ಮುಂಗಾರು ಹಿಂಗಾರು ಬೆಳೆ ವಿಮೆ ಬಂದಿಲ್ಲವೇ? ಮೇ 15 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ

Written by Ramlinganna

Updated on:

ಮುಂಗಾರು ಹಿಂಗಾರು ಹಂಗಾಮಿಗೆ ಬೆಳೆ ವಿಮೆಗೆ ಅರ್ಜಿ ಸಲ್ಲಿಸಿ ಅರ್ಜಿ ತಿರಸ್ಕೃತವಾಗಿದ್ದರೆ  15 ರವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ.

ಹೌದು, ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ 2021-22ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಮಾರ್ಗದರ್ಶನದಂತೆ ಬೆಳೆ ಸಮೀಕ್ಷೆಯ ದತ್ತಾಂಶಗಳನ್ನು ರೈತರ ಬೆಳೆ ವಿಮೆಗೆ ನೋಂದಣಿಯಾದ ಪ್ರಸ್ತಾವನೆಗಳೊಂದಿಗೆ ಹೋಲಿಕೆ ಮಾಡಿ ಸರ್ಕಾರದಿಂದ ಅನುಮೋದನೆಯಾದ ವಿನಾಯಿತಿಗಳನ್ನು ಅಳವಡಿಸಿ ತಾಳೆಯಾಗಿರುವ ಪ್ರಸ್ತಾವನೆಗಳಿಗೆ ಸಂರಕ್ಷಣೆ ತಂತ್ರಾಂಶದಲ್ಲಿ ವಿಮಾ ಪರಿಹಾರ ಲೆಕ್ಕ ಮಾಡಲಾಗಿದೆ.

ತಾಳೆಯಾಗದೆ ಇರುವ ಪ್ರಸ್ತಾವನೆಗಳನ್ನು ಸಂರಕ್ಷಣೆ ತಂತ್ರಾಂಶದಲ್ಲಿ ಪರಿಶೀಲಿಸಲಾಗಿ ಮುಂಗಾರು ಹಂಗಾನಿನಲ್ಲಿ ತಿರಸ್ಕೃತಗೊಂಡ 419, ಹಿಂಗಾರು ಹಂಗಾಮಿನಲ್ಲಿ 46 ಪ್ರಸ್ತಾವನೆಗಳನ್ನು ಈಗಾಗಲೇ ರೈತ ಸಂಪರ್ಕ ಕೇಂದ್ರಗಳಿಗೆ ಕಳುಹಿಸಲಾಗಿದೆ.

ಪ್ರಸ್ತುತ ತಿರಸ್ಕೃತಗೊಂಡ ಪ್ರಸ್ತಾವನೆಗಳ ರೈತರ ಪಟ್ಟಿಯನ್ನು ತಾಲೂಕಿನ ಎಲ್ಲಾ ರೈತ ಸಂಪರ್ಕ ಕೇಂದ್ರಗಳಲ್ಲಿ ಹಾಗೂ ಗ್ರಾಮ ಪಂಚಾಯತಿಗಳಲ್ಲಿ ಪ್ರದರ್ಶಿಸಲಾಗುವುದು.

ಪ್ರಯುಕ್ತ ಸಂಬಂಧಪಟ್ಟ ರೈತರು ಆಕ್ಷೇಪಣೆ ಇದ್ದಲ್ಲಿ ಮಾತ್ರ ಮಾಹಿತಿಯನ್ನು ಪ್ರಕಟಿಸಿದ ದಿನಾಂಕದಿಂದ 15 ದಿನಗಳ ಒಳಗಾಗಿ ತಮ್ಮ ಮನವಿಯನ್ನು ಸಲ್ಲಿಸಲು ಹಾಗೂ ಮರುಪರಿಶೀಲಿಸಲು ಸದರಿ ಮನವಿಯೊಂದಿಗೆ ಬೆಳೆ ವಿವಮೆಗೆ ನೋಂದಣಿಯಾಗಿರುವ ಬೆಳೆಯನ್ನು ಬೆಳೆದಿರುವ ಕುರಿತು  2021-2022 ರ ಪಹಣಿ ಪತ್ರಿಕೆಯಲ್ಲಿ (ಆರ್.ಟಿ.ಸಿ) ವಿಮೆಗೆ ನೋಂದಾಯಿಸಿದ ಬೆಳೆ ನಮೂದಾಗಿರಬೇಕು.

ಇದನ್ನೂಓದಿ ಪಿಎಂ ಕಿಸಾನ್ 14ನೇ ಕಂತಿನ ಹಣ ಈ ರೈತರಿಗಷ್ಟೇ ಜಮೆ- ಯಾವ ರೈತರಿಗೆ ಜಮೆಯಾಗುತ್ತದೆ? ಇಲ್ಲಿದೆ ಮಾಹಿತಿ

ಬೆಂಬಲ ಬೆಲೆ ಪ್ರಯೋಜನ ಪಡೆದಿದ್ದಲ್ಲಿ ರಸೀದಿ ಹಾಗೂ ವಿಮೆಗೆ ನೋಂದಾಯಿತ ಬೆಳೆಯ ಉತ್ಪನ್ನವನ್ನು ಎಪಿಎಂಸಿ ಮಾರುಕಟ್ಟೆಗೆ ಮಾರಾಟ ಮಾಡಿದ್ದಲ್ಲಿ ದಾಖಲಾತಿಗಳನ್ನು ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು. ಯಾವುದೇ ಆಕ್ಷೇಪಣೆಗಳು ರೈತರಿಂದ ಬರದಿದ್ದರೆ ಎಲ್ಲಾ ಪ್ರಸ್ತಾವನೆಗಳನ್ನು ತಿರಸ್ಕೃರಿಸಲಾಗುವುದು ಎಂದು ಬೀದರ್ ಜಿಲ್ಲೆಯ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣಯಲ್ಲಿ ತಿಳಿಸಿದ್ದಾರೆ.

