Gruhalakshmi and annabhagya status ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದ ಗೃಹಲಕ್ಷ್ಮೀ ಹಾಗೂ ಅನ್ನಭಾಗ್ಯದ ಹಣ ಯಾವ ಫಲಾನುಭವಿಗಳಿಗೆ ಜಮೆಯಾಗಲಿದೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.
ಹೌದು, ಕಾಂಗ್ರೆಸ್ ಪಕ್ಷವು ಜಾರಿಗೆ ರಾಜ್ಯದ ಜನತೆಗೆ ಜಾರಿಗೆ ಐದು ಗ್ಯಾರೆಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮೀ ಹಾಗೂ ಅನ್ನಭಾಗ್ಯ ಯೋಜನೆಗಳೂ ಸಹ ಸೇರಿವೆ. ಈ ಯೋಜನೆಗಳಡಿಯಲ್ಲಿ ನೋಂದಾಯಿಸಿದ ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ಜಮೆ ಮಾಡಲಾಗುತ್ತಿದೆ.
ಅನ್ನಭಾಗ್ಯದ ಯೋಜನೆಯಡಿಯಲ್ಲಿ ಫಲಾನುಭವಿಗಳು ತಮ್ಮ ಹೆಸರು ನೋಂದಾಯಿಸಿಕೊಳ್ಳುವ ಅವಶ್ಯಕತೆಯಿಲ್ಲ. ಏಕೆಂದರೆ ಈಗಾಗಲೇ ಯಾರು ಅನ್ನಭಾಗ್ಯದ ಯೋಜನೆಯಡಿಯಲ್ಲಿ ಐದು ಕೆಜಿ ಅಕ್ಕಿ ಪಡೆಯಿುತ್ತಿದ್ದರೋ ಅವರಿಗೆಲ್ಲಾ ಈ ಅನ್ನಭಾಗ್ಯದಹಣ ಜಮೆ ಮಾಡಲಾಗುವುದು. ಅಂದರೆ ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ಹೊಂದಿರುವ ಹಾಗೂ ಕಳೆದ ಮೂರು ತಿಂಗಳಿನಲ್ಲಿ ಅಕ್ಕಿ ಪಡೆದ ಎಲ್ಲಾ ಫಲಾನುಭವಿಗಳ ಖಾತೆಗೆ ಅನ್ನಭಾಗ್ಯದ ಹಣ ಜಮೆಯಾಗುತ್ತಿದೆ.
Gruhalakshmi and annabhagya status ನಿಮಗೆಷ್ಟು ಹಣ ಜಮೆಯಾಗಿದೆ? ಇಲ್ಲೆ ಚೆಕ್ ಮಾಡಿ
ಅನ್ನಭಾಗ್ಯದ ಯೋಜನೆಯಡಿಯಲ್ಲಿ ಯಾರು ಯಾರಿಗೆ ಹಣ ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಲು ಈ
https://ahara.kar.nic.in/lpg/
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ವಿಭಾಗವಾರು ಲಿಂಕ್ ಕಾಣಿಸುತ್ತದೆ. ನೀವು ಯಾವ ವಿಭಾಗದ ವ್ಯಾಪ್ತಿಯ ಜಿಲ್ಲೆಯಲ್ಲಿ ಬರುತ್ತೀರೋ ಆ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಇನ್ನೊಂದು ಪೇಜ್ ಕಾಣಿಸುತ್ತದೆ. ಅಲ್ಲಿ ನೇರ ನಗದು ವರ್ಗಾವಣೆಯ ಸ್ಥಿತಿ (DBT) ಮೇಲೆ ಕ್ಲಿಕ್ ಮಾಡಬೇಕು. ಆಗ ಓಪನ್ ಆಗುವ ಪೇಜ್ ನಲ್ಲಿ ತಿಂಗಳು ಆಯ್ಕೆ ಮಾಡಿಕೊಳ್ಳಬೇಕು. ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ನಮೂದಿಸಿ ಗೋ ಮೇಲೆ ಕ್ಲಿಕ್ ಮಾಡಿ ಸ್ಟೇಟಸ್ ಚೆಕ್ ಮಾಡಬಹುದು.
