Gruhalkashmi scheme 5th installment : ರಾಜ್ಯದ ಮಹಿಳೆಯರಿಗಿಲ್ಲಿದೆ ಭರ್ಜರಿ ಗುಡ್ ನ್ಯೂಸ್. ಮಹಿಳೆಯರ ಖಾತೆಗೆ ಗೃಹಲಕ್ಷ್ಮೀ ಯೋಜನೆಯ 5 ನೇ ಕಂತಿನ ಹಣ ಬಿಡುಗಡೆಯಾಗಿದೆ.
ರಾಜ್ಯದ ಮಹಿಳೆಯ ಖಾತೆಗೂ ಜಮೆಯಾಗಿದೆ. ಯಾರಿಗೆ ಎಷ್ಟು ಕಂತಿನ ಹಣ ಜಮಯಾಗಿದೆ ಎಂಬುದನ್ನು ಮಹಿಳೆಯರು ತಮ್ಮ ಬಳಿಯಿರುವ ಮೊಬೈಲ್ ನಲ್ಲಿ ಕೇವಲ ಒಂದೇ ನಿಮಿಷದಲ್ಲಿ ಚೆಕ್ ಮಾಡಿಕೊಳ್ಳಬಹುದು.
ಒಂದು ವೇಳೆ ನಿಮಗೆ ಗೃಹಲಕ್ಷ್ಮೀ ಯೋಜನೆಯ ಹಣ ನಿಮ್ಮ ಖಾತೆಗೆ ಜಮೆಯಾಗದಿದ್ದರೆ ಯಾವ ಕಾರಣಕ್ಕಾಗಿ ಜಮೆಯಾಗಿಲ್ಲ, ಅವರು ಅರ್ಹತೆ ಪಡೆದಿದ್ದಾರೋ ಇಲ್ಲವೋ? ಯಾರಿಗೆಲ್ಲಾ ಜಮೆಯಾಗಿದೆ ಎಂಬುದನ್ನು ಇಲ್ಲೇ ತಿಳಿದುಕೊಳ್ಳಬಹುದು.
ಗೃಹಲಕ್ಷ್ಮೀ ಯೋಜನೆಯ ಸ್ಟೇಟಸ್ ದಿಂದ ಅರ್ಜಿ ಸಲ್ಲಿಸಿದ ಮಹಿಳೆಯರ ಗೃಹಲಕ್ಷ್ಮೀ ಯೋಜನೆಯ ಅರ್ಜಿ ಸ್ವೀಕೃತವಾಗಿದೆಯೋ ಇಲ್ಲವೋ ಎಂಬುದನ್ನು ಸಹ ಚೆಕ್ ಮಾಡಬಹುದು.
ಇದನ್ನೂ ಓದಿ : Ayushman Bharat Arogya Card ಪಡೆದು 5 ಲಕ್ಷವರೆಗೆ ಉಚಿತ ಚಿಕಿತ್ಸೆ ಪಡೆಯಿರಿ
ಗೃಹಲಕ್ಷ್ಮೀ ಯೋಜನೆಯ ಸ್ಟೇಟಸ್ ಚೆಕ್ ಮಾಡಲು ಯಾವ ದಾಖಲೆ ಬೇಕು? ಮೊಬೈಲ್ ನಂಬರ್ ಒಂದೇ ಇದ್ದರೆ ಸಾಕೇ? ಅಥವಾ ಇನ್ನಾವುದಾದರೂ ದಾಖಲೆ ಬೇಕಾ? ಇಲ್ಲ ನಿಮ್ಮ ಬಳಿಯಿರುವ ರೇಶನ್ ಕಾರ್ಡ್ ನಂಬರ್ ಗೊತ್ತಿದ್ದರೆ ಸಾಕು, ಯಾರ ಸಹಾಯವೂ ಇಲ್ಲದೆ ಚೆಕ್ ಮಾಡಿಕೊಳ್ಳಬಹುದು.
ಈಗಾಗಲೇ ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ ನೋಂದಣಿ ಮಾಡಿಸಿದ ಫಲಾನುಭವಿಗಳ ಖಾತೆಗೆ ನಾಲ್ಕು ಕಂತುಗಳು ಜಮೆಯಾಗಿದೆ. ಈಗ ಐದನೇ ಕಂತು ಜಮೆಯಾಗಿದೆ. ನಿಮಗೆಷ್ಟು ಕಂತುಗಳು ಜಮೆಯಾಗಿದೆ? ಇಲ್ಲೇ ಚೆಕ್ ಮಾಡಿ.
Gruhalkashmi scheme 5th installment ಸ್ಟೇಟಸ್ ಚೆಕ್ ಮಾಡುವುದು ಹೇಗೆ?
ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಿದ ಫಲಾನುಭವಿಗಳು ತಮಗೆ ಎಷ್ಟು ಕಂತುಗಳು ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಲು ಈ
https://mahitikanaja.karnataka.gov.in/Gruhalakshmi/GuhalakshmiStatus?ServiceId=5630&Type=SP&DepartmentId=3136
ಲಿಂಕ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ. ನಂತರ ಅಲ್ಲಿ ತೆರೆದುಕೊಳ್ಳುವ ಪೇಜ್ ನಲ್ಲಿ Details of Gruhalakshmi status ಕೆಳಗಡೆ ನಿಮ್ಮ ರೇಶನ್ ಕಾರ್ಡ್ ನಮೂದಿಸಬೇಕು. ನಂತರ submit ಮೇಲೆ ಕ್ಲಿಕ್ ಮಾಡಬೇಕು. ಆಗ ನೀವು ಯಾವ ದಿನಾಂಕದಂದು ಅರ್ಜಿ ಹಾಕಿದ್ದೀರಿ. ನಿಮ್ಮ ಅರ್ಜಿ ಸ್ವೀಕೃತವಾಗಿದೆಯೇ ಹಾಗೂ ಯಾವ ದಿನಾಂಕ ಅರ್ಜಿ ಸ್ವೀಕೃತವಾಗಿದೆ ಎಂಬ ಮಾಹಿತಿ ಕಾಣಿಸುತ್ತದೆ. ಅದರ ಮುಂದುಗಡೆ ಇರುವ Details ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಇಲ್ಲಿಯವರೆಗೆ ಎಷ್ಟು ಕಂತುಗಳು ಜಮೆಯಾಗಿದೆ.
ಯಾವ ಯಾವ ತಿಂಗಳಲ್ಲಿ ಜಮೆಯಾಗಿದೆ. ಯಾವ ತಿಂಗಳ ಯಾವ ದಿನಾಂಕದಂದು ಜಮಯಾಗಿದೆ ಹಾಗೂ ಎಷ್ಟು ಹಣ ಜಮೆಯಾಗಿದೆ ಎಂಬ ಮಾಹಿತಿಯನ್ನು ಚೆಕ್ ಮಾಡಬಹುದು. ಇದಕ್ಕಾಗಿ ನಿಮ್ಮ ಬಳಿ ಫೋನ್ ಇದ್ದರೆ ಸಾಕು, ನಿಮ್ಮ ಫೋನ್ ಇಲ್ಲದಿದ್ದರೂ ನಿಮ್ಮ ಮನೆಯಲ್ಲಿರುವ ಇತರರ ಫೋನ್ ಬಳಸಿ ಸ್ಟೇಟಸ್ ಚೆಕ್ ಮಾಡಿಕೊಳ್ಳಬಹುದು.
Gruhalkashmi scheme 5th installment ಹಣ ಜಮೆಯಾಗಬೇಕಾದರೆ ಯಾವ ಅರ್ಹತೆಗಳು ಬೇಕು?
ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಸಿದರೆ ಸಾಲದು, ಈ ಯೋಜನೆಯ ಸೌಲಭ್ಯ ಪಡೆಯಲು ಮಹಿಳೆಯರು ಕೆಳಗಡೆ ನೀಡಲಾದ ಕೆಲವು ಅರ್ಹತೆಗಳು ಹೊಂದಿರುವುದು ಕಡ್ಡಾಯವಾಗಿದೆ.
ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯುವ ವಿತರಿಸುವ ಅಂತ್ಯೋದಯ, ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿಯಾಗಿರುತ್ತಾರೆ.
ಒಂದೇ ಕುಟುಂಬದಲ್ಲಿ ಒಬ್ಬರಿಗಿಂತ ಹೆಚ್ಚು ಮಹಿಳೆಯರಿದ್ದಲ್ಲಿ ಒಂದು ಮಹಿಳೆಗೆ ಮಾತ್ರ ಯೋಜನೆಯ ಲಾಭ ಸಿಗುತ್ತದೆ. ಕುಟುಂಬ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿದಾರರಾಗಿದ್ದರೆ ಅವರಿಗೆ ಹಣ ಜಮೆಯಾಗುವುದಿಲ್ಲ. ನೀವು ಮೇಲಿನ ಅರ್ಹತೆ ಪಡೆದಿದ್ದರೂ ಹಣ ಜಮೆಯಾಗದಿದ್ದರೆ ಆಶಾ ಕಾರ್ಯಕರ್ತೆಯರಿಗೆ ಭೇಟಿಯಾಗಬಹುದು.