ಗೃಹಲಕ್ಷ್ಮೀ ಮುಂದಿನ ಕಂತು ಯಾವಾಗ ಯಾರಿಗೆ ಜಮೆಯಾಗಲಿದೆ ಇಲ್ಲಿದೆ ಮಾಹಿತಿ

Written by Ramlinganna

Published on:

Gruhalakshmi 25th installment date :  ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಿದ ಮಹಿಳೆಯರಿಗೆ ಮಂದಿನ ಕಂತು ಅಂದರೆ 25ನೇ ಕಂತಿನ ಹಣ ಯಾರು ಯಾರಿಗೆ ಹಾಗೂ ಯಾವಾಗ ಜಮೆಯಾಗಲಿದೆ ಎಂಬುದನ್ನು ಮಹಿಳೆಯರು ಇಲ್ಲೇ ತಿಳಿದುಕೊಳ್ಳಬಹುದು. ಗೃಹಲಕ್ಷ್ಮೀ ಯೋಜನೆಯ 25ನೇ ಕಂತಿನ ಹಣ ಮುಂದಿನ ವಾರ ಮಹಿಳೆಯರ ಖಾತೆಗೆ ಜಮೆಯಾಗಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ರಾಜ್ಯ ಸರ್ಕಾರವು ಜಾರಿಗೆ ತಂದಿರುವ ವಿವಿಧ ಯೋಜನೆಗಳಲ್ಲಿ ಗೃಹಲಕ್ಷ್ಮೀ ಯೋಜನೆ ಹೆಚ್ಚು ಪ್ರಸಿದ್ಧಿ ಪಡೆದಿದೆ. ಹೌದು, ಮಹಿಳೆಯರ ಅಚ್ಚುಮೆಚ್ಚಿನ ಯೋಜನೆಗಳಲ್ಲಿ ಗೃಹಲಕ್ಷ್ಮೀ ಯೋಜನೆಯೂ ಒಂದಾಗಿದೆ.

Gruhalakshmi 25th installment date  ಗೃಹಲಕ್ಷ್ಮೀ ಯೋಜನೆಯ ಎಷ್ಟು ಕಂತುಗಳ ಹಣ ನಿಮ್ಮ ಖಾತೆಗೆ ಜಮೆಯಾಗಿದೆ ಹೀಗೆ ಚೆಕ್ ಮಾಡಿ

ಗೃಹಲಕ್ಷ್ಮೀ ಯೋಜನೆ ಆರಂಭವಾದಾಗಿನಿಂದ ಇಲ್ಲಿಯವರೆಗೆ ನಿಮ್ಮ ಖಾತೆಗೆ ಎ ಷ್ಟು ಕಂತುಗಳ ನಿಮ್ಮ ಖಾತೆಗೆ ಜಮೆಯಾಗಿದೆ ಅಥವಾ ಸ್ಥಗಿತಗೊಂಡಿದೆ ಎಂಬುದನ್ನು ತಮ್ಮ ಬಳಿಯಿರುವ ಮೊಬೈಲ್ ನಲ್ಲಿಯೇ ಚೆಕ್ ಮಾಡಬಹುದು.  ಚೆಕ್ ಮಾಡಲು ಈ

https://play.google.com/store/apps/details?id=com.dbtkarnataka&hl=en_IN

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮ್ಮ ಆಧಾರ್ ಕಾರ್ಡ್ ನಂಬರ್ ನಮೂದಿಸಬೇಕು. ಇದಾದ ನಂತರ ಗೆಟ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು.

ಇದನ್ನೂ ಓದಿ : ರೈತರಿಗೆ ಗುಡ್ ನ್ಯೂಸ್ ನಿಮ್ಮ ಜಮೀನಿನ ಇ ಸ್ಕೇಚ್ ಮೊಬೈಲ್ ನಲ್ಲಿ ಹೀಗೆ ಪಡೆಯಿರಿ

ನಿಮ್ಮ ಮೊಬೈಲಿಗೆ ಬಂದ ಓಟಿಪಿಯನ್ನು ನಮೂದಿಸಬೇಕು. ನಂತರ ಪೇಮೆಂಟ್ ಸ್ಟೇಟಸ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಗೃಹಲಕ್ಷ್ಮೀ ಬಟನ್ ಒತ್ತಿದರೆ ಸಾಕು ನಿಮ್ಮ ಖಾತೆಗೆ ಹಣ ಜಮೆಯಾಗಿದೆಯೋ ಇಲ್ಲವೋ ಎಂಬ ಮಾಹಿತಿ ಸಿಗಲಿದೆ.

