ಅನ್ನಭಾಗ್ಯ ಹಣ ನಿಮಗೆ ಜಮೆಯಾಗಿಲ್ಲವೇ? ಸ್ಟೇಟಸ್ ಚೆಕ್ ಮಾಡಿ

Written by Ramlinganna

Published on:

annabhagya scheme money check ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿಯಾಗಿ ವಿತರಿಸಲಾಗುವ 5 ಕೆಜಿ ಅಕ್ಕಿ ಬದಲಿಗೆ ಹಣ ಸಂದಾಯ ಮಾಡುವ ಯೋಜನೆಗೆ ಚಾಲನೆ ನೀಡಲಾಗಿದೆ. ಫಲಾನುಭವಿಗಳು ತಮಗೆ ಅನ್ನಭಾಗ್ಯದ ಹಣ ಜಮೆಯಾಗಿರುವುದನ್ನು ಚೆಕ್ ಮಾಡಬಹುದು.

ಪಡಿತರ ಚೀಟಿ ಸಕ್ರೀಯವಾಗಿರುವ ಹಾಗೂ ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಯೊಂದಿಗೆ ಲಿಂಕ್ ಮಾಡಿರುವ ಪಡಿತರ ಚೀಟಿಗಳ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಡಿಬಿಟಿಮೂಲಕ ಹಣ ವರ್ಗಾವಣೆ ಮಾಡಲಾಗಿದೆ.  ಹಣ ಜಮೆಯಾಗದೆ ಉಳಿದಿರುವ ಪಡಿತರ ಚೀಟಿದಾರರು ಕುಟುಂಬದ ಮುಖ್ಯಸ್ಥರು ಜುಲೈ 20 ರೊಳಗಾಗಿ ಬ್ಯಾಂಕ್ ಖಾತೆಗೆ ಮೊಬೈಲ್ ನಂಬರ್ ಹಾಗೂ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡಿಸಿ ಖಾತೆಯನ್ನು ಸಕ್ರಿಯಗೊಳಿಸಬೇಕು. ಇಲ್ಲದಿದ್ದರೆ ಮುಂದಿನ ತಿಂಗಳಿನ ಅನ್ನಭಾಗ್ಯದ ಹಣ ಜಮೆಯಾಗುವುದಿಲ್ಲ.

ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದಂತೆ ಸರ್ಕಾರದ ಆದೇಶದಲ್ಲಿ ಜಿಲ್ಲೆಯಲ್ಲಿರುವ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಫಲಾನುಭವಿಗಳಿಗೆ ಪ್ರತಿ ತಿಂಗಳು ಹೆಚ್ಚುವರಿಯಾಗಿ ವಿತರಿಸಲಾಗುವ 5 ಕೆ.ಜಿ. ಆಹಾರ ಧಾನ್ಯದ ಬದಲಾಗಿ ಪ್ರತಿ ಕೆಜಿಗೆ 34 ರೂಪಾಯಿಗಳಂತೆ ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ಹಣವನ್ನು ವರ್ಗಾಯಿಸಲು ಆದೇಶಿಸಲಾಗಿರುತ್ತದೆ.

ಇದನ್ನೂ ಓದಿ : ನಿಮ್ಮ ಜಾಬ್ ಕಾರ್ಡ್ ಸಕ್ರಿಯವಾಗಿದೆಯೋ ಇಲ್ಲವೋ ಮೊಬೈಲ್ ನಲ್ಲೇ ಚೆಕ್ ಮಾಡಿ

ಸರ್ಕಾರದ ಆದೇಶದಂತೆ ಆದ್ಯತಾ ಪಡಿತರ ಚೀಟಿಯ ಪ್ರತಿ ಫಲಾನುಭವಿಗೆ 5.ಕೆಚಿ ಅಕ್ಕಿಯ ಬದಲಾಗಿ ಪ್ರತಿ ಫಲಾನುಭವಿಗೆ ಪ್ರತಿ ಕೆ.ಜಿಗೆ 34 ರೂಪಾಯಿಯಂತೆ 5 ಸದಸ್ಯರಿಗೆ 170 ರೂಪಾಯಿಗಳಂತೆ ಹಾಗೂ ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿಯನ್ನು ಹೊಂದಿರುವ ಕುಟುಂಬದಲ್ಲಿ ಮೂರು ಅಥವಾ ಮೂರಕ್ಕಿಂತ ಕಡಿಮೆ ಸದಸ್ಯರಿರುವ ಕುಟುಂಬವು ಈಗಾಗಲೇ ಪ್ರತಿ ತಿಂಗಳು 35 ಕೆ.ಜಿ ಆಹಾರಧಾನ್ಯವನ್ನು ಪಡೆಯುತ್ತಿರುವುದರಿಂದ ಅಂತಹ ಅಂತ್ಯೋದಯ ಅನ್ನ ಯೋಜನೆಯ ಪಡಿತರ ಚೀಟಿ ಕುಟುಂಬಗಳಿಗೆ ನಗದು ಸೌಲಭ್ಯ ನೀಡಲಾಗುವುದಿಲ್ಲ.

