gruhalakshmi amount credit in week : ರಾಜ್ಯದ ಮಹಿಳೆಯರಿಗೆ ಸಿಹಿ ಸುದ್ದಿ ಸಿಕ್ಕಿದೆ. ಹೌದು, ಇನ್ನೊಂದು ವಾರದಲ್ಲಿ ಗೃಹಲಕ್ಷ್ಮೀ ಯೋಜನೆ ಹಣ ಫಲಾನುಭವಿಗಳ ಖಾತೆಗೆ ಸಂದಾಯವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದುವರೆಗೆ ಬೆಂಗಳೂರಿನ ಕೇಂದ್ರ ಕಚೇರಿ ಮೂಲಕ ಗೃಹಲಕ್ಷ್ಮೀ ಹಣ ಬಿಡುಗಡೆ ಮಾಡಲಾಗುತ್ತಿತ್ತು. ಇದನ್ನು ವಿಕೇಂದ್ರೀಕರಣ ಮಾಡುವ ನಿಟ್ಟಿನಲ್ಲಿ ತಾಲೂಕು ಪಂಚಾಯತಿ ಮೂಲಕ ಹಣ ಬಿಡುಗಡೆ ಮಾಡಿ, ನಂತರ ನಮ್ಮ ಇಲಾಖೆ ಶಿಶು ಯೋಜನಾಭಿವೃದ್ಧಿ ಅಧಿಕಾರಿ (ಸಿಡಿಪಿಒ) ಖಾತೆಗೆ ಹಣ ವರ್ಗಾವಣೆ ಮಾಡಲಾಗುತ್ತದೆ. ನಂತರ ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡಲಾಗುವುದು ಎಂದು ವಿವರಿಸಿದರು.
ರಸ್ತೆ ಅಪಘಾತದಿಂದಾಗಿ ವಿಶ್ರಾಂತಿಯಲ್ಲಿ ಇದ್ದುದ್ದರಿಂದ ಹಣ ಸಂದಾಯ ಸ್ವಲ್ಪ ವಿಳಂಬವಾಯಿತು. ಈಗಾಗಲೇ ಹಣ ಬಿಡುಗಡೆಗೆ ಅಧಿಕಾರಿಗಳಿಗೆ ಆದೇಶ ನೀಡಲಾಗಿದೆ ಎಂದು ಹೆಬ್ಬಾಳಕರ್ ತಿಳಿಸಿದರು.
ವಿರೋಧ ಪಕ್ಷದವರಿಗೆ ಟೀಕೆ ಮಾಡುವುದನ್ನು ಬಿಟ್ಟರೆ ಬೇರೇನೂ ಬರುವುದಿಲ್ಲ. ಗ್ಯಾರೆಂಟಿ ಯೋಜನೆಗಳಿಂದ ಸರ್ಕಾರ ದಿವಾಳಿಯಾಗುತ್ತದೆ ಎಂದು ಹೇಳಿಕೊಂಡು ನಮ್ಮ ಯೋಜನೆಗಳನ್ನೇ ಕಾಪಿ ಮಾಡುತ್ತಿದ್ದಾರೆ ಎಂದರು.
gruhalakshmi amount credit in week ಗೃಹಲಕ್ಷ್ಮೀ ಫಲಾನುಭವಿಗಳ ಅರ್ಹತೆ
ಗೃಹಲಕ್ಷ್ಮೀ ಯೋಜನೆಯ ಹಣ ಪಡೆಯಲು ಯಾರು ಯಾರು ಅರ್ಹತೆ ಪಡೆದಿದ್ದಾರೆ ಎಂಬ ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ.
ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗಲು ಬಿಪಿಎಲ್ ಅಥವಾ ಎಪಿಎಲ್ ಕಾರ್ಡ್ ಹೊಂದಿರಬೇಕು. ಈ ರೇಶನ್ ಕಾರ್ಡ್ ನಲ್ಲಿ ಮಹಿಳೆಯ ಹೆಸರು ಕುಟುಂಬದ ಯಜಮಾನಿ ಎಂದು ಬರೆದಿರಬೇಕು.
ಇದನ್ನೂ ಓದಿ : ನಿಮ್ಮ ಜಮೀನಿನ ಸರ್ವೆ ನಂಬರ್ ಮ್ಯಾಪ್ ಹೀಗೆ ಡೌನ್ಲೋಡ್ ಮಾಡಿ
ಆದಾಯ ತೆರಿಗೆ ಪಾವತಿ ಮಾಡುವವರ ಕುಟುಂಬದವರಿಗೆ ಗೃಹಲಕ್ಷ್ಮೀ ಯೋಜನೆಯ ಹಣ ಸಿಗುವುದಿಲ್ಲ. ಸರ್ಕಾರಿ ಉದ್ಯೋಗಿಗಳಿಗೆ, ಪೆನ್ಶನ್ ಪಡೆಯುವವರಿಗೆ ಯೋಜನೆಯ ಲಾಭ ಸಿಗುವುದಿಲ್ಲ. ಜಿಎಸ್.ಟಿ ಪಾವತಿ ಮಾಡುತ್ತಿರುವ ಮಹಿಳೆಯರಿಗೂ ಯೋಜನೆಯ ಲಾಭ ಸಿಗುವುದಿಲ್ಲ.
