ಗೃಹಲಕ್ಷ್ಮೀ ಹಣ ಬಿಡುಗಡೆ: ನಿಮಗೆಷ್ಟು ಕಂತು ಜಮೆ? ಚೆಕ್ ಮಾಡಿ

Written by Ramlinganna

Updated on:

Gruhalkashmi scheme status check  ಗೃಹಲಕ್ಷ್ಮೀ ಯೋಜನೆಯ ಎಷ್ಟು ಕಂತುಗಳು ತಮಗೆ ಜಮೆಯಾಗಿದೆ ಎಂಬುದನ್ನು ಮಹಿಳೆಯರು ಮನೆಯಲ್ಲಿಯ ಕುಳಿತು ಚೆಕ್ ಮಾಡಬಹುದು.

ಹೌದು, ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗಿದೆಯೋ ಇಲ್ಲವೋ ಹಾಗೂ ಯಾವ ತಿಂಗಳಲ್ಲಿ ಅಪ್ರೂವ್ ಆಗಿದೆ ಹಾಗೂ ಎಷ್ಟು ಕಂತುಗಳು ಜಮೆಯಾಗಿದೆ ಎಂಬುದನ್ನೆಲ್ಲಾ ಮಹಿಳೆಯರು ತಮ್ಮ ಬಳಿಯಿರುವ ಮೊಬೈಲ್ ನಲ್ಲಿ ಕೇವಲ ಒಂದೇ ನಿಮಿಷದಲ್ಲಿಚೆಕ್ ಮಾಡಬಹುದು. ಗೃಹಲಕ್ಷ್ಮೀ ಯೋಜನೆಯ ಸ್ಟೇಟಸ್ ಚೆಕ್ ಮಾಡಲು ಯಾವ ದಾಖಲೆ ಬೇಕು? ಮೊಬೈಲ್ ನಂಬರ್ ಒಂದೇ ಇದ್ದರೆ ಸಾಕೇ? ಅಥವಾ ಇನ್ನಾವುದಾದರೂ ದಾಖಲೆ ಬೇಕಾ? ಎಂಬ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ. ಕೇವಲ ನಿಮ್ಮ ರೇಶನ್ ಕಾರ್ಡ್ ನಂಬರ್ ಗೊತ್ತಿದ್ದರೆ ಸಾಕು, ಯಾರ ಸಹಾಯವೂ ಇಲ್ಲದೆ ತಮ್ಮ ಬಳಿಯಿರುವ ಮೊಬೈಲ್ ನಲ್ಲೇ ನಿಮಗೆಷ್ಟು ಕಂತುಗಳ ಹಣ ಜಮೆಯಾಗಿದೆ ಎಂಬುದನ್ನುಚೆಕ್ ಮಾಡಬಹುದು.

ಈಗಾಗಲೇ ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ ನೋಂದಣಿ ಮಾಡಿಸಿದ ಫಲಾನುಭವಿಗಳ ಖಾತೆಗೆ ನಾಲ್ಕು ಕಂತುಗಳು ಜಮೆಯಾಗಿದೆ.

Gruhalkashmi scheme status check  ರೇಶನ್ ಕಾರ್ಡ್ ನಂಬರ್ ಹಾಕಿ ಗೃಹಲಕ್ಷ್ಮೀ ಯೋಜನೆಯ ಸ್ಟೇಟಸ್ ಚೆಕ್ ಮಾಡುವುದು ಹೇಗೆ?

ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಿದ ಫಲಾನುಭವಿಗಳು ತಮಗೆ ಹಣ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ

ಗೃಹಲಕ್ಷ್ಮೀ ಯೋಜನೆ ಜಮೆ ಸ್ಟೇಟಸ್ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.