annabhagya scheme money check  ನಿಮಗೆಷ್ಟು ಹಣ ಜಮೆಯಾಗಿದೆ? ಇಲ್ಲೇ ಚೆಕ್ ಮಾಡಿ

ಅನ್ನಭಾಗ್ಯದ ಯೋಜನೆಯಡಿ ಹೆಚ್ಚುವರಿಯಾಗಿ ವಿತರಿಸಲಾಗುವ ಹಣ ನಿಮ್ಮ ಖಾತೆಗೆ ಎಷ್ಟು ಜಮೆಯಾಗಿದೆ ಚೆಕ್ ಮಾಡಲು ಈ

https://ahara.kar.nic.in/lpg/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.  ನಂತರ ನೀವು ಯಾವ ಜಿಲ್ಲೆಯವರೋ ಆ ಜಿಲ್ಲೆಯ ಮೇಲ್ಗಡೆ ಕಾಣುವ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ನೇರ ನಗದು ವರ್ಗಾವಣೆಯ ಸ್ಥಿತಿ Status of DBT ಮೇಲೆ ಕ್ಲಿಕ್ ಮಾಡಬೇಕು.ನಂತರ ನಿಮ್ಮ ಆರ್.ಸಿ ನಂಬರ್ ಹಾಗೂ ಕ್ಯಾಪ್ಚ್ಯಾ ಕೋಡ್ ಹೋಕಿ ಗೋ ಮೇಲೆ ಕ್ಲಿಕ್ ಮಾಡಿದರೆ ಸಾಕು, ನಿಮಗೆಷ್ಟು ಹಣ ಜಮೆಯಾಗಿದೆ ಎಂಬುದನ್ನುಚೆಕ್ ಮಾಡಬಹುದು.

ಕಳೆದ ಮೂರು ತಿಂಗಳಲ್ಲಿ ಪಡಿತರ ಆಹಾರ ಧಾನ್ಯವನ್ನು ಪಡೆದುಕೊಂಡಿರುವ ಕುಟುಂಬಗಳು ನಗದು ವರ್ಗಾವಣೆ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ. ಪಡಿತರ ಚೀಟಿಯಲ್ಲಿ ಕುಟುಂಬದ ಮುಖ್ಯಸ್ಥರನ್ನು ಹೊಂದಿರದ ಅತವಾ 1ಕ್ಕಿಂತ ಹೆಚ್ಚು ಮುಖ್ಯಸ್ಥರನ್ನು ಹೊಂದಿರುವ ಪಡಿತರ ಚೀಟಿ ಕುಟುಂಬಗಳನ್ನು ನಗದು ವರ್ಗಾವಣೆ ಸೌಲಭ್ಯದಿಂದ ಹೊರಗಿಡಲಾಗಿದೆ.

ಹಣ ಜಮೆಯಾಗದೆ ಉಳಿದಿರುವ ಪಡಿತರ ಚೀಟಿದಾರರು ಕುಟುಂಬದ ಮುಖ್ಯಸ್ಥರು ಜುಲೈ 20 ರೊಳಗಾಗಿ ಬ್ಯಾಂಕ್ ಖಾತೆಗೆ ಮೊಬೈಲ್ ನಂಬರ್ ಮತ್ತು ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡಿಸಿ ಖಾತೆಯನ್ನು ಸಕ್ರಿಯಗೊಳಿಸಿದಲ್ಲಿ ಮಾತ್ರ ಮುಂದಿನ ತಿಂಗಳಿಂದ ಹಣ ಜಮೆಯಾಗುತ್ತದೆ. ಇದುವರೆಗೂ ಕುಟುಂಬದ ಮುಖ್ಯಸ್ಥರು ಸಕ್ರೀಯ ಬ್ಯಾಂಕ್ ಖಾತೆ ಹೊಂದಿಲ್ಲದಿದ್ದರೆ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಖಾತೆಯನ್ನು ತೆರೆದರೆ ಮುಂದಿನ ತಿಂಗಳ ಡಿಬಿಟಿಗೆ ಅರ್ಹರಾಗಿರುತ್ತಾರೆ. ಈಕಾರ್ಯವನ್ನು ಜುಲೈ 20 ರೊಳಗೆ ಮುಗಿಸಬೇಕು.

ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿಯ ಕುಟುಂಬದಲ್ಲಿ 4 ಸದಸ್ಯರಿದ್ದರೆ ಸದರು ಕುಟುಂಬವು 170 ರೂಪಾಯಿಗಳನ್ನು 5 ಸದಸ್ಯರನ್ನು ಹೊಂದಿರುವ ಕುಟುಂಬವು 510 ಹಾಗೂ 6 ಸದಸ್ಯರುಗಳನ್ನು ಹೊಂದಿರುವ ಕುಟುಂಬವು 850 ರೂಪಾಯಿಗಳನ್ನು ಪಡೆಯಲಿದ್ದಾರೆ.

ಬಾಗಲಕೋಟೆ ಜಿಲ್ಲೆಯ 2,99293 ಪಡಿತರ ಚೀಟಿ ಕುಟುಂಬದ ಮುಖ್ಯಸ್ಥ ಬ್ಯಾಂಕ್ ಖಾತೆಗೆ 17,78,08,440 ರೂಪಾಯಿಯನ್ನು ವರ್ಗಾವಣೆ ಮಾಡಲಾಗಿದೆ. ಅದೇ ರೀತಿ ಚಿತ್ರದುರ್ಗ ಜಿಲ್ಲೆಯ 2,79,836 ಪಡಿತರ ಚೀಟಿದಾರರಿಗೆ 16.23 ಕೋಟಿ ರೂಪಾಯಿ ಹಣವನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗಿದೆ. .

Leave a Comment