ಗೃಹಲಕ್ಷ್ಮೀ 13ನೇ ಕಂತಿನ ಹಣ ಯಾವಾಗ ಜಮೆ? ಇಲ್ಲೇ ಚೆಕ್ ಮಾಡಿ

Written by Ramlinganna

Published on:

Gruhalakshmi 13th installment check : ಗೃಹಲಕ್ಷ್ಮೀ ಯೋಜನೆಯ 13ನೇ ಕಂತಿನ ಹಣ ದೀಪಾವಳಿ ಹಬ್ಬದಲ್ಲಿ ಜಮೆಯಾಗಬಹುದೇ? ಈಗಾಗಲೇ 11 ಮತ್ತು 12 ನೇ ಕಂತಿನ ಹಣ ಫಲಾನಭವಿಗಳ ಖಾತೆಗೆ ಜಮೆಯಾಗಿದೆ. ಈಗ 13ನೇ ಕಂತಿನ ಹಣಕ್ಕಾಗಿ ಕಾಯುತ್ತಿರುವ ಮಹಿಳೆಯರಿಗೆ ದೀಪಾವಳಿ ಬೋನಸ್ ಕೊಟ್ಟರೆ ಮಹಿಳೆಯರ ಖುಷಿ ಖುಷಿಯಿಂದ ದೀಪಾವಳಿ ಹಬ್ಬ ಆಚರಿಸಬಹುದು.

ದಸರಾ ಹಬ್ಬದಲ್ಲಿ ಅಂದರೆ ಅಕ್ಟೋಬರ್ ತಿಂಗಳಲ್ಲಿ  ಮಹಿಳೆಯರ ಖಾತೆಗೆ ಜುಲೈ ಮತ್ತು ಆಗಸ್ಟ್ ತಿಂಗಳ ಕಂತಿನ ಹಣ ಜಮೆ ಮಾಡಲಾಗಿತ್ತು. ಈಗ ದೀಪಾವಳಿ ಹಬ್ಬಕ್ಕೆ ಸೆಪ್ಟೆಬರ್ ತಿಂಗಳ ಕಂತಿನ ಹಣ ಜಮೆಯಾಗುಬಹುದೇ ಎಂಬ ಖುಷಿಯಲ್ಲಿದ್ದಾರೆ ಮಹಿಳೆಯರು

Gruhalakshmi 13th installment check ಯಾವ ಉದ್ದೇಶಕ್ಕಾಗಿ ಈ ಯೋಜನೆ ಜಾರಿಗೆ ತರಲಾಗಿದೆ?  

ಕುಟುಂಬ ನಿರ್ವಹಣೆಯಲ್ಲಿ ಕುಟುಂಬ ಯಜಮಾನಿಯ ಪಾತ್ರ ಪ್ರಮುಖವಾಗಿದ್ದು, ಯಜಮಾನಿಯು ಆರ್ಥಿಕವಾಗಿ ಸಬಲೀಕರಣಗೊಂಡಲ್ಲಿ ಕುಟುಂಬದ ನಿರ್ವಹಣೆ ಉತ್ತಮ ಗುಣಮಟ್ಟದಲ್ಲಿರುತ್ತದೆ. ಹಾಗಾಗಿ ಕುಟುಂಬದ ಯಜಮಾನಿ ಮಹಿಳೆಯ ಖಾತೆಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿಗಳನ್ನು ನೀಡುವ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೆ ತರಲಾಗಿದೆ.

ಗೃಹಲಕ್ಷ್ಮೀ ಯೋಜನೆಯ ಹಣ ನಿಮಗೆಷ್ಟು ಕಂತುಗಳು ಜಮೆಯಾಗಿದೆ? ಇಲ್ಲೇ ಚೆಕ್ ಮಾಡಿ

ಗೃಹಲಕ್ಷ್ಮೀ ಯೋಜನೆಯ ಹಣ ಇಲ್ಲಿಯವರೆಗೆನಿಮ್ಮ ಖಾತೆಗೆ ಎಷ್ಟು ಕಂತುಗಳು ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಲು ಈ

https://mahitikanaja.karnataka.gov.in/home

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.ಆಗ ನಿಮಗೆ ತೆರೆದುಕೊಳ್ಳುವ ಪೇಜ್ ನಲ್ಲಿ Guaranteed schemes ಕಾಣಿಸುತ್ತದೆ. ಅದರ ಮೇಲೆ ಕ್ಲಿಕ್ ಮಾಡಬೇಕು.