ಒಂದು ಕುಟುಂಬದಲ್ಲಿ ಯಾವ ಯಾವ ಮಹಿಳೆಯಿರೆಗ ಹಣ ಜಮೆಯಾಗಲಿದೆ.?

ಗೃಹಲಕ್ಷ್ಮೀ ಯೋಜನೆಗೆ ಸರ್ಕಾರವು ಅನೇಕ ಷರತ್ತುಗಳನ್ನು ವಿಧಿಸಿದೆ. ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಯೋಜನೆಯ ಲಾಭ ಸಿಗಲಿದ್ದು, ಅರ್ಜಿ ಸಲ್ಲಿಕೆ ಹೇಗೆ ಯಾರು ಅರ್ಹರು ಯಾವ ಯಾವ ದಾಖಲೆ ಹೊಂದಿರಬೇಕು ಎಂಬ ನಿಮ್ಮ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ.

ಗೃಹಲಕ್ಷ್ಮೀ ಯೋಜನೆಗೆ ಯಾರು ಅರ್ಹರು?

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ವಿತರಿಸುವ ಅಂತ್ಯೋದಯ, ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿಗೆ ಎಂದು ನಮೂದಿಸಿರುವ ಮಹಿಳೆ ಮಾತ್ರ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಯಾಗಲು ಅರ್ಹರಾಗಿರುತ್ತಾರೆ.

ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಬೇಕಾದರೆ ರೇಶನ್ ಕಾರ್ಡ್ ಹೊಂದಿರಬೇಕು. ಬ್ಯಾಂಕ್ ಪಾಸ್ ಬುಕ್ ಹೊಂದಿರಬೇಕು. ಆಧಾರ್ ಕಾರ್ಡ್ ಇದ್ದರೆ ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಒಂದು ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದರೆ ಏನಾಗುತ್ತದೆ?

ಕುಟುಂಬದ ಎಲ್ಲಾ ಮಹಿಳೆಯರು ಅರ್ಜಿ ಸಲ್ಲಿಸಲು ಅರ್ಹತೆಹೊಂದಿರುವುದಿಲ್ಲ. ಒಂದು ಕುಟುಂಬದಲ್ಲಿ ಒಬ್ಬ ಮಹಿಳೆ ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಮಹಿಳೆಯರಿಗಾಗಿ ಜಾರಿಗೆ ತಂದ ಗೃಹಲಕ್ಷ್ಮೀ ಯೋಜನೆಯ ಮುಖ್ಯ ಉದ್ದೇಶವೇನು?

ಗೃಹಲಕ್ಷ್ಮೀ ಯೋಜನೆಯು ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾಗಿದ್ದು,ಕುಟುಂಬದ ಮುಖ್ಯಸ್ಥೆಯಾಗಿರುವ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ತಿಂಗಳಿಗೆ 2 ಸಾವಿರ ರೂಪಾಯಿ ಸಹಾಯಧನವನ್ನು ನೇರ ನಗದು ವರ್ಗಾವಣೆ ಮೂಲಕ ನೀಡಲಾಗುತ್ತಿದೆ. ಅಂದರೆ ಡಿಬಿಟಿ ಮೂಲಕ ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡಲಾಗವುದು. ಈ ಯೋಜನೆಯು ಕುಟುಂಬದ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಮತ್ತು ಮಹಿಳೆಯರಿಗೆ ಸ್ವಾವಲಂಬನೆ ತರಲು ಉದ್ದೇಶಿಸಿದ್ದು, ಬಿಪಿಎಲ್, ಎಪಿಎಲ್ ಹಾಗೂ ಅಂತ್ಯೋದಯ ಪಡಿತರ ಚೀಟಿ ಹೊಂದಿರುವ ಕುಟುಂಬಗಳ ಮಹಿಳಾ ಮುಖ್ಯಸ್ಥರ ಖಾತೆಗೆ ಹಣ ಜಮೆ ಮಾಡಲು 2023ರ ಜುಲೈ 19 ರಂದು ಯೋಜನೆ ಆರಂಬವಾಗಿದೆ.

Leave a Comment