Gruhalakshmi money credited today : ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗಿಲ್ಲಿದೆ ಗುಡ್ ನ್ಯೂಸ್. ಹೌದು, ರಾಜ್ಯ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಕೊನೆಗೂ ಮೂರು ತಿಂಗಳ ನಂತರ ಗೃಹಲಕ್ಷ್ಮೀ ಯೋಜನೆಯ 33ನೇ ಕಂತಿನ ಹಣ ಜಮೆಯಾಯಿತು. ಯಾವ ಯಾವ ಮಹಿಳೆಯರಿಗೆ ಜಮೆಯಾಯಿತು ಕೆಲವು ಮಹಿಳೆಯರಿಗೆ ಏಕೆ ಜಮೆಯಾಗಿಲ್ಲ.ಇನ್ನೆಷ್ಟು ದಿನಗಳಲ್ಲಿ ಉಳಿದ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಯಾಗಲಿದೆ ಎಂಬುದುರ ಸಂಪೂರ್ಣ ಮಾಹಿತಿ ಇಲ್ಲಿದೆ.
ಕಳೆದ ಎರಡು ದಿನಗಳ ಹಿಂದೆ ಗೃಹಲಕ್ಷ್ಮೀ ಯೋಜನೆಯ ಹಣ ಬಿಡುಗಡೆಯಾಗಿತ್ತು. ಮುಂದಿನ ಎರಡು ದಿನಗಳಲ್ಲಿ ಜಮೆಯಾಗುತ್ತದೆ ಎಂದು ಹೇಳಲಾಗಿತ್ತು. ಅದರಂತೆ ಈಗ ಮಹಿಳೆಯರ ಖಾತೆಗೆ ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗಿದೆ.
ಇನ್ನೂ ಯಾರ ಖಾತೆಗೆ ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗಿಲ್ಲವೋ ಅವರ ಖಾತೆಗೆ ಇಂದು ಜಮೆಯಾಗಲಿದೆ.
Gruhalakshmi money credited today ನಿಮ್ಮ ಖಾತೆಗೆ ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗಿದೆಯೋ ಇಲ್ಲವೋ ಹೀಗೆ ಚೆಕ್ ಮಾಡಿ
ಗೃಹಲಕ್ಷ್ಮೀ ಯೋಜನೆಯ 33ನೇ ಕಂತಿನ ಹಣ ನಿಮ್ಮ ಖಾತೆಗೆ ಹಣ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು
https://play.google.com/store/apps/details?id=com.dbtkarnataka&hl=en_IN
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಡಿಬಿಟಿ ಯಾಪ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ನಿಮ್ಮ ಆಧಾರ್ ಕಾರ್ಡ್ ನಂಬರ್ ನಮೂದಿಸಬೇಕು. ನಂತರ ಗೆಟ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಮೊಬೈಲಿಗೆ ಓಟಿಪಿ ಸಂಖ್ಯೆ ಬರುತ್ತದೆ. ಈ ಓಟಿಪಿ ಸಂಖ್ಯೆನ್ನು ನಮೂದಿಸಿದ ನಂತರ ಪೇಮೆಂಟ್ ಸ್ಟೇಟಸ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಗೃಹಲಕ್ಷ್ಮೀ ಬಟನ್ ಒತ್ತಿದರೆ ಸಾಕು ನಿಮ್ಮ ಖಾತೆಗೆ ಇಲ್ಲಿಯವರೆಗೆ ಗೃಹಲಕ್ಷ್ಮೀ ಯೋಜನೆಯಿಂದ ಎಷ್ಟು ಹಣ ಜಮೆಯಾಗಿದೆ ಎಂಬ ಮಾಹಿತಿ ಸಿಗುತ್ತದೆ.
ಇಲ್ಲಿಯವರೆಗೆ ನಿಮಗೆಷ್ಟು ಕಂತುಗಳು ಬಂದಿವೆ? ಎಷ್ಟು ಹಣ ಜಮೆಯಾಗಿದೆ?
ಗೃಹಲಕ್ಷ್ಮೀ ಯೋಜನೆ ಆರಂಭವಾದಾಗಿನಿಂದ ಇಲ್ಲಿಯವರೆಗೆ ಫಲಾನುಭವಿಗಳ ಖಾತೆಗೆ ಒಟ್ಟು 33 ಕಂತುಗಳ ಹಣ ಜಮೆಯಾಗಿದೆ. ಹೌದು, 33 ಕಂತುಗಳು ಒಟ್ಟು ಹಣ 66 ಸಾವಿರ ರೂಪಾಯಿ ಫಲಾನುಭವಿಗಳ ಖಾತೆಗೆ ಜಮೆಯಾಗಿದೆ.
