಗೆ ಎಷ್ಟು ಕಂತುಗಳು ಜಮೆಯಾಗಿದೆ. ಯಾವ ಯಾವ ತಿಂಗಳಲ್ಲಿ ಜಮೆಯಾಗಿದೆ. ಯಾವ ತಿಂಗಳ ಯಾವ ದಿನಾಂಕದಂದು ಜಮಯಾಗಿದೆ ಹಾಗೂ ಎಷ್ಟು ಹಣ ಜಮೆಯಾಗಿದೆ ಎಂಬ ಮಾಹಿತಿಯನ್ನು ಚೆಕ್ ಮಾಡಬಹುದು. ಇದಕ್ಕಾಗಿ ನಿಮ್ಮ ಬಳಿ ಫೋನ್ ಇದ್ದರೆ ಸಾಕು, ನಿಮ್ಮ ಫೋನ್ ಇಲ್ಲದಿದ್ದರೂ ನಿಮ್ಮ ಮನೆಯಲ್ಲಿರುವ ಇತರರ ಫೋನ್ ಬಳಸಿ ಸ್ಟೇಟಸ್ ಚೆಕ್ ಮಾಡಿಕೊಳ್ಳಬಹುದು.
Gruha lakshmi scheme ಗೆ ಇರುವ ಅರ್ಹತೆಗಳು
ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಿಕೊಂಡವರು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ವಿತರಿಸುವ ಅಂತ್ಯೋದಯ, ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿದ ಮಹಿಳೆ ಅರ್ಹರಾಗಿರುತ್ತಾರೆ. ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದಲ್ಲಿ ಒಂದು ಮಹಿಳೆಗೆ ಮಾತ್ರ ಯೋಜನೆ ಅನ್ವಯಿಸುತ್ತದೆ. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿದಾರರಾಗಿರಬೇಕು. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಜಿಎಸ್.ಟಿ ರಿಟರ್ನ್ಸ್ ಪಾವತಿದಾರರಾಗಿರಬಾರದು
ಗೃಹಲಕ್ಷ್ಮೀ ಯೋಜನೆಗೆ ಇನ್ನೂ ಮುಂದೆ ನೋಂದಣಿ ಮಾಡಿಸಿದ ಎಲ್ಲಾ ಮಹಿಳೆಯ ಖಾತೆಗೆ ಹಣ ಜಮೆಯಾಗಲಿದೆ. ಇದಕ್ಕಿಂತ ಮುಂಚಿತವಾಗಿ ಅರ್ಹತೆ ಪಡೆದಿದ್ದರೂ ಸಹ ತೆರಿಗೆ ಪಾವತಿದಾರರೆಂದು ತೋರಿಸಲಾಗುತ್ತಿತ್ತು.