ಜುಲೈ ತಿಂಗಳಲ್ಲಿ ನಿಮಗೆಷ್ಟು ಹಣ ಜಮೆಯಾಗಿದೆ ಚೆಕ್ ಮಾಡಿಕೊಳ್ಳಬಹುದು. ಆಗಸ್ಟ್ ತಿಂಗಳ ಸ್ಟೇಟಸ್ ಸಹ ಇಲ್ಲೇಚೆಕ್ ಮಾಡಬಹುದು. ಆಗಸ್ಟ್ ತಿಂಗಳು ಆಯ್ಕೆ ಮಾಡಿಕೊಂಡು ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ನಮೂದಿಸಿ ಗೋ ಮೇಲೆ ಕ್ಲಿಕ್ ಮಾಡಿದರೆ ಸಾಕು, ನಿಮಗೆಷ್ಟು ಹಣ ಜಮೆಯಾಗುವುದು ಹಾಗೂ ನಗದು ಪಾವತಿಗೆ ನೀವು ಅರ್ಹರಾಗಿದ್ದೀರೋ ಇಲ್ಲವೋ ಎಂಬ ಮೆಸೆಜ್ ಕಾಣಿಸುತ್ತದೆ. ಅದರ ಕೆಳಗಡೆ ಪಾವತಿ ಪ್ರಗತಿಯಲ್ಲಿದೆ ಎಂಬುದು ಕಾಣಿಸಿದರೆ ನಿಮಗೆ ಈ ತಿಂಗಳ ಅನ್ನಭಾಗ್ಯದ ಹಣ ಜಮೆಯಾಗುವುದು.
ಗೃಹಲಕ್ಷ್ಮೀ ಯೋಜನೆ ಹಣ ಜಮೆಯಾಗಲಿದೆಯೋ ಇಲ್ಲವೋ ಚೆಕ್ ಮಾಡಿ
ಗೃಹಲಕ್ಷ್ಮೀ ಯೋಜನೆಯ ಹಣ ಯಾರು ಯಾರಿಗೆ ಜಮೆಯಾಗಲಿದೆ ಎಂಬುದನ್ನು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.
ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಿದ ಫಲಾನುಭವಿಗಳು ತಮಗೆ ಎಷ್ಟು ಕಂತುಗಳು ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಲು ಈ
https://mahitikanaja.karnataka.gov.in/Gruhalakshmi/GuhalakshmiStatus?ServiceId=5630&Type=SP&DepartmentId=3136
ಲಿಂಕ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ. ನಂತರ ಅಲ್ಲಿ ತೆರೆದುಕೊಳ್ಳುವ ಪೇಜ್ ನಲ್ಲಿ Details of Gruhalakshmi status ಕೆಳಗಡೆ ನಿಮ್ಮ ರೇಶನ್ ಕಾರ್ಡ್ ನಮೂದಿಸಬೇಕು. ನಂತರ submit ಮೇಲೆ ಕ್ಲಿಕ್ ಮಾಡಬೇಕು. ಆಗ ನೀವು ಯಾವ ದಿನಾಂಕದಂದು ಅರ್ಜಿ ಹಾಕಿದ್ದೀರಿ. ನಿಮ್ಮ ಅರ್ಜಿ ಸ್ವೀಕೃತವಾಗಿದೆಯೇ ಹಾಗೂ ಯಾವ ದಿನಾಂಕ ಅರ್ಜಿ ಸ್ವೀಕೃತವಾಗಿದೆ ಎಂಬ ಮಾಹಿತಿ ಕಾಣಿಸುತ್ತದೆ. ಅದರ ಮುಂದುಗಡೆ ಇರುವ Details ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಇಲ್ಲಿಯವರೆಗೆ ಎಷ್ಟು ಕಂತುಗಳು ಜಮೆಯಾಗಿದೆ.