ಗೃಹಲಕ್ಷ್ಮೀ ಯೋಜನೆಯ ಹಣ ಈ ಮಹಿಳೆಯರ ಖಾತೆಗೆ ಜಮೆ ಇಲ್ಲಿದೆ ಮಾಹಿತಿ

Written by Ramlinganna

Published on:

Gruhalakshmi amount credit next week : ರಾಜ್ಯದ ಮಹಿಳೆಯರಿಗೆ  ನ್ಯೂಸ್  ಇಲ್ಲಿದೆ. ಕಳೆದ ಎರಡು ತಿಂಗಳಿಂದ  ಗೃಹಲಕ್ಷ್ಮೀ ಹಣಕ್ಕಾಗಿ ಕಾಯುತ್ತಿರುವ ಮಹಿಳೆಯರ ಖಾತೆಗೆ ಈಗ ಮುಂದಿನ ವಾರದಲ್ಲಿ ಹಣ ಜಮೆಯಾಗುವ ಸಾಧ್ಯತೆಯಿದೆ. ಹೌದು, ಹಾಗಾದರೆ ಯಾರು ಯಾರಿಗೆ ಹಣ ಜಮೆಯಾಗಲಿದೆ ಎಂಬ ಮಾಹಿತಿ ಇಲ್ಲಿದೆ..

ಬಾಕಿ ಇರುವ ಎರಡು ತಿಂಗಳ ಹಣ ಬಿಡುಗಡೆಗೆ ಹಣಕಾಸು ಇಲಾಖೆ ಅನುಮೋದನೆ ಸಿಕ್ಕಿದೆ ಎಂದು ಹೇಳಲಾಗುತ್ತಿದೆ.  ಹೌದು, ಮಾಧ್ಯಮಗಳ ಮೂಲಗಳ ಪ್ರಕಾರ ಮುಂದಿನ ತಿಂಗಳು ಗೃಹಲಕ್ಷ್ಮೀ ಹಣ ಜಮೆಯಾಗುವ ಸಾಧ್ಯತೆಯಿದೆ.

Gruhalakshmi amount credit next week ಇಲ್ಲಿಯವರೆಗೆ ಎಷ್ಟುಕಂತುಗಳ ಹಣ ಜಮೆಯಾಗಿದೆ?

ಗೃಹಲಕ್ಷ್ಮೀ ಯೋಜನೆಯು 2023 ರ ಆಗಸ್ಟ್ ತಿಂಗಳಲ್ಲಿ ಆರಂಭವಾಗಿದೆ. ಇಲ್ಲಿಯವರೆಗೂ 19 ಕಂತಿನ ಹಣ ಫಲಾನುಭವಿಗಳ ಖಾತೆಗೆ ಜಮೆಯಾಗಿದೆ.  ಇದೀಗ ಜೂನ್ ಹಾಗೂ  ಜುಲೈ ತಿಂಗಳ ಹಣ ಬಿಡುಗಡೆ ಆಗಬೇಕಿದೆ.  ಈ ಎರಡು ಕಂತಿನ ಹಣ ಒಟ್ಟಿಗೆ ಜಮೆ ಮಾಡಲಾಗುವುದೋ ಅಥವಾ ಹಂತ ಹಂತವಾಗಿ ಪ್ರತಿ ವಾರ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುವುದು ಎಂಬುದು ಅತೀ ಶೀಘ್ರದಲ್ಲಿ ಗೊತ್ತಾಗಲಿದೆ.

ಗೃಹಲಕ್ಷ್ಮೀ ಯೋಜನೆಯ ಹಣ ನಿಮಗೆಷ್ಟು ಕಂತುಗಳು ಜಮೆಯಾಗಿದೆ? ಇಲ್ಲೇ ಚೆಕ್ ಮಾಡಿ

ಗೃಹಲಕ್ಷ್ಮೀ ಯೋಜನೆಯ ಹಣ ನಿಮಗೆ ಇಲ್ಲಿಯವರೆಗೆ ಎಷ್ಟು ಕಂತುಗಳು ಜಮೆಯಾಗಿದೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ಫಲಾನುಭವಿಗಳು DBT Karnataka  ಎಂದು ಟೈಪ್ ಮಾಡಿ ಆ್ಯಪ್ ಡೌನ್ಲೋಡ್ ಮಾಡಿಕೊಂಡು ಚೆಕ್ ಮಾಡಬಹುದು.