ನಂತರ ಅಲ್ಲಿ ನಿಮಗೆ ಮಾಹಿತಿ ಕಣಜ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ Details of Gruhalakshmi status ಕೆಳಗಡೆ ನಿಮ್ಮ ರೇಶನ್ ಕಾರ್ಡ್ ನಮೂದಿಸಬೇಕು.  ನಂತರ submit ಮೇಲೆ ಕ್ಲಿಕ್ ಮಾಡಬೇಕು. ಆಗ ನೀವು ಯಾವ ದಿನಾಂಕದಂದು ಅರ್ಜಿ ಹಾಕಿದ್ದೀರಿ. ನಿಮ್ಮ ಅರ್ಜಿ ಸ್ವೀಕೃತವಾಗಿದೆಯೇ ಹಾಗೂ ಯಾವ ದಿನಾಂಕ ಅರ್ಜಿ ಸ್ವೀಕೃತವಾಗಿದೆ ಎಂಬ ಮಾಹಿತಿ ಕಾಣಿಸುತ್ತದೆ. ಅದರ ಮುಂದುಗಡೆ ಇರುವ Details ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಇಲ್ಲಿಯವರೆಗೆ ಎಷ್ಟು ಕಂತುಗಳು ಜಮೆಯಾಗಿದೆ. ಯಾವ ಯಾವ ತಿಂಗಳಲ್ಲಿ ಜಮೆಯಾಗಿದೆ.

ಇದನ್ನೂ ಓದಿ ಬರ ಪರಿಹಾರ ಬಿಡುಗಡೆ: ನಿಮಗೆ ಜಮೆ ಆಗಿಲ್ಲವೇ? ಈ ನಂಬರಿಗೆ ಕರೆ ಮಾಡಿ

ಯಾವ ತಿಂಗಳ ಯಾವ ದಿನಾಂಕದಂದು ಜಮಯಾಗಿದೆ ಹಾಗೂ ಎ ಷ್ಟು ಹಣ ಜಮೆಯಾಗಿದೆ ಎಂಬ ಮಾಹಿತಿಯನ್ನು ಕೇವಲ ಒಂದೇ ನಿಮಿಷದಲ್ಲಿ ಚೆಕ್ ಮಾಡಬಹುದು. ಇದಕ್ಕಾಗಿ ನಿಮ್ಮ ಬಳಿ ಫೋನ್ ಇದ್ದರೆ ಸಾಕು, ನಿಮ್ಮ ಫೋನ್ ಇಲ್ಲದಿದ್ದರೂ ನಿಮ್ಮ ಮನೆಯಲ್ಲಿರುವ ಇತರರ ಫೋನ್ ಬಳಸಿ ಸ್ಟೇಟಸ್ ಚೆಕ್ ಮಾಡಿಕೊಳ್ಳಬಹುದು.

Gruhalkashmi scheme status check  ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗಬೇಕಾದರೆ ಯಾವ  ಅರ್ಹತೆಗಳು ಬೇಕು?

ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಸಿದರೆ ಸಾಲದು, ಈ ಯೋಜನೆಯ ಸೌಲಭ್ಯ ಪಡೆಯಲು ಮಹಿಳೆಯರು ಕೆಳಗಡೆ ನೀಡಲಾದ ಕೆಲವು ಅರ್ಹತೆಗಳು ಹೊಂದಿರುವುದು ಕಡ್ಡಾಯವಾಗಿದೆ.

ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯುವ ವಿತರಿಸುವ ಅಂತ್ಯೋದಯ, ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿಯಾಗಿರುತ್ತಾರೆ. ಒಂದೇ ಕುಟುಂಬದಲ್ಲಿ ಒಬ್ಬರಿಗಿಂತ ಹೆಚ್ಚು ಮಹಿಳೆಯರಿದ್ದಲ್ಲಿ ಒಂದು ಮಹಿಳೆಗೆ ಮಾತ್ರ ಈ ಯೋಜನೆಯ ಲಾಭ ಸಿಗುತ್ತದೆ.  ಕುಟುಂಬ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿದಾರರಾಗಿದ್ದರೆ ಅವರಿಗೆ ಹಣ ಜಮೆಯಾಗುವುದಿಲ್ಲ. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಜಿಎಸ್.ಟಿ ರಿಟರ್ನ್ಸ್ ಪಾವತಿದಾರರಾಗಿದ್ದರೆ ಅವರಿಗೆ ಹಣ ಜಮೆಯಾಗುವುದಿಲ್ಲ. ಮೇಲಿನ ಅರ್ಹತೆ ಇದ್ದವರಿಗೆ ಮಾತ್ರ ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗುವುದು.

Leave a Comment