Gruhalakshmi scheme amount reserve : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಬಜೆಟ್ ನಲ್ಲಿ 34929 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದು, ಇದರಲ್ಲಿ ಗೃಹಲಕ್ಷ್ಮೀ ಯೋಜನೆಗಾಗಿಯೇ 28608 ಕೋಟಿ ರೂಪಾಯಿ ಮೀಸಲಿರಿಸಿದ್ದಾರೆ.
ಹೌದು, ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ರಾಜ್ಯ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ.
ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಹೆಚ್ಚುವರಿಯಾಗಿ ಒಂದು ಜೊತೆ ಸಮವಸ್ತ್ರ ನೀಡಲಾಗುವುದು. ಮಾತೃ ಪೂರ್ಣ ಯೋಜನೆಯಡಿ ಗರ್ಭೀಣಿ ಮತ್ತು ಬಾಣಂತಿಯರಿಗೆ ಅಂಗನವಾಡಿ ಕೇಂದ್ರಗಳಲ್ಲಿ ಈ ಹಿಂದಿನಂತೆಯೇ ಮಧ್ಯಾಹ್ನದ ಬಿಸಿಯೂಟ ನೀಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
ಅರ್ಹ ಮಹಿಳೆಯರಿಗೆ ಪ್ರತಿ ತಿಂಗಳೂ ತಲಾ 2 ಸಾವಿರ ರೂಪಾಯಿ ನೀಡುವ ಗೃಹಲಕ್ಷ್ಮೀ ಯೋಜನೆಯಡಿ ಇಲ್ಲಿಯವರೆಗೂ 1.24 ಕೋಟಿ ರೂಪಾಯಿ ಫಲಾನುಭವಿಗಳಿಗೆ 62345 ಕೋಟಿ ರೂಪಾಯಿ ಪಾವತಿಸಲಾಗಿದೆ.
ಪ್ರಸಕ್ತ ವರ್ಷದಲ್ಲಿ ಈ ಯೋಜನೆಗೆ 28608 ಕೋಟಿ ರೂಪಾಯಿ ಮೀಸಲಿಡಲಾಗಿದೆ. ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ 139844 ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಹೆಚ್ಚುವರಿಯಾಗಿ 1 ಜೊತೆ ಸಮವಸ್ತ್ರ ವಿತರಿಸಲಾಗುವುದು.
ಇದನ್ನೂ ಓದಿ : ಉಚಿತವಾಗಿ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ
ಅಂಗನವಾಡಿ ಕೇಂದ್ರಗಳಲ್ಲಿ ಈ ಹಿಂದೆ ಗರ್ಭಿಣ ಮತ್ತು ಬಾಣಂತಿಯರಿಗೆ ಮದ್ಯಾಹ್ನದ ಬಿಸಿಯೂಟ ನೀಡುವ ಮಾತೃಪೂರ್ಣ ಯೋಜನೆ ಜಾರಿಗೊಳಿಸಲಾಗಿತ್ತು. ಬಳಿಕೆ ರೇಶನ್ ನೀಡಲಾಗುತ್ತಿತ್ತು. ಆದರೆ ಯೋಜನೆಯ ಸಮರ್ಪಕ ಅನುಷ್ಠಾನಕ್ಕಾಗಿ ಪುನಃ ಮಧ್ಯಾಹ್ನದ ಬಿಸಿಯೂಟ ನೀಡಲು ನಿರ್ಧರಿಸಲಾಗಿದೆ. ಜಿಲ್ಲಾಮಟ್ಟದಲ್ಲಿ ಹೆಚ್ಚುವರಿಯಾಗಿ 20 ಹೊಸ ಶಿಶುಪಾಲನಾ ಕೇಂದ್ರಗಳನ್ನು ಸ್ಥಾಪಿಸಲು ಬಜೆಟ್ ನಲ್ಲಿ ಒಂದು ಕೋಟಿ ರೂಪಾಯಿ ಅನುದಾನ ನೀಡಲಾಗಿದೆ.
