Gruhalakshmi status check here : ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಿದ ಫಲಾನುಭವಿಗಳಿಗೆ ಗುಡ್ ನ್ಯೂಸ್, ಇಂದು ರಾಜ್ಯದ ಮಹಿಳೆಯರ ಖಾತೆಗೆ ಗೃಹಲಕ್ಷ್ಮೀ ಹಣ ಜಮೆಯಾಯಿತು.
ಹಾಗಾದರೆ ಯಾವ ಯಾವ ಮಹಿಳೆಯರ ಖಾತೆಗೆ ಗೃಹಲಕ್ಷ್ಮೀ ಹಣ ಜಮೆಯಾಯಿತು ನಿಮಗೇಕೆ ಹಣ ಜಮೆಯಾಗಿಲ್ಲ ನಿಮಗೆ ಹಣ ಜಮೆಯಾಗಬೇಕಾದರೆ ಏನು ಮಾಡಬೇಕು ಎಂಬುದರ ಮಾಹಿತಿ ಇಲ್ಲಿದೆ.
ಗೃಹಲಕ್ಷ್ಮೀಗೆ ನೋಂದಣಿ ಮಾಡಿಸಿದ ಫಲಾನುಭವಿಗಳ ಖಾತೆಗೆ ಇಂದು 24ನೇ ಕಂತಿನ ಹಣ ಜಮೆಯಾಯಾಯಿತು. ಹೌದು, ಈಗಾಗಲೇ ಫಲಾನುಭವಿಗಳ ಖಾತೆಗೆ ಹಣ ಗೃಹಲಕ್ಷ್ಮೀ ಯೋಜನೆಯ 24ನೇ ಕಂತಿನ ಹಣ ಜಮೆ ಮಾಡುವ ಪ್ರಕ್ರಿಯೆ ಆರಂಭವಾಗಿದೆ.ನಿಮ್ಮ ಖಾತೆಗೆ ಜಮೆಯಾಯಿತೋ ಇಲ್ಲವೋ ಅಥವಾ ಜಮೆ ಮಾಡುವ ಪ್ರಕ್ರಿಯೆ ನಿಲ್ಲಿಸಲಾಗಿದೆಯೇ ಎಂಬುದನ್ನು ಸಹ ನಿಮ್ಮ ಬಳಿ ಇರುವ ಮೊಬೈಲ್ ನಲ್ಲಿ ಕೇವಲ ಒಂದೇ ನಿಮಿಷದಲ್ಲಿ ಚೆಕ್ ಮಾಡಬಹುದು.
Gruhalakshmi status check here ಗೃಹಲಕ್ಷ್ಮೀ ಹಣ ಜಮೆಯಾಗಿದೆಯೋ ಇಲ್ಲವೋ ಹೀಗೆ ಚೆಕ್ ಮಾಡಿ
ಗೃಹಲಕ್ಷ್ಮೀ ಹಣ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ
https://play.google.com/store/apps/details?id=com.dbtkarnataka&hl=en_IN
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮ್ಮ ಆಧಾರ್ ಕಾರ್ಡ್ ನಂಬರ್ ನಮೂದಿಸಬೇಕು. ಇದಾದ ನಂತರ ಗೆಟ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು.
ಇದನ್ನೂ ಓದಿ : ನಿಮ್ಮೂರಿನಲ್ಲಿ ಯಾವ ರೈತರಿಗೆಷ್ಟು ಬೆಳೆ ಪರಿಹಾರ ಜಮೆ ಮೊಬೈಲ್ ನಲ್ಲೇ ಚೆಕ್ ಮಾಡಿ
ನಿಮ್ಮ ಮೊಬೈಲಿಗೆ ಬಂದ ಓಟಿಪಿಯನ್ನು ನಮೂದಿಸಬೇಕು. ನಂತರ ಪೇಮೆಂಟ್ ಸ್ಟೇಟಸ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಗೃಹಲಕ್ಷ್ಮೀ ಬಟನ್ ಒತ್ತಿದರೆ ಸಾಕು ನಿಮ್ಮ ಖಾತೆಗೆ ಹಣ ಜಮೆಯಾಗಿದೆಯೋ ಇಲ್ಲವೋ ಎಂಬ ಮಾಹಿತಿ ಸಿಗಲಿದೆ.
ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಯಾಗಲು ಬೇಕಾಗುವ ಅರ್ಹತೆಗಳು
ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಯಾಗಲು ಮಹಿಳೆಯು ಬಿಪಿಎಲ್, ಎಪಿಎಲ್ ಅಥವಾ ಅಂತ್ಯೋದಯ ಕಾರ್ಡ್ ನಲ್ಲಿ ಕುಟುಂಬದ ಮುಖ್ಯಸ್ಥೆಯಾಗಿ ಮಹಿಳೆಯ ಹೆಸರು ಇರಬೇಕು. ಫಲಾನುಭವಿಯು ಕರ್ನಾಟಕದ ನಿವಾಸಿಯಾಗಿರೇಬಕು. ಕುಟುಂಬದ ಮುಖ್ಯಸ್ಥೆ ಅಥವಾ ಅವರ ಪತಿ ಆದಾಯ ತೆರಿಗೆ ಪಾವತಿದಾರರಾಗಿರಬೇಕು. ಕುಟುಂಬದ ಮುಖ್ಯಸ್ಥೆ ಅಥವಾ ಅವರ ಪತಿ ಜಿಎಸ್.ಟಿ ಸಲ್ಲಿಸುವವರಾಗಿರಬಾರದು. ಮಹಿಳಾ ಸರ್ಕಾರಿ ನೌಕರರು ಈ ಯೋಜನೆಯಡಿ ಅರ್ಹರಿಲ್ಲ. ಒಂದು ಕುಟುಂಬದಲ್ಲಿ ಒಬ್ಬ ಮಹಿಳೆ ಮಾತ್ರ ಯೋಜನೆಯ ಪ್ರಯೋಜನ ಪಡೆಯಬಹುದು.
ಅರ್ಜಿ ಸಲ್ಲಿಸುವುದು ಹೇಗೆ?
ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಯಾಗಲು ಮಹಿಳೆಯರು ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕೇಂದ್ರಗಳಲ್ಲಿ ತಮ್ಮ ಹೆಸರು ನೋಂದಣಿ ಮಾಡಿಕೊಳ್ಳಬಹುದು.ಅರ್ಜಿ ಸಲ್ಲಿಸುವಾಗ ಪಡಿತರ ಜೀಟಿ ಬ್ಯಾಂಕ್ ಖಾತೆ, ಆಧಾರ್ ಕಾರ್ಡ್ ಹೊಂದಿರಬೇಕು.
ಒಂದು ಕುಟುಂಬದಲ್ಲಿ ಎಲ್ಲಾ ಮಹಿಳೆಯರಿಗೆ ಈ ಯೋಜನೆಯ ಲಾಭ ಸಿಗುವುದಿಲ್ಲ. ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದರೆ ಒಬ್ಬರಿಗೆ ಮಾತ್ರ ಗೃಹಲಕ್ಷ್ಮೀ ಯೋಜನೆಯ ಲಾಭ ಸಿಗುತ್ತದೆ.
ಗೃಹಲಕ್ಷ್ಮೀ ಯೋಜನೆಗೆ ಅರ್ಹತೆ ಪಡೆದ ಮಹಿಳೆಯರ ಖಾತೆಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿಯನ್ನು ಡಿಬಿಟಿ ಮೂಲಕ ಜಮೆ ಮಾಡಲಾಗುವುದು. ಹೌದು, ಈಗಾಗಲೇ ಡಿಬಿಟಿ ಮೂಲಕವೇ ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡಲಾಗುತ್ತಿದೆ. ಕೆಲವು ತಾಂತ್ರಿಕ ಕಾರಣಗಳಿಂದ ಅಥವಾ ಬ್ಯಾಂಕ್ ಖಾತೆ ಮತ್ತು ಆಧಾರ್ ಕಾರ್ಡ್ ಅಥವಾ ಪಡಿತರ ಚೀಟಿಯಲ್ಲಿ ಹೆಸರು ಮ್ಯಾಚ್ ಆಗದಿದ್ದರೆ ಅಥವಾ ಮಾತ್ರ ಫಲಾನುಭವಿಗಳ ಜಮೆ ಮಾಡುವುದನ್ನು ತಡೆಯಲಾಗುತ್ತಿದೆ. ಅಂತಹವರು ಹೆಸರು ವ್ಯತ್ಯಾಸವಿದ್ದರೆ ಸರಿಪಡಿಸಿದ ತಕ್ಷಣ ಅವರ ಖಾತೆಗೆ ಗೃಹಲಕ್ಷ್ಮೀ ಹಣ ಜಮೆ ಮಾಡಲಾಗುವುದು.





