ಗೃಹಲಕ್ಷ್ಮೀ ಹಣ ಜಮೆಯಾಗಬೇಕಾ ಈ ಕೆಲಸ ಮಾಡಿ

Written by Ramlinganna

Published on:

Gruhalakshmi scheme update : ಗೃಹಲಕ್ಷ್ಮೀ ಯೋಜನೆಯ ಸೌಲಭ್ಯ ಫಲಾನುಭವಿಗಳಿಗೆ ಮಾತ್ರ ತಲುಪುವುದನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ಬಯೋಮೆಟ್ರಿಕ್ ಹಾಗೂ ಫೇಸ್ ಅಥೆಂಟಿಕೇಶನ್ ಮೂಲಕ ಪರಿಶೀಲನೆಗೆ ಆದೇಶಿಸಿದೆ ಎಂದು ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಗೂಳಿಗೌಡ ತಿಳಿಸಿದ್ದಾರೆ.

ಇಂದಿನಿಂದ ಸೆಪ್ಟೆಂಬರ್ 30 ರವರೆಗೆ ಸಮೀಕ್ಷೆ ಶುರುವಾಗಲಿದ್ದು, ಇನ್ನೊಂದು ತಿಂಗಳಲ್ಲಿ ಪ್ರಕ್ರಿಯೆ ಪೂರ್ಣಗೊಳಿಸಲು ಕಾಲ ಮಿತಿ ನೀಡಲಾಗಿದೆ.

Gruhalakshmi scheme update ಅರ್ಹರಿಗೆ ಮಾತ್ರ ಯೋಜನೆ ಸೌಲಭ್ಯ

ಪರಿ ಪರಿಶೀಲನೆಯಿಂದ ಅನರ್ಹ ಫಲಾನುಭವಿಗಳನ್ನು ಗುರುತಿಸಿ, ಅರ್ಹರಿಗೆ ಮಾತ್ರ ಯೋಜನೆಯ ಸೌಲಭ್ಯವನ್ನು ಮುಂದುವರಿಸಲು ಈ ಪ್ರಕ್ರಿಯೆ ಅನುಕೂಲವಾಗಲಿದೆ.

3 ವರ್ಷದಲ್ಲಿ 76 ಕೋಟಿ ವಿತರಣೆ

2023 ಆಗಸ್ಟ್ ನಿಂದ ಇಲ್ಲಿಯವರೆಗೆ 1.24 ಕೋಟಿ ಫಲಾನುಭವಿಗಳಿಗೆ ಒಟ್ಟು 32 ಕಂತುಗಳಲ್ಲಿ 76,951,13 ಕೋಟಿ ರೂಪಾಯಿ ವೆಚ್ಚದ ಧನ ಸಹಾಯವನ್ನು ಪಾವತಿಸಲಾಗಿದೆ. ಈ ಅವಧಿಯಲ್ಲಿ ಕೆಲವು ಫಲಾನುಭವಿಗಳು ಮೃತಪಟ್ಟಿರುವುದು, ವಲೆಸ ಹೋದವರು ಅವರ ಪತಿ ಐಟಿ ಹಾಗೂ ಜಿಎಸ್.ಟಿ ಪಾವತಿಸುತ್ತಿರುವ ನಿದರ್ಶನಗಳು ವರದಿಯಾಗಿದೆ. ಅಂತಹ ಅನರ್ಹರರನ್ನು ಕೈಬಿಟ್ಟು ಎಲ್ಲಾ ಅರ್ಹ ಫಲಾನುಭವಿಗಳಿಗೆ ಸಕಾಲದಲ್ಲಿ ಸೌಲಭ್ಯ ಮುಂದುವರಿಸಲು 20 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಮುರುಪರಿಶೀಲನಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.

