Gruhalakshmi amout credit soon : ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಿದ ಫಲಾನುಭವಿಗಳಿಗೆ ಇಲ್ಲಿದೆ ಗುಡ್ ನ್ಯೂಸ್, ಹೌದು ಗೃಹಲಕ್ಷ್ಮೀ ಯೋಜನೆ ಅಡಿಯಲ್ಲಿ ನೋಂದಣಿ ಮಾಡಿಸಿದ ಫಲಾನುಭವಿಗಳ ಖಾತೆಗೆ ಈ ತಿಂಗಳಲ್ಲಿಯೇ ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಳ್ಕರ್ ತಿಳಿಸಿದ್ದಾರೆ.
ಅವರು ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದಿನ ಮಾದರಿಯಂತೆ ಜಿಲ್ಲಾ ಉಪ ನಿರ್ದೇಶಕರ ಮೂಲಕವೇ ಗೃಹಲಕ್ಷ್ಮೀ ಯೋಜನೆ ಹಣ ಫಲಾನುಭವಿಗಳ ಖಾತೆಗೆ ಜಮೆ ಆಗಲಿದೆ. ತಾಲೂಕು ಪಂಚಾಯತಿ ಮೂಲಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಹಣ ರವಾನೆಯಾಗುತ್ತಿದ್ದು, ಉಪ ನಿರ್ದೇಶಕರ ಮೂಲಕ ಹಣ ಹಾಕಲಾಗುವುದು. ಆರ್ಥಿಕ ಇಲಾಖೆಯಿಂದ ಹಣ ಬಂದು 15 ದಿನವಾಯಿತು. ಆದರೆ ತಾಪಂ ಕಚೇರಿಗಳಿಂದ ಇಲಾಖೆಗೆ ಹಣ ಬರುವುದು ವಿಳಂಬವಾಗುತ್ತಿದೆ ಎಂದರು.
ಯಾರು ಯಾರು ನೋಂದಣಿ ಮಾಡಿಸಿದ್ದಾರೋ ಹಾಗೂ ಅರ್ಹತೆ ಪಡೆದಿದ್ದಾರೋ ಅವರ ಖಾತೆಗೆ ಗೃಹಲಕ್ಷ್ಮೀ ಯೋಜನೆಯ 17 ಮತ್ತು 18ನೇ ಕಂತಿನ ಹಣ ಜಮೆಯಾಗಲಿದೆ ಎಂದು ಹೇಳಲಾಗುತ್ತಿದೆ. ತಮಗೆಲ್ಲಾ ಗೊತ್ತಿದ್ದ ಹಾಗೆ ಗೃಹಲಕ್ಷ್ಮೀ ಯೋಜನೆಯ ಹಣ ಕೆಲವರಿಗೆ ಜಮೆಯಾಗುತ್ತಿದ್ದರೆ ಇನ್ನೂ ಕೆಲವರಿಗೆ ಜಮೆಯಾಗುತ್ತಿಲ್ಲ. ಯಾವ ಕಾರಣಕ್ಕಾಗಿ ಹಣ ಜಮೆಯಾಗುತ್ತಿಲ್ಲ
ನಿಮ್ಮ ಖಾತೆಗೆ ಇಲ್ಲಿಯವರೆಗೆ ಎಸ್ಟು ಕಂತುಗಳು ಜಮೆಯಾಗಿದೆ ಹಾಗೂ ಮುಂದಿನ ಕಂತಿನ ಹಣ ನಿಮ್ಮ ಖಾತೆಗೆ ಜಮೆಯಾಗಲು ಅರ್ಹತೆ ಪಡೆದಿದ್ದೀರೋ ಇಲ್ಲವೋ ಎಂಬ ಮಾಹಿತಿ ಸಹ ಸಿಗಲಿದೆ.
Gruhalakshmi amout credit soon ಗೃಹಲಕ್ಷ್ಮೀ ಫಲಾನುಭವಿಗಳ ಅರ್ಹತೆ
ಗೃಹಲಕ್ಷ್ಮೀ ಯೋಜನೆಯ ಹಣ ಪಡೆಯಲು ಯಾರು ಯಾರು ಅರ್ಹತೆ ಪಡೆದಿದ್ದಾರೆ ಎಂಬ ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ.
ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗಲು ಬಿಪಿಎಲ್ ಅಥವಾ ಎಪಿಎಲ್ ಕಾರ್ಡ್ ಹೊಂದಿರಬೇಕು. ಈ ರೇಶನ್ ಕಾರ್ಡ್ ನಲ್ಲಿ ಮಹಿಳೆಯ ಹೆಸರು ಕುಟುಂಬದ ಯಜಮಾನಿ ಎಂದು ಬರೆದಿರಬೇಕು.
