heavy Rain alert ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಹಾಗೂ ಮಲೆನಾಡು ಭಾಗದ ಅಲ್ಲಲ್ಲಿ ಮಾರ್ಚ್ 21 ರಿಂದ ಮೂರು ದಿನಗಳ ಕಾಲ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಹೌದು, ಮೂರು ದಿನಗಳ ಕಾಲ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಭಾಗದ ಎಲ್ಲಾ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ.
ಉತ್ತರ ಒಳನಾಡಿನ ಬಾಗಲಕೋಟೆ, ಕೊಪ್ಪಳ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2 ರಿದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಳವಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಳವಾಗಲಿದೆ. ರಾಜ್ಯದಲ್ಲಿಯೇ ಕೊಪ್ಪಳ ಜಿಲ್ಲೆಯಲ್ಲಿ ಮಂಗಳವಾರ ಗರಿಷ್ಠ ಉಷ್ಣಾಂಶ 38.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು.
ಬಿಸಿಲಿನಿಂದ ತತ್ತರಿಸಿದ ಜನತೆ
ಮಾರ್ಚ್ ತಿಂಗಳ ಆರಂಭದಲ್ಲಿಯೂ ಬಿಸಿಲಿನ ಝಳ ಹೆಚ್ಚಾಗಿದೆ. ಕಲ್ಯಾಣ ಕರ್ನಾಟಕದೊಂದಿಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಬಿಸಿಲಿನ ಪ್ರಖರತೆ ಹೆಚ್ಚಾಗುತ್ತಾ ಹೋಗುತ್ತಿದೆ. ಇನ್ನೆರಡು ತಿಂಗಳ ರಣ ಬಿಸಿಲು ಇರಲಿದೆ. ಇಂತಹದರಲ್ಲಿ ಬೀದರ್ ಸೇರಿದಂತೆ ಇತರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುತ್ತಿರುವುದರಿಂದ ಬಿಸಿಲಿಗೆ ಬೆಂದಿದ ಜನಕ್ಕೆ ಮಳೆರಾಯ ತಂಪೆರೆಯುತ್ತಿದ್ದಾನೆ.
heavy Rain alert ನಿಮ್ಮೂರಿನ ಹವಾಮಾನ ವರದಿ ಬೇಕೇ? ಈ ನಂಬರಿಗೆ ಕರೆ ಮಾಡಿ
ನಿಮ್ಮೂರಿನ ಸುತ್ತಮುತ್ತ ಯಾವಾಗ ಮಳೆಯಾಗುತ್ತದೆ ಎಂಬ ಮಾಹಿತಿ ಕೇಳಬೇಕಾದರೆ ನೀವು ವರುಣಮಿತ್ರ ಸಹಾಯವಾಣಿ ನಂಬರ್ 9243345433 ಗೆ ಕರೆ ಮಾಡಬೇಕು. ಆಗ ಸಿಬ್ಬಂದಿಯು ನಿಮ್ಮೂರಿನಲ್ಲಿ ಮಳೆಯಾಗುತ್ತೋ ಇಲ್ಲವೋ ಎಂಬ ಮಾಹಿತಿಯನ್ನು ನೀಡುತ್ತಾರೆ.
ಇದನ್ನೂ ಓದಿ : 13 ಲಕ್ಷ ರೈತರಿಗೆ ಬೆಳೆ ವಿಮೆ ಪರಿಹಾರ ಬಿಡುಗಡೆ- ಸ್ಟೇಟಸ್ ಚೆಕ್ ಮಾಡಿ
ತುಮಕೂರು ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನಾಡಿ ಕೇಂದ್ರಗಳಲ್ಲಿ ಖಾಲಿಯಿರುವ 7 ಅಂಗನವಾಡಿ ಕಾರ್ಯಕರ್ತೆ ಾಗೂ