Gruha lakshmi scheme money ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಿದ ಫಲಾನುಭವಿಗಳಿಗೆ ಈ ತಿಂಗಳ ಕೊನೆಯವರೆಗೆ 4ನೇ ಕಂತಿನ ಹಣ ಜಮೆಯಾಗಲಿದೆ. ಹಾಗಾದರೆ ಯಾರು ಯಾರಿಗೆ ಹಣ ಜಮೆಯಾಗಲಿದೆ ಎಂಬುದನ್ನು ಇಲ್ಲೇ ಚೆಕ್ ಮಾಡೋಣವೇ?
ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಿದ್ದೀರಾ? ನಿಮಗೆ ನೋಂದಣಿ ಮಾಡಿಸಿದ ನಂತರ ಹಣ ಜಮೆಯಾಗುತ್ತಿಲ್ಲವೇ? ನೀವು ಗೃಹಲಕ್ಷ್ಮೀ ಯೋಜನೆಗೆ ಅರ್ಹತೆ ಪಡೆದಿಲ್ಲವೇ? ನಿಮಗೆ ಹಣ ಜಮೆಯಾಗುತ್ತೋ ಇಲ್ಲಿವೋ ಎಂಬುದನ್ನು ನೋಡಲು ಎಲ್ಲಿಯೂ ಹೋಗಬೇಕಿಲ್ಲ. ಮನೆಯಲ್ಲಿಯೇ ಕುಳಿತು ತಮ್ಮ ಬಳಿಯಿರುವ ಮೊಬೈಲ್ ನಲ್ಲೇ ಕೇವಲ ಒಂದೇ ನಿಮಿಷದಲ್ಲಿ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಮಾಹಿತಿ.
Gruha lakshmi scheme money ಗೃಹಲಕ್ಷ್ಮೀ ಯೋಜನೆಯ ಯಾವ ಮಹಿಳೆಯರಿಗೆ ಜಮೆಯಾಗಲಿದೆ? ಚೆಕ್ ಮಾಡಿ
ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ ನೋಂದಣಿ ಮಾಡಿಸಿದ್ದರೆ ನಿಮ್ಮ ಹೆಸರು ಇಲ್ಲಿ ಇರಬೇಕು? ನಿಮ್ಮ ಹೆಸರು ಇದೆಯೇ? ಚೆಕ್ ಮಾಡಲು ಈ
https://ahara.kar.nic.in/Home/EServices
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಮೂರು ಲೈನ್ ಕಾಣುವುದರ ಮೇಲೆ ಕ್ಲಿಕ್ ಮಾಡಬೇಕು. ನಂತರ ಈ ರೇಶನ್ ಕಾರ್ಡ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಶೋ ವಿಲೇಜ್ ಲಿಸ್ಟ್ ಮೇಲೆ ಕ್ಲಿಕ್ ಮಾಡಬೇಕು. ನಂತರ ತೆರೆದುಕೊಳ್ಳುವ ಪೇಜ್ ನಲ್ಲಿ ನಿಮ್ಮ ಜಿಲ್ಲೆ, ತಾಲೂಕು, ಗ್ರಾಮ ಪಂಚಾಯತ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಊರು ಆಯ್ಕೆ ಮಾಡಿಕೊಂಡು ಗೋ ಮೇಲೆ ಕ್ಲಿಕ್ ಮಾಡಬೇಕು. ಆಗ ರೇಶನ್ ಕಾರ್ಡ್ ಹೊಂದಿರುವವರ ಪಟ್ಟಿ ಕಾಣಿಸುತ್ತದೆ. ಅಲ್ಲಿಮಹಿಳೆಯ ಹೆಸರು ಮೊದಲು ಇರಬೇಕು. ಮಹಿಳೆಯ ಹೆಸರು ಇದ್ದರೆ ಅವರು ಕುಟುಂಬದ ಮುಖ್ಯಸ್ಥರು ಹಾಗೂ ಆ ಮಹಿಳೆಯರ ಖಾತೆಗೆ ಹಣ ಜಮೆಯಾಗಿರುತ್ತದೆ.