ಆಗಸ್ಟ್ 30 ರಿಂದ ಒಂದು ತಿಂಗಳ ಅವಧಿಯಲ್ಲಿ ಮನೆಮನೆಗೆ ಭೇಟಿ ನೀಡಿ ಪರಿಶೀಲಿಸಲಾಗುವುದು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಈ ಕಾರ್ಯದ ಉಸ್ತುವಾರಿ ವಹಿಸಿಕೊಳ್ಳಲಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಪಂ ಸಿಬ್ಬಂದಿ ಹಾಗೂ ನಗರ ಪ್ರದೇಶಗಳಲ್ಲಿ ಕಂದಾಯ ನಿರೀಕ್ಷಕರು, ಬಿಲ್ ಕಲೆಕ್ಟರ್ ಗಳು ಮತ್ತು ಅಂಗನವಾಡಿ ಕಾರ್ಯಕರ್ತೆಯರನ್ನು ಗಣತಿದಾರರನ್ನಾಗಿ ನೇಮಿಸಲಾಗುತ್ತದೆ. ಫಲಾನುಭವಿಗಳಿಂದ ಅರ್ಜಿ ನಮೂನೆ ಭರ್ತಿ ಮಾಡಿಕೊಳ್ಳುವ ಜತೆಗೆ ಮೊಬೈಲ್ ಯಾಪ್ ಮೂಲಕ ಫೋಟೋ, ಜಿಪಿಎಸ್ ಸ್ಥಳ, ಮಾಹಿತಿ, ಮತದಾರರ ಗುರುತಿನ ಚೀಟಿ ವಿವರ, ಸ್ಥಳದಲ್ಲೇ ಫೇಸ್ ಅಥೆಂಟಿಕೇಶನ್ ದಾಖಲಿಸಲಾಗುತ್ತದೆ. ಮುಖ ದೃಢೀಕರಣ ಸಾಧ್ಯವಾಗದಿದ್ದರೆ ಸಮೀಪದ ನ್ಯಾಯಬೆಲೆ ಅಂಗಡಿ ಅಥವಾ ಗ್ರಾಮ ಒನ್ ಕೇಂದ್ರಗಳಲ್ಲಿ ಬಯೋಮೆಟ್ರಿಕ್ ಮೂಲಕ ಪರಿಶೀಲನೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.

ಗಣತಿ ವೇಳೆಯಲ್ಲೇ ಫಲಾನುಭವಿಯ ಫೇಶಿಯಲ್ ಅಥೆಂಟಿಕೇಷನ್ ಮತ್ತು ಮತದಾರರ ಗುರುತಿನ ಚೀಟಿ ವಿವರಗಳನ್ನು ಇನ್ನೂ ಫಲಾನುಭವಿ ವಲಸೆ ಹೋಗಿದ್ದರೆ ಸ್ಥಳಾಂತರಗೊಂಡಿದ್ದರೆ ಅಥವಾ ಮೃತಪಟ್ಟರೆ ಅವರ ಮಾಹಿತಿಯನ್ನು ಯಾಪ್ ನಲ್ಲಿ ನಮೂದಿಸಬೇಕು. ಫಲಾನುಭವಿಯ ಫೇಶಿಯಲ್ ಅಥೆಂಟಿಕೇಶನ್ ಮಾಡಲಾಗಿದಿದ್ದರೆ ಹತ್ತಿರದ ನ್ಯಾಯ ಬೆಲೆ ಅಂಗಡಿ ಅಥವಾ ಗ್ರಾಮ್ ಒನ್ ಕೇಂದ್ರಗಳಿಗೆ ಭೇಟಿ ನೀಡಿ ಬಯೋಮೆಟ್ರಿಕ್ ಪೂರ್ಣಗೊಳಿಸಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ ಹೊಸ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ ಇಲ್ಲೇ ಚೆಕ್ ಮಾಡಿ

