Gruhalakshmi Rejected list check : ಗೃಹಲಕ್ಷ್ಮೀ ಯೋಜನೆಯಡಿ ನೋಂದಣಿ ಮಾಡಿಸಿದ ಕೆಲವು ಮಹಿಳೆಯರಿಗೆ ಇನ್ನೂ ಮುಂದೆ ಹಣ ಜಮೆಯಾಗುವುದಿಲ್ಲ. ಹೌದು, ಈಗಾಗಲೇ ರಾಜ್ಯಾದ್ಯಂತ ಯಾವ ಯಾವ ಮಹಿಳೆಯರು ಅರ್ಹತೆ ಪಡೆದಿಲ್ಲವೋ ಅಂತಹವರಿಗೆ ಇನ್ನೂ ಮುಂದೆ ಗೃಹಲಕ್ಷ್ಮೀ ಹಣ ಜಮೆಯಾಗುವುದಿಲ್ಲ
ಹೌದು, ರಾಜ್ಯ ಸರ್ಕಾರವು ಅನರ್ಹತೆ ಪಡೆದ ಮಹಿಳೆಯರನ್ನೂ ಸರ್ಕಾರ ಪತ್ತೆ ಮಾಡಿದೆ.
ರಾಜ್ಯದಲ್ಲಿ ಒಟ್ಟು 3.89 ಲಕ್ಷ ಮಹಿಳೆಯರಿಗೆ ಯೋಜನೆಯಿಂದ ಕೈ ಬಿಡಲಾಗಿದೆ. ಈಗಾಗಲೇ ಇವರು ಗೃಹಲಕ್ಷ್ಮೀ ಯೋಜನೆಯ ಹಣ ಪಡೆಯುತ್ತಿದ್ದರು. ಆದರೆ ಅರ್ಹತೆ ಪಡೆದಿರುವುದಿಲ್ಲ. ಐಡಿ ಜಿಎಸ್ಟಿ ಪಾವತಿಯ 194560 ಪ್ರಕರಣಗಳನ್ನು ಪತ್ತೆ ಹಚ್ಚಿದ್ದು, ಈ ಮಹಿಳೆಯರಿಗೆ ನೀಡುತ್ತಿದ್ದ ಹಣವನ್ನು ನಿಲ್ಲಿಸಲಾಗಿದೆ. ಫಲಾನುಭವಿಯು ಮೃತಪಟ್ಟ ಬಳಿಕವೂ ಅಂತಹವರ ಖಾತೆಗೆ ಹಣ ಸಂದಾಯವಾಗುತ್ತಿದ್ದ 195224 ಪ್ರಕರಣಗಳನ್ನೂ ಪತ್ತೆ ಹಚ್ಚಿ ಅವರಿಗೆ ನೀಡುತ್ತಿದ್ದ ಹಣವನ್ನೂ ತಡೆ ಹಿಡಿಯಲಾಗಿದೆ. ಇಂತಹ ಪ್ರಕರಣದಲ್ಲಿ ಫಲಾನುಭವಿಯ ಖಾತೆಯನ್ನು ಸ್ಥಗಿತಗೊಳಿಸಲು ಬ್ಯಾಂಕುಗಳಿಗೆ ಈಗಾಗಲೇ ಸ್ಥಗಿತಗೊಳಿಸಲು ಬ್ಯಾಂಕುಗಳಿಗೆ ಈಗಾಗಲೇ ನಿರ್ದೇಶನ ನೀಡಿದ್ದು, ಹಣ ವಾಪಸ್ ಪಡೆಯುವ ಪ್ರಕ್ರಿಯೆಗೂ ವೇಗ ನೀಡಲಾಗಿದೆ.
Gruhalakshmi Rejected list check ಯಾರು ಯಾರಿಗೆ ಗೃಹಲಕ್ಷ್ಮೀ ಹಣ ಜಮೆಯಾಗಲ್ಲ ?
ಪತಿ ಐಟಿ ಜಿಎಸ್ಟಿ ಪಾವತಿದಾರರಾಗಿದ್ದರೆ ಅಂತಹವರ ಪತ್ನಿ ಗೃಹಲಕ್ಷ್ಮೀ ಯೋಜನೆಗೆ ಅರ್ಹರಾಗುವುದಿಲ್ಲ. ಮೃತಪಟ್ಟವರ ಖಾತೆಗೆ ಹಣ ಸಂದಾಯಾಗುತ್ತಿದ 15850 ಖಾತೆಗಳಿಗೆ ಸಂದಾಯವಾಗುತ್ತಿದ್ದ ಹಣವನ್ನು ನಿಲ್ಲಿಸಲಾಗಿದೆ.
ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗದಿದ್ದರೆ ಯಾರಿಗೆ ಕರೆ ಮಾಡಬೇಕು?