Gruhalakshmi scheme amount reserve ಪ್ರೋತ್ಸಾಹಧನ 45 ಸಾವಿರ ರೂಪಾಯಿಗೆ ಹೆಚ್ಚಳ
ಮಾಜಿ ದೇವದಾಸಿಯರ ಮಕ್ಕಳಿಗೆ ಉನ್ನತ ಶಿಕ್ಷಣ ಹೆಚ್ಚು ಮಕ್ಕಳಿಗೆ ಸ್ವಯಂ ಉದ್ಯೋಗ, ವೈಯಕ್ತಿಕ ಆದಾಯ ಗಳಿಸಿಕೊಳ್ಳಲು ಪೂರಕವಾಗುವ ಯೋಜನೆಗಳಿಗೆ 5 ಕೋಟಿ ರೂಪಾಯಿ ಮೀಸಲಿಡಲಾಗಿದೆ
ಮಾಜಿ ದೇವದಾಸಿಯರು, ಲಿಂಗತ್ವ ಅಲ್ಪಸಂಖ್ಯಾತರು, ಚೇತನ ಹಾಗೂ ಧನಶ್ರೀ ಯೋಜನೆಯ ಫಲಾನುಭವಿಗಳಿಗೆ ಆದಾಯೋತ್ಪನ್ನ ಚಟುವಟಿಕೆಗೆ ನೀಡುತ್ತಿದ್ದ ಪ್ರೋತ್ಸಾಹಧನವನ್ನು 35 ಸಾವಿರದಿಂದ 45 ಸಾವಿರ ರೂಪಾಯಿಗೆ ಹೆಚ್ಚಿಸಲಾಗಿದೆ.
ಅಂಗನವಾಡಿ ಕೇಂದ್ರಗಳ ಸಮಗ್ರ ಸುಧಾರಣೆಗೆ ಉನ್ನತಮಟ್ಟದ ಸಮಿತಿ ರಚಿಸಲಾಗುವುದು. 2026-27ನೇ ಸಾಲಿನಲ್ಲಿ ಮಕ್ಕಳ ಉದ್ದೇಶಿತ ಕಾರ್ಯಕ್ರಮಗಳಿಗೆ ಒಟ್ಟಾರೆ 63135 ಕೋಟಿ ಮತ್ತು ಮಹಿಳಆ ಉದ್ದೇಶಿತ ಕಾರ್ಯಕ್ರಮಗಳಿಗೆ 94663 ಕೋಟಿ ರೂಪಾಯಿ ಒದಗಿಸಲಾಗಿದೆ ಎಂದು ಸಿದ್ದರಾಮಯ್ಯ ವಿವರಿಸಿದ್ದಾರೆ.
ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗದಿದ್ದರೆ ಯಾರಿಗೆ ಕರೆ ಮಾಡಬೇಕು?
ಗೃಹಲಕ್ಷ್ಮೀ ಯೋಜನೆಯ 26ನೇ ಕಂತಿನ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವಾದರೆ ಕೂಡಲೇ ನೀವು 181 ನಂಬರಿಗೆ ಕರೆ ಮಾಡಬಹುದು.ಈ ಉಚಿತ ಸಹಾಯವಾಣಿ ನಂಬರಿಗೆ ಕರೆ ಮಾಡಿದರೆ ಸಾಕು ನಿಮ್ಮ ಖಾತೆಗೆ ಯಾವಾಗ ಜಮೆಯಾಗುತ್ತದೆ ಯಾವ ಕಾರಣಕ್ಕಾಗಿ ಹಣ ಜಮೆ ಮಾಡುವುದನ್ನು ತಡಿಹಿಡಿಯಲಾಗಿದೆ ಎಂಬುದನ್ನು ತಿಳಿದುಕೊಳ್ಳಬಹುದು.
ಗೃಹಲಕ್ಷ್ಮೀ ಯೋಜನೆಯ ಹಣ ನಿಮ್ಮ ಖಾತೆಗೆ ಜಮೆಯಾಗಿದೆಯೋ ಇಲ್ಲವೋ ಹೀಗೆ ಚೆಕ್ ಮಾಡಿ
ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯ ಸ್ಟೇಟಸ್ ಚೆಕ್ ಮಾಡಲು ಈ
https://play.google.com/store/apps/details?id=com.dbtkarnataka&hl=en_IN
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆದ ನಿಮಗೆ ಡಿಬಿಟಿ ಯಾಪ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ನಿಮ್ಮ ಆಧಾರ್ ಕಾರ್ಡ್ ನಂಬರ್ ನಮೂದಿಸಬೇಕು. ನಂತರ ಗೆಟ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಮೊಬೈಲಿಗೆ ಓಟಿಪಿ ಸಂಖ್ಯೆ ಬರುತ್ತದೆ. ಈ ಓಟಿಪಿ ಸಂಖ್ಯೆನ್ನು ನಮೂದಿಸಿದ ನಂತರ ಪೇಮೆಂಟ್ ಸ್ಟೇಟಸ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಗೃಹಲಕ್ಷ್ಮೀ ಬಟನ್ ಒತ್ತಿದರೆ ಸಾಕು ನಿಮ್ಮ ಖಾತೆಗೆ ಇಲ್ಲಿಯವರೆಗೆ ಗೃಹಲಕ್ಷ್ಮೀ ಯೋಜನೆಯಿಂದ ಎಷ್ಟು ಹಣ ಜಮೆಯಾಗಿದೆ ಎಂಬ ಮಾಹಿತಿ ಸಿಗುತ್ತದೆ.