ಇದನ್ನೂ ಓದಿ ಈ ಲಿಸ್ಟ್ ನಲ್ಲಿದ್ದವರಿಗೆ ಇನ್ಮುಂದೆ ಅನ್ನಭಾಗ್ಯ ಹಣ ಸಿಗಲ್ಲ
ಆದಾಯ ತೆರಿಗೆ ಪಾವತಿ ಮಾಡುವವರ ಕುಟುಂಬದವರಿಗೆ ಗೃಹಲಕ್ಷ್ಮೀ ಯೋಜನೆಯ ಹಣ ಸಿಗುವುದಿಲ್ಲ. ಸರ್ಕಾರಿ ಉದ್ಯೋಗಿಗಳಿಗೆ, ಪೆನ್ಶನ್ ಪಡೆಯುವವರಿಗೆ ಯೋಜನೆಯ ಲಾಭ ಸಿಗುವುದಿಲ್ಲ. ಜಿಎಸ್.ಟಿ ಪಾವತಿ ಮಾಡುತ್ತಿರುವ ಮಹಿಳೆಯರಿಗೂ ಯೋಜನೆಯ ಲಾಭ ಸಿಗುವುದಿಲ್ಲ.
ನಿಮಗೆ ಇಲ್ಲಿಯವರೆಗೆ ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗುತ್ತಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ನೀವೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ ಡಿಬಿಟಿ ಕರ್ನಾಟಕ ಎಂದು ಟೈಪ್ ಮಾಡಬೇಕು. ನಂತರ ಆ ಆಪ್ ಇನಸ್ಟಾಲ್ ಮಾಡಿ ನಿಮಗೆ ಎಸ್ಟು ಕಂತುಗಳು ಜಮೆಯಾಗಿದೆ ಎಂಬುದನ್ನುಚೆಕ್ ಮಾಡಬಹುದು.
ಡಿಬಿಟಿ ಆ್ಯಪ್ ಲಿಂಕ್ ನ್ನು ಡಿಸ್ಕ್ರಿಪಶನ್ ಬಾಕ್ಸ್ ನಲ್ಲಿ ನೀಡಲಾಗಿದೆ. ಆ ಲಿಂಕ್ ಮೇಲೆ ಕ್ಲಿಕ್ ಮಾಡಿ ಡಿಬಿಟಿ ಆ್ಯಪ್ ಇನಸ್ಟಾಲ್ ಮಾಡಿಕೊಂಡು ಡಿಬಿಟಿ ಸ್ಟೇಟಸ್ ಚೆಕ್ ಮಾಡಬಹುದು.
Gruhalakshmi amout credit soon ಡಿಬಿಟಿ ಆ್ಯಪ್ ನಲ್ಲಿ ಸಿಗಲಿದೆ ಗೃಹಲಕ್ಷ್ಮೀ ಹಣ ಜಮೆ
ಸರ್ಕಾರದ ವಿವಿಧ ಯೋಜನೆಗಳಿಂದ ತಮಗೆಷ್ಟು ಹಣ ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಲು ಗೂಗಲ್ ಪ್ಲೇ ಸ್ಟೋರ್ ನಲ್ಲಿ
DBT Karnataka ಎಂದು ಟೈಪ್ ಮಾಡಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಬಹುದು. ಅಥವಾ ಈ
https://play.google.com/store/apps/details?id=com.dbtkarnataka
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಡಿಬಿಟಿ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ಇನಸ್ಟಾಲ್ ಮೇಲೆ ಕ್ಲಿಕ್ ಮಾಡಿದ ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಅಲೋ ಡಿಬಿಟಿ ಕೆಳಗಡೆ ಅಲೋ ಮೇಲೆ ಕ್ಲಿಕ್ ಮಾಡಬೇಕು. ಮತ್ತೊಂದು ಸಲ ಅಲೋ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮ್ಮ ಆಧಾರ್ ಕಾರ್ಡ್ ನಂಬರ್ ಹಾಕಬೇಕು. ನಂತರ ಅಲ್ಲಿ ಕೆಳಗಡೆ ಕಾಣಿಸುವ ಬಾಕ್ಸ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ಗೆಟ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು.
ಆಗ ನಿಮ್ಮ ಆಧಾರ್ ಕಾರ್ಡಿಗೆ ನೋಂದಣಿಯಾಗಿರುವ ಮೊಬೈಲ್ ನಂಬರಿಗೆ ಓಟಿಪಿ ಬರುತ್ತದೆ. ಆ ಓಟಿಪಿ ನಮೂದಿಸಿದ ನಂತರ ನೀವು ಪಿನ್ ಕ್ರಿಯೇಟ್ ಮಾಡಿಕೊಳ್ಳಬೇಕು. ಮೇಲ್ಗಡೆ ನಮೂದಿಸಿ ಪಿನ್ ನ್ನು ಮತ್ತೇ ಕೆಳಗಡೆ ಹಾಕಬೇಕು. ಈ ಪಿನ್ ಅನ್ನು ನೀವು ನೆನಪಿಟ್ಟುಕೊಳ್ಳಬೇಕು. ನಂತರ ಸಬ್ಮಿಟ್ ಮೇಲೆ ಕ್ಲಿಕ್ ಮಾಡಬೇಕು..ಆಗ ನಿಮ್ಮ ಫೋಟೋ ಕಾಣಿಸುತ್ತದೆ.