ನಿಮ್ಮ ಬೆಳೆ ವಿಮೆ ಅರ್ಜಿ ಸ್ವೀಕೃತವಾಗಿದೆಯೋ ಇಲ್ಲವೋ? ಮೊಬೈಲ್ ನಲ್ಲೇ ಚೆಕ್ ಮಾಡಿ

ರೈತರು ತಮ್ಮ ಬೆಳೆ ವಿಮೆ ಅರ್ಜಿ  ಬೆಳೆ ವಿಮಾ ಕಂಪನಿಗೆ  ಸ್ವೀಕೃತವಾಗಿದೆಯೋ ಇಲ್ಲವೋ ಹಾಗೂ ರೈತರ ವಿಮಾ ಕಂತು ಪಾವತಿಸಲಾಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು  ಈ

https://www.samrakshane.karnataka.gov.in/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಬೆಳೆ ವಿಮೆ ಪೇಜ್ ಓಪನ್ ಆಗುತ್ತದೆ. ಅಲ್ಲಿ ರೈತರು 2021-22 ಆಯ್ಕೆ ಮಾಡಿಕೊಳ್ಳಬೇಕು. ನೀವು ಮುಂಗಾರು ಹಂಗಾಮಿಗೆ ಬೆಳೆ ವಿಮೆ ಕಟ್ಟಿದ್ದರೆ Kharif ಆಯ್ಕೆ ಮಾಡಿಕೊಳ್ಳಬೇಕು. ಒಂದು ವೇಳೆ ನೀವು ಹಿಂಗಾರು ಹಂಗಾಮಿಗೆ ಬೆಳೆ ವಿಮೆ ಮಾಡಿಸಿದ್ದರೆ Rabi ಆಯ್ಕೆಮಾಡಿಕೊಳ್ಳಬೇಕು ನಂತರ ಮುಂದೆ/ Go ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ.ಅಲ್ಲಿ Farmers ಕೆಳಗಡೆ Check status ಎಂಬುದರ ಮೇಲೆ ಕ್ಲಿಕ್ ಮಾಡಬೇಕು. ಆಗ ಮತ್ತೊಂದು ಪೇಜ್ ತೆರೆದುಕೊಳ್ಳುತ್ತದೆ.

ಅಲ್ಲಿ ನೀವು ಮೊಬೈಲ್ ನಂಬರ್ ಬಾಕ್ಸ್ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮ್ಮ ಮೊಬೈಲ್ ನಂಬರ್ ಹಾಕಬೇಕು. ನಂತರ ಕ್ಯಾಪ್ಚ್ಯಾ ಕೋಡ್ ಹಾಕಬೇಕು. ಒಂದು ವೇಳೆ ನಿಮಗೆ ಕ್ಯಾಪ್ಚ್ಯಾ ಕೋಡ್ ಎರರ್ ಕಂಡರೆ ರಿಫ್ರೆಶ್ ಬಟನ್ ಮೇಲೆ ಕ್ಲಿಕ್ ಮಾಡಿದಾಗ ಮತ್ತೊಂದು ಕ್ಯಾಪ್ಚ್ಯಾ ಕೋಡ್ ಕಾಣಿಸುತ್ತದೆ. ಅದನ್ನು ಸರಿಯಾಗಿ ನಮೂದಿಸಬೇಕು. ಒಂದು ನಿಮಗೆ ಸರಿಯಾಗಿ ಕಾಣಿಸದಿದ್ದರೆ ಝೂಮ್ ಮಾಡಿ ನೋಡಬಹುದು. ನಂತರ ಸರ್ಚ್ ಮೇಲೆ ಕ್ಲಿಕ್ ಮಾಡಬೇಕು.

ಆಗ ನೀವು ಬೆಳೆ ವಿಮೆ ಯಾವಾಗ ಮಾಡಿಸಿದ್ದೀರಿ? ಬೆಳೆ ವಿಮೆಹಣ ಎಲ್ಲಿ ಪಾವತಿಸಲಾಗಿದೆ? ಬೆಳೆ ವಿಮೆ ಹಣ ಸ್ವೀಕೃತವಾಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಬಹುದು. ಇದರೊಂದಿಗೆ ನೀವು View Details ಮೇಲೆ ಕ್ಲಿಕ್ ಮಾಡಿದರೆ ಎಷ್ಟು ಎಕರೆಗೆ ವಿಮೆ ಮಾಡಿಸಿದ್ದೀರಿ? ಯಾವ ಬೆಳೆ ವಿಮೆ ಮಾಡಿಸಿದ್ದೀರಿ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.

Leave a Comment