Guest lecturer job notification : ಬಿಎ ಬಿಎಡ್ , ಬಿಎಸ್.ಸಿ ಬಿಇಡ್ ಎಂ.ಎ ಎಮ್.ಇಡಿ ಮುಗಿಸಿದ ಅಭ್ಯರ್ಥಿಗಳಿಗೆ ಇಲ್ಲಿದೆ ಗುಡ್ ನ್ಯೂಸ್. ಅತಿಥಿ ಶಿಕ್ಷಕರು ಹಾಗೂ ಅತಿಥಿ ಉಪನ್ಯಾಸಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಹೌದು, ಪ್ರಸಕ್ತ 2025-26ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ಕಾಲೇಜು, ಮೊರಾರ್ಜಿ ದೇಸಾಯಿ ವಸತಿ ಶಾಲೆ (ಉನ್ನತ್ತೀಕರಿಸಿದ) ಹಾಗೂ ಮೌಲಾನಾ ಆಜಾದ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿಯಿರುವ ಉಪನ್ಯಾಸಕರು ಹಾಗೂ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆ, ಮೊರಾರ್ಜಿ ದೇಸಾಯಿ ವಸತಿ ಶಾಲೆ, ಸರ್ಕಾರಿ ಮುಸ್ಲಿಂ ವಸತಿ ಶಾಲೆ ಮತ್ತು ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಖಾಲಿಯಿರುವ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ ಅತಿಥಿ ಉಪನ್ಯಾಸಕರು/ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕಲಬುರಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
Guest lecturer job notification ಅರ್ಜಿ ಹೇಗೆ ಎಲ್ಲಿ ಸಲ್ಲಿಸಬೇಕು?
ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು
https://dom.karnataka.gov.in/
ವೆಬ್‌ಸೈಟ್‌ದಿಂದ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿಯಿಂದ ಪಡೆದು ಭರ್ತಿ ಮಾಡಿ ತಮ್ಮ ವೈಯಕ್ತಿಕ ವಿವರಣೆಯೊಂದಿಗೆ ಎಲ್ಲಾ ಸಂಬಂಧಪಟ್ಟ ಶೈಕ್ಷಣಿಕ ದಾಖಲೆಗಳನ್ನು ದೃಢೀಕರಿಸಿ ಕಲಬುರಗಿ ನಗರದ ನಗರಾಭಿವೃದ್ಧಿ ಕಟ್ಟಡದ ಮೊದಲನೇ ಮಹಡಿಯಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿಯಲ್ಲಿ 2025ರ ಮೇ 19 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 8277799990 ಗೆ ಸಂಪರ್ಕಿಸಲು ಕೋರಲಾಗಿದೆ.
ಮಕ್ಕಳಿಗೆ ಜಿಲ್ಲಾ ಮಟ್ಟದ ಬೇಸಿಗೆ ಶಿಬಿರ ಹೆಸರು ನೋಂದಣಿಗೆ ಮೇ 14 ಕೊನೆಯ ದಿನ
ಕಲಬುರಗಿ ಜಿಲ್ಲಾ ಬಾಲಭವನ ವತಿಯಿಂದ 2025-26ನೇ ಸಾಲಿಗೆ ವಯೋಮಿತಿ 05 ರಿಂದ 16 ವರ್ಷದ ಮಕ್ಕಳಿಗೆ ಇದೇ ಮೇ 16 ರಿಂದ 30ರವರೆಗೆ ಜಿಲ್ಲಾ ಮಟ್ಟದ ಬೇಸಿಗೆ ಶಿಬಿರವನ್ನು ಆಯೋಜಿಸಲಾಗಿದ್ದು, ಆಸಕ್ತಿಯುಳ್ಳ ಮಕ್ಕಳು ತಮ್ಮ ಹೆಸರನ್ನು 2025ರ ಮೇ 14ರ ಮಧ್ಯಾಹ್ನ 1.30 ಗಂಟೆಯೊಳಗಾಗಿ ತಮ್ಮ ನೋಂದಣಿ ಮಾಡಿಕೊಳ್ಳಬೇಕೆಂದು ಕಲಬುರಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಇದನ್ನೂ ಓದಿ ನಿಮ್ಮ ಎಲೆಕ್ಷನ್ ಕಾರ್ಡ್ ಹಾಗೂ Aadhar link ಮೊಬೈಲ್ ನಲ್ಲಿ ಹೀಗೆ ಮಾಡಿ
ಈ ಶಿಬಿರದಲ್ಲಿ ಸೃಜನಾತ್ಮಕ ಹಾಗೂ ಕಿಯಾತ್ಮಕ ಚಟುವಟಿಕೆಗಳಾದ ಚಿತ್ರಕಲೆ, ಕರಕುಶಲೆ, ಜೇಡಿ ಮಣ್ಣಿನ ಕಲೆ, ಕಸದಿಂದ ರಸ, ಸಮೂಹ ಸಂಗೀತ, ಸಮೂಹ ನೃತ್ಯ, ಯೋಗ, ಕರಾಟೆ ವಿವಿಧ ಚಟುವಟಿಕೆಗಳನ್ನು ಕಲಬುರಗಿ ಆಳಂದ ಕಾಲೋನಿ ಕಿವುಡ ಮಕ್ಕಳ ಸರಕಾರಿ ಶಾಲೆಯಲ್ಲಿ ಪ್ರತಿದಿ ಬೆಳಿಗ್ಗೆ 8.30 ರಿಂದ ಮಧ್ಯಾಹ್ನ 1 ಗಂಟೆವರೆಗೆ ಉಚಿತ ಬೇಸಿಗೆ ಶಿಬಿರ ತರಬೇತಿಯನ್ನು ಆಯೋಜಿಸಲಾಗಿದೆ. ಆಸಕ್ತಿವುಳ್ಳ ಮಕ್ಕಳು ಕಲಬುರಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಕಚೇರಿಯಲ್ಲಿ 2025ರ ಮೇ 14ರ ಮಧ್ಯಾಹ್ನ 1.30 ಗಂಟೆಗೆಯೊಳಗಾಗಿ (ಸರ್ಕಾರಿ ರಜಾ ದಿನಗಳು ಹೊರತುಪಡಿಸಿ) ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು.
ಮೊದಲು ಬಂದ 60 ಮಕ್ಕಳಿಗೆ ದಾಖಲಿಸಿಕೊಳ್ಳಲಾಗುತ್ತದೆ. ಹೆಚ್ಚಿನ ವಿವರಗಳಿಗಾಗಿ ಜಿಲ್ಲಾ ಬಾಲ ಭವನ ಕಾರ್ಯಕ್ರಮ ಸಂಯೋಜಕರಾದ ಗೀತಾ ಎಮ್ ಇವರ ದೂರವಾಣಿ ಸಂಖ್ಯೆ 9686291861 ಹಾಗೂ ಕಚೇರಿ ಸಹಾಯಕರಾದ ಮಾನು ಹೂಗಾರ ಇವರ ಮೊಬೈಲ್ ಸಂಖ್ಯೆ 8904342103 ಮತ್ತು ಕಚೇರಿ ದೂರವಾಣಿ ಸಂಖ್ಯೆ: 08472-278659 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.