https://play.google.com/store/apps/details?id=com.dbtkarnataka

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಡಿಬಿಟಿ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ಇನಸ್ಟಾಲ್ ಮೇಲೆ ಕ್ಲಿಕ್ ಮಾಡಿದ ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು.  ನಂತರ ಅಲೋ ಡಿಬಿಟಿ ಕೆಳಗಡೆ ಅಲೋ ಮೇಲೆ ಕ್ಲಿಕ್ ಮಾಡಬೇಕು.  ಮತ್ತೊಂದು ಸಲ ಅಲೋ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮ್ಮ ಆಧಾರ್ ಕಾರ್ಡ್ ನಂಬರ್ ಹಾಕಬೇಕು. ನಂತರ ಅಲ್ಲಿ ಕೆಳಗಡೆ ಕಾಣಿಸುವ ಬಾಕ್ಸ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ಗೆಟ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು.

ಆಗ ನಿಮ್ಮ ಆಧಾರ್ ಕಾರ್ಡಿಗೆ ನೋಂದಣಿಯಾಗಿರುವ ಮೊಬೈಲ್ ನಂಬರಿಗೆ  ಓಟಿಪಿ ಬರುತ್ತದೆ. ಆ ಓಟಿಪಿ ನಮೂದಿಸಿದ ನಂತರ ನೀವು ಪಿನ್ ಕ್ರಿಯೇಟ್ ಮಾಡಿಕೊಳ್ಳಬೇಕು. ಮೇಲ್ಗಡೆ ನಮೂದಿಸಿ ಪಿನ್ ನ್ನು ಮತ್ತೇ ಕೆಳಗಡೆ ಹಾಕಬೇಕು. ಈ ಪಿನ್ ಅನ್ನು ನೀವು ನೆನಪಿಟ್ಟುಕೊಳ್ಳಬೇಕು. ನಂತರ ಸಬ್ಮಿಟ್ ಮೇಲೆ ಕ್ಲಿಕ್ ಮಾಡಬೇಕು..ಆಗ ನಿಮ್ಮ ಫೋಟೋ ಕಾಣಿಸುತ್ತದೆ.

ಗೃಹಲಕ್ಷ್ಮೀ ಯೋಜನೆಗೆ ನೀವು ಅರ್ಹತೆ ಪಡೆದಿದ್ದೀರಾ? ಇಲ್ಲಿದೆ ಮಾಹಿತಿ

ಗೃಹಲಕ್ಷ್ಮೀ ಯೋಜನೆಗೆ ನೀವು ಅರ್ಹತೆ ಪಡೆದಿದ್ದಿರಾ? ನಿಮಗೇಕೆ ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗಿಲ್ಲ. ನೋಂದಣಿ  ಮಾಡಿಸಿದರೂ ನಿಮಗೇಕೆ ಹಣ ಜಮೆಯಾಗಿಲ್ಲ ಎಂಬುದರ ಮಾಹಿತಿ ಇಲ್ಲಿದೆ.

ಇದನ್ನೂ ಓದಿ ಗ್ರಾಪಂನಿಂದ ನಿಮ್ಮೂರಿಗೆ ಯಾವ ಯಾವ ಕಾಮಗಾರಿ ಮಂಜೂರಾಗಿದೆ? ಇಲ್ಲೇ ಚೆಕ್ ಮಾಡಿ

ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯುವ ವಿತರಿಸುವ ಅಂತ್ಯೋದಯ, ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿಯಾಗಿರುತ್ತಾರೆ.

ಒಂದೇ ಕುಟುಂಬದಲ್ಲಿ ಒಬ್ಬರಿಗಿಂತ ಹೆಚ್ಚು ಮಹಿಳೆಯರಿದ್ದಲ್ಲಿ ಒಂದು ಮಹಿಳೆಗೆ ಮಾತ್ರ ಈ ಯೋಜನೆಯ ಲಾಭ ಸಿಗುತ್ತದೆ.

ಕುಟುಂಬ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿದಾರರಾಗಿದ್ದರೆ ಅವರಿಗೆ ಹಣ ಜಮೆಯಾಗುವುದಿಲ್ಲ.

Leave a Comment