ಈ ಮರು ಪರಿಶೀಲನೆಯಿಂದ ಅನರ್ಹ ಫಲಾನುಭವಿಗಳನ್ನು ಗುರುತಿಸಿ, ಅರ್ಹರಿಗೆ ಮಾತ್ರ ಯೋಜನೆ ಸೌಲಭ್ಯ ಮುಂದುವರಿಸಲು ಅನುಕೂಲವಾಗುತ್ತದೆ. ಇನ್ನೂ, ಅಧಿವೇಶನದಲ್ಲಿ ಅನರ್ಹ ಫಲಾನುಭವಿಗಳಿಗೆ ಹಣ ನೀಡುವುದನ್ನು ತಡೆಯಲು ಕೈಗೊಳ್ಳುವ ಕ್ರಮಗಳ ಕುರಿತಂತೆ ಪ್ರಶ್ನೆ ಕೇಳಿದ್ದೆ. ಅದಕ್ಕೆ ಮುಖ್ಯಮಂತ್ರಿ ಅವರು ಬಯೋಮೆಟ್ರಿಕ್ ಮತ್ತು ಫೇಶಿಯಲ್ ಅಥೆಂಟಿಕೇಶನ್ ಬಳಿ ಸಮಗ್ರ ಮರುಪರಿಶೀಲನೆ ನಡೆಸಲಾಗುತ್ತದೆ ಎಂದು ಸ್ಪಷ್ಟಪಡಿಸಿದರು. ಅದರಂತೆ ಇದೀಗ ಸರ್ಕಾರ ಆದೇಶಿಸಿದೆ ಎಂದು ತಿಳಿಸಿದ್ದಾರೆ.

Gruhalakshmi scheme update ಗೃಹಲಕ್ಷ್ಮೀ ಯೋಜನೆಯ ಹಣ ನಿಮ್ಮ ಖಾತೆಗೆ ಜಮೆಯಾಗಿದೆಯೋ ಇಲ್ಲವೋ ಹೀಗೆ ಚೆಕ್ ಮಾಡಿ

ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯ ಸ್ಟೇಟಸ್  ಚೆಕ್ ಮಾಡಲು ಈ

https://play.google.com/store/apps/details?id=com.dbtkarnataka&hl=en_IN

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆದ ನಿಮಗೆ ಡಿಬಿಟಿ ಯಾಪ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ನಿಮ್ಮ ಆಧಾರ್ ಕಾರ್ಡ್ ನಂಬರ್ ನಮೂದಿಸಬೇಕು. ನಂತರ ಗೆಟ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಮೊಬೈಲಿಗೆ ಓಟಿಪಿ ಸಂಖ್ಯೆ ಬರುತ್ತದೆ. ಈ ಓಟಿಪಿ ಸಂಖ್ಯೆನ್ನು ನಮೂದಿಸಿದ ನಂತರ ಪೇಮೆಂಟ್ ಸ್ಟೇಟಸ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಗೃಹಲಕ್ಷ್ಮೀ ಬಟನ್ ಒತ್ತಿದರೆ ಸಾಕು ನಿಮ್ಮ ಖಾತೆಗೆ  ಇಲ್ಲಿಯವರೆಗೆ ಗೃಹಲಕ್ಷ್ಮೀ ಯೋಜನೆಯಿಂದ ಎಷ್ಟು ಹಣ ಜಮೆಯಾಗಿದೆ ಎಂಬ ಮಾಹಿತಿ ಸಿಗುತ್ತದೆ. ಇದರೊಂದಿಗೆ ಗೃಹಲಕ್ಷ್ಮೀ ಹಣ ಜಮೆ ಮಾಡುವ ಪ್ರಕ್ರಿಯೆ ನಿಂತಿದ್ದರೆ ಯಾವ ಕಾರಣಕ್ಕಾಗಿ ತಡೆಹಿಡಿಯಲಾಗಿದೆ ಎಂಬ ಮಾಹಿತಿಯೂ ಕಾಣಿಸುತ್ತದೆ.

Leave a Comment