ಗೃಹಲಕ್ಷ್ಮೀ ಯೋಜನೆಯ 27ನೇ ಕಂತಿನ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವಾದರೆ ಕೂಡಲೇ ನೀವು 181 ನಂಬರಿಗೆ ಕರೆ ಮಾಡಬಹುದು.ಈ ಉಚಿತ ಸಹಾಯವಾಣಿ ನಂಬರಿಗೆ ಕರೆ ಮಾಡಿದರೆ ಸಾಕು ನಿಮ್ಮ ಖಾತೆಗೆ ಯಾವಾಗ ಜಮೆಯಾಗುತ್ತದೆ ಯಾವ ಕಾರಣಕ್ಕಾಗಿ ಹಣ ಜಮೆ ಮಾಡುವುದನ್ನು ತಡಿಹಿಡಿಯಲಾಗಿದೆ ಎಂಬುದನ್ನು ತಿಳಿದುಕೊಳ್ಳಬಹುದು.
ಗೃಹಲಕ್ಷ್ಮೀ ಯೋಜನೆಯ ಹಣ ನಿಮ್ಮ ಖಾತೆಗೆ ಜಮೆಯಾಗಿದೆಯೋ ಇಲ್ಲವೋ ಹೀಗೆ ಚೆಕ್ ಮಾಡಿ
ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯ ಸ್ಟೇಟಸ್ ಚೆಕ್ ಮಾಡಲು ಈ
https://play.google.com/store/apps/details?id=com.dbtkarnataka&hl=en_IN
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆದ ನಿಮಗೆ ಡಿಬಿಟಿ ಯಾಪ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ನಿಮ್ಮ ಆಧಾರ್ ಕಾರ್ಡ್ ನಂಬರ್ ನಮೂದಿಸಬೇಕು. ನಂತರ ಗೆಟ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಮೊಬೈಲಿಗೆ ಓಟಿಪಿ ಸಂಖ್ಯೆ ಬರುತ್ತದೆ. ಈ ಓಟಿಪಿ ಸಂಖ್ಯೆನ್ನು ನಮೂದಿಸಿದ ನಂತರ ಪೇಮೆಂಟ್ ಸ್ಟೇಟಸ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಗೃಹಲಕ್ಷ್ಮೀ ಬಟನ್ ಒತ್ತಿದರೆ ಸಾಕು ನಿಮ್ಮ ಖಾತೆಗೆ ಇಲ್ಲಿಯವರೆಗೆ ಗೃಹಲಕ್ಷ್ಮೀ ಯೋಜನೆಯಿಂದ ಎಷ್ಟು ಹಣ ಜಮೆಯಾಗಿದೆ ಎಂಬ ಮಾಹಿತಿ ಸಿಗುತ್ತದೆ. ಇದರೊಂದಿಗೆ ಗೃಹಲಕ್ಷ್ಮೀ ಹಣ ಜಮೆ ಮಾಡುವ ಪ್ರಕ್ರಿಯೆ ನಿಂತಿದ್ದರೆ ಯಾವ ಕಾರಣಕ್ಕಾಗಿ ತಡೆಹಿಡಿಯಲಾಗಿದೆ ಎಂಬ ಮಾಹಿತಿಯೂ ಕಾಣಿಸುತ್ತದೆ.
ಅತೀ ಶೀಘ್ರದಲ್ಲಿ ಎಲ್ಲಾ ಮಹಿಳೆಯರ ಖಾತೆಗೆ ಗೃಹಲಕ್ಷ್ಮೀ ಹಣ ಜಮೆ
ಗೃಹಲಕ್ಷ್ಮೀ ಯೋಜನೆಯ ಹಣವನ್ನು ಜಿಲ್ಲಾವಾರು ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುತ್ತಿದೆ. ಕಲಬುರಗಿ, ಬೀದರ್, ಯಾದಗಿರಿ ಜಿಲ್ಲೆಯ ಫಲಾನುಭವಿಗಳ ಖಾತೆಗೆ ಈಗಾಗಲೇ ಜಮೆ ಮಾಡುವ ಪ್ರಕ್ರಿಯೆ ಆರಂಭವಾಗಿದೆ. ಅತೀ ಶೀಘ್ರದಲ್ಲಿ ಎಲ್ಲಾ ಫಲಾನುಭವಿಗಳ ಖಾತಗೆ ಹಣ ಜಮೆ ಮಾಡಲಾಗುವದು.
ಇದನ್ನೂ ಓದಿ ನಿಮ್ಮ ಹೆಸರಿನಲ್ಲಿರುವ ಜಮೀನು ಹಿಂದೆ ಯಾರ ಯಾರ ಹೆಸರಿನಲ್ಲಿತ್ತು? ಹೀಗೆ ಚೆಕ್ ಮಾಡಿ
ಬ್ಯಾಂಕ್ ಪಾಸ್ ಬುಕ್, ಆಧಾರ್ ಕಾರ್ಡ್. ರೇಶನ್ ಕಾರ್ಡ್ ನಲ್ಲಿ ಹೆಸರು ಒಂದೇ ರೀತಿಯಾಗಿರಬೇಕು. ಹೆಸರು ಸ್ವಲ್ಪ ವ್ಯತ್ಯಾಸವಾಗಿದ್ದರೆ ಅಂತಹ ಮಹಿಳೆಯರ ಖಾತೆಗೆ ಜಮೆ ಮಾಡುವುದನ್ನು ತಡೆಹಿಡಿಯಲಾಗಿದೆ.