ಗೃಹಲಕ್ಷ್ಮೀ ಹಣ ಪಡೆಯಲು ಹೊಸ ರೂಲ್ಸ್
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆ ಸೌಲಭ್ಯ ಪಡೆಯಲು ಈಘ ಜೀವತ ಪ್ರಮಾಣ ಪತ್ರ ಸಲ್ಲಿಸಬೇಕೆಂದು ತಿಳಿಸಲಾಗುತ್ತಿದೆ. ಹೌದು, ಮಹಿಳೆಯರು ಜೀವತ ಪ್ರಮಾಣ ಪತ್ರ ಸಲ್ಲಿಸಿದರೆ ಮಾತ್ರ ಮುಂದಿನ ಕಂತು ಜಮೆಯಾಗುತ್ತದೆ ಎಂದು ಹೇಳಲಾಗುತ್ತಿದೆ. ಈ ಕುರಿತು ಮುಖ್ಯಮಂತ್ರಿಗಳು ಮಾಹಿತಿ ನೀಡಿದ್ದಾರೆ. ಗೃಹಲಕ್ಷ್ಮೀ ಯೋಜನೆಯಲ್ಲಿ ಹಣ ಸೋರಿಕೆ ತಡೆಯಲು ಸರ್ಕಾರ ಹೊಸ ನಿಮಯ ಜಾರಿಗೆ ತರಲು ಚಿಂತಿಸುತ್ತಿದೆ.
ಇದನ್ನೂ ಓದಿ ನಿಮ್ಮ ಜಮೀನಿಗೆ ಹೋಗಲು ಬಂಡಿದಾರಿಯಿದೆಯೋ ಇಲ್ಲವೋ ಹೀಗೆ ಚೆಕ್ ಮಾಡಿ
ಯೋಜನೆಯ ಪಲಾನುಭವಿಗಳು ಇನ್ನು ಮುಂದೆ ಪ್ರತಿ ವರ್ಷ ಜೀವಿತ ಪ್ರಮಾಣ ಪತ್ರ ಸಲ್ಲಿಸುವುದು ಕಡ್ಡಾಯವಾಗುವ ಸಾಧ್ಯತೆಯಿದ್ದು, ಮೃತಪಟ್ಟ ಮಹಿಳೆಯರ ಖಾತೆಗೆ ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗುತ್ತಿರುವುದರಿಂದ ಈ ಕ್ರಮ ಕೈಗೊಳ್ಳಲಾಗುತ್ತಿದೆ.
ಗೃಹಲಕ್ಷ್ಮೀ ಹಣ ಜಮೆಯ ಕುರಿತು ಯಾರಿಗೆ ಕರೆ ಮಾಡಬೇಕು
ರಾಜ್ಯ ಸರ್ಕಾರವು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಸಹಾಯವಾಣಿಯನ್ನು ಆರಂಭಿಸಿದೆ. ಹೌದು, 181 ಎಂಬ ಸಂಖ್ಯೆಗೆ ಕರೆ ಮಾಡಿದರೆ ಸಾಕು ಎಲ್ಲಾ ಮಾಹಿತಿ ನಿಮಗೆ ಸಿಗಲಿದೆ. ಕೆಲವೊಮ್ಮೆ ತಾಂತ್ರಿಕ ದೋಷಗಳಿಂದಲೋ ಅಥವಾ ಇ-ಕೆವೈಸಿ ಮಾಡಿಸದಿದ್ದರೆ ಇಲ್ಲವೆ ತೆರಿಗೆ ಪಾವತಿಸುತ್ತಿದ್ದರೆ ಇಂತಹ ಸಂದರ್ಭದಲ್ಲಿ ಗೃಹಲಕ್ಷ್ಮೀ ಹಣ ನಿಲ್ಲಿಸಲಾಗಿರುತ್ತದೆ. ಈ ಬಗ್ಗೆ ಸಹಾಯವಾಣಿಗೆ ಕರೆ ಮಾಡಿ ನಿಖರವಾದ ಮಾಹಿತಿ ಪಡೆಯಬಹುದು.