ನಿಮಗೆ ಇಲ್ಲಿಯವರೆಗೆ ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗುತ್ತಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ನೀವೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ ಡಿಬಿಟಿ ಕರ್ನಾಟಕ ಎಂದು ಟೈಪ್ ಮಾಡಬೇಕು. ನಂತರ ಆ ಆಪ್ ಇನಸ್ಟಾಲ್ ಮಾಡಿ ನಿಮಗೆ ಎಸ್ಟು ಕಂತುಗಳು ಜಮೆಯಾಗಿದೆ ಎಂಬುದನ್ನುಚೆಕ್ ಮಾಡಬಹುದು.
ಡಿಬಿಟಿ ಆ್ಯಪ್ ಲಿಂಕ್ ನ್ನು ಡಿಸ್ಕ್ರಿಪಶನ್ ಬಾಕ್ಸ್ ನಲ್ಲಿ ನೀಡಲಾಗಿದೆ. ಆ ಲಿಂಕ್ ಮೇಲೆ ಕ್ಲಿಕ್ ಮಾಡಿ ಡಿಬಿಟಿ ಆ್ಯಪ್ ಇನಸ್ಟಾಲ್ ಮಾಡಿಕೊಂಡು ಡಿಬಿಟಿ ಸ್ಟೇಟಸ್ ಚೆಕ್ ಮಾಡಬಹುದು.
ಡಿಬಿಟಿ ಆ್ಯಪ್ ನಲ್ಲಿ ಸಿಗಲಿದೆ ಗೃಹಲಕ್ಷ್ಮೀ ಹಣ ಜಮೆ
ಸರ್ಕಾರದ ವಿವಿಧ ಯೋಜನೆಗಳಿಂದ ತಮಗೆಷ್ಟು ಹಣ ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಲು ಗೂಗಲ್ ಪ್ಲೇ ಸ್ಟೋರ್ ನಲ್ಲಿ
DBT Karnataka ಎಂದು ಟೈಪ್ ಮಾಡಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಬಹುದು. ಅಥವಾ ಈ
https://play.google.com/store/apps/details?id=com.dbtkarnataka
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಡಿಬಿಟಿ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ಇನಸ್ಟಾಲ್ ಮೇಲೆ ಕ್ಲಿಕ್ ಮಾಡಿದ ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಅಲೋ ಡಿಬಿಟಿ ಕೆಳಗಡೆ ಅಲೋ ಮೇಲೆ ಕ್ಲಿಕ್ ಮಾಡಬೇಕು. ಮತ್ತೊಂದು ಸಲ ಅಲೋ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮ್ಮ ಆಧಾರ್ ಕಾರ್ಡ್ ನಂಬರ್ ಹಾಕಬೇಕು. ನಂತರ ಅಲ್ಲಿ ಕೆಳಗಡೆ ಕಾಣಿಸುವ ಬಾಕ್ಸ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ಗೆಟ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು.
ಆಗ ನಿಮ್ಮ ಆಧಾರ್ ಕಾರ್ಡಿಗೆ ನೋಂದಣಿಯಾಗಿರುವ ಮೊಬೈಲ್ ನಂಬರಿಗೆ ಓಟಿಪಿ ಬರುತ್ತದೆ. ಆ ಓಟಿಪಿ ನಮೂದಿಸಿದ ನಂತರ ನೀವು ಪಿನ್ ಕ್ರಿಯೇಟ್ ಮಾಡಿಕೊಳ್ಳಬೇಕು. ಮೇಲ್ಗಡೆ ನಮೂದಿಸಿ ಪಿನ್ ನ್ನು ಮತ್ತೇ ಕೆಳಗಡೆ ಹಾಕಬೇಕು. ಈ ಪಿನ್ ಅನ್ನು ನೀವು ನೆನಪಿಟ್ಟುಕೊಳ್ಳಬೇಕು. ನಂತರ ಸಬ್ಮಿಟ್ ಮೇಲೆ ಕ್ಲಿಕ್ ಮಾಡಬೇಕು..ಆಗ ನಿಮ್ಮ ಫೋಟೋ ಕಾಣಿಸುತ್ತದೆ.