ಗೃಹಲಕ್ಷ್ಮೀ ಯೋಜನೆಯ ಅರ್ಹತೆಗಳು
ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಸಿದರೆ ಸಾಲದು, ಈ ಯೋಜನೆಯ ಸೌಲಭ್ಯ ಪಡೆಯಲು ಕೆಲವು ಅರ್ಹತೆಗಳು ಹೊಂದಿರುವುದು ಕಡ್ಡಾಯವಾಗಿದೆ.
ಹೌದು, ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯುವ ವಿತರಿಸುವ ಅಂತ್ಯೋದಯ, ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿಯಾಗಿರುತ್ತಾರೆ. ಒಂದೇ ಕುಟುಂಬದಲ್ಲಿ ಒಬ್ಬರಿಗಿಂತ ಹೆಚ್ಚು ಮಹಿಳೆಯರಿದ್ದಲ್ಲಿ ಒಂದು ಮಹಿಳೆಗೆ ಮಾತ್ರ ಈ ಯೋಜನೆಯ ಲಾಭ ಸಿಗುತ್ತದೆ.
ಇದನ್ನೂ ಓದಿ : ಆಧಾರ್ ನಂಬರ್ ಹಾಕಿ ಮೊಬೈಲ್ ನಲ್ಲಿ ಸಾಲಮನ್ನಾ ಸ್ಟೇಟಸ್ ಚೆಕ್ ಮಾಡಿ
ಅರ್ಜಿದಾರರು ಸೇವಾ ಸಿಂಧು ಪೋರ್ಟಲ್ ಮೂಲಕವೇ ಅರ್ಜಿ ಸಲ್ಲಿಸಿರಬೇಕು. ಅರ್ಜಿದಾರರು ತಪ್ಪು ಮಾಹಿತಿ ನೀಡಿ ಸೌಲಭ್ಯ ಪಡೆದಿರುವುದು ಕುಂಡಬಂದಲ್ಲಿ ಈಗಾಗಲೇ ಪಾವತಿಸಲಾಗಿರುವ ಹಣವನ್ನು ಅರ್ಜಿದಾರರಿಂದ ವಸೂಲು ಮಾಡಲಾಗುವುದು ಮತ್ತು ಅಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಈ ಯೋಜನೆಯ ಸೌಲಭ್ಯ ಪಡೆಯಲು ಫಲಾನುಭವಿಯ ಬ್ಯಾಂಕ್ ಖಾತೆ ಮತ್ತು ಆಧಾರ್ ಕಾರ್ಡ್ ಗಳನ್ನು ಜೋಡಣೆ ಮಾಡಿರಬೇಕು.
ಗೃಹಲಕ್ಷ್ಮೀ ಯೋಜನೆಯ ಅನರ್ಹತೆಗಳು
ಕುಟುಂಬ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿದಾರರಾಗಿದ್ದರೆ ಅವರಿಗೆ ಹಣ ಜಮೆಯಾಗುವುದಿಲ್ಲ. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಜಿಎಸ್.ಟಿ ರಿಟರ್ನ್ಸ್ ಪಾವತಿದಾರರಾಗಿರಬಾರದು.
ಅಂತ್ಯೋದಯ ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿದ ಮಹಿಳೆ ಅರ್ಹಳಾಗಿರುತ್ತಾಳೆ. ಅರ್ಜಿ ಸಲ್ಲಿಸುವಾಗ ರೇಶನ್ ಕಾರ್ಡ್ ನೊಂದಿಗೆ ಯಜಮಾನಿ ಮತ್ತು ಆಕೆಯ ಪತಿಯ ಆಧಾರ್ ಕಾರ್ಡ್ ಪ್ರತಿ ಮತ್ತು ಯೋಜನೆಯ ನಗದು ಸೌಲಭ್ಯ ಪಡೆಯಲು ಇಚ್ಚಿಸುವ ಬ್ಯಾಂಕ್ ಖಾತೆಯ ಪಾಸ್ ಬುಕ್ ಪ್ರತಿ ಅಗತ್ಯವಿರುತ್ತದೆ. ತಡೆಹಿಡಿಯಲಾದ ಅಥವಾ ರದ್ದು ಗೊಳಿಸಲಾದ ಪಡಿತರ ಚೀಟಿಗಳನ್ನು ಯೋಜನೆಗೆ ಪರಿಗಣಿಸಲಾಗುವುದಿಲ್ಲ.