ನಂತರ ಅಲ್ಲಿ ತೆರೆದುಕೊಳ್ಳುವ ಪೇಜ್ ನಲ್ಲಿ  Details of Gruhalakshmi status ಕೆಳಗಡೆ ನಿಮ್ಮ ರೇಶನ್ ಕಾರ್ಡ್ ನಮೂದಿಸಬೇಕು.  ನಂತರ submit ಮೇಲೆ ಕ್ಲಿಕ್ ಮಾಡಬೇಕು. ಆಗ ನೀವು ಯಾವ ದಿನಾಂಕದಂದು ಅರ್ಜಿ ಹಾಕಿದ್ದೀರಿ. ನಿಮ್ಮ ಅರ್ಜಿ ಸ್ವೀಕೃತವಾಗಿದೆಯೇ ಹಾಗೂ ಯಾವ ದಿನಾಂಕ ಅರ್ಜಿ ಸ್ವೀಕೃತವಾಗಿದೆ ಎಂಬ ಮಾಹಿತಿ ಕಾಣಿಸುತ್ತದೆ. ಅದರ ಮುಂದುಗಡೆ ಇರುವ Details ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಇಲ್ಲಿಯವರೆಗೆ ಎಷ್ಟು ಕಂತುಗಳು ಜಮೆಯಾಗಿದೆ. ಯಾವ ಯಾವ ತಿಂಗಳಲ್ಲಿ ಜಮೆಯಾಗಿದೆ. ಯಾವ ತಿಂಗಳ ಯಾವ ದಿನಾಂಕದಂದು ಜಮಯಾಗಿದೆ ಹಾಗೂ ಎಷ್ಟು ಹಣ ಜಮೆಯಾಗಿದೆ ಎಂಬ ಮಾಹಿತಿಯನ್ನು ಚೆಕ್ ಮಾಡಬಹುದು. ಇದಕ್ಕಾಗಿ ನಿಮ್ಮ ಬಳಿ ಫೋನ್ ಇದ್ದರೆ ಸಾಕು, ನಿಮ್ಮ ಫೋನ್ ಇಲ್ಲದಿದ್ದರೂ ನಿಮ್ಮ ಮನೆಯಲ್ಲಿರುವ ಇತರರ ಫೋನ್ ಬಳಸಿ ಸ್ಟೇಟಸ್ ಚೆಕ್ ಮಾಡಿಕೊಳ್ಳಬಹುದು.

ತುಳಸಿ ಗಿಡ ಮನೆಯ ಯಾವ ದಿಕ್ಕಿನಲ್ಲಿಡಬೇಕು? ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ವೀಡಿಯೋ ಮಾಹಿತಿ ನೋಡಿ

Tulasi pooja

 

ಗೃಹಲಕ್ಷ್ಮೀ ಯೋಜನೆಗೆ ಎಲ್ಲಿ ನೋಂದಣಿ ಮಾಡಿಸಬೇಕು?

ಇಲ್ಲಿಯವರೆಗೂ ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಕೊಳ್ಳದ ಫಲಾನುಭವಿಗಳು ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಅಥವಾ ಸೇವಾ ಸಿಂಧು ಕೇಂದ್ರಗಳಲ್ಲಿ ನೋಂದಾಯಿಸಿಕೊಳ್ಳಬಹುದು.

ಗೃಹಲಕ್ಷ್ಮೀ ಯೋಜನೆಗೆ ನೀವು ಅರ್ಹತೆ ಪಡೆದಿದ್ದೀರಾ? ಇಲ್ಲಿದೆ ಮಾಹಿತಿ

ಗೃಹಲಕ್ಷ್ಮೀ ಯೋಜನೆಗೆ ನೀವು ಅರ್ಹತೆ ಪಡೆದಿದ್ದಿರಾ? ನಿಮಗೇಕೆ ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗಿಲ್ಲ. ನೋಂದಣಿ  ಮಾಡಿಸಿದರೂ ನಿಮಗೇಕೆ ಹಣ ಜಮೆಯಾಗಿಲ್ಲ ಎಂಬುದರ ಮಾಹಿತಿ ಇಲ್ಲಿದೆ.

ಇದನ್ನೂ ಓದಿ Ration card list ನಿಂದ ಯಾರ ಹೆಸರು ಡಿಲೀಟ್ ಆಗಿದೆ? ಚೆಕ್ ಮಾಡಿ

ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯುವ ವಿತರಿಸುವ ಅಂತ್ಯೋದಯ, ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿಯಾಗಿರುತ್ತಾರೆ.

ಒಂದೇ ಕುಟುಂಬದಲ್ಲಿ ಒಬ್ಬರಿಗಿಂತ ಹೆಚ್ಚು ಮಹಿಳೆಯರಿದ್ದಲ್ಲಿ ಒಂದು ಮಹಿಳೆಗೆ ಮಾತ್ರ ಈ ಯೋಜನೆಯ ಲಾಭ ಸಿಗುತ್ತದೆ.

ಕುಟುಂಬ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿದಾರರಾಗಿದ್ದರೆ ಅವರಿಗೆ ಹಣ ಜಮೆಯಾಗುವುದಿಲ್ಲ.

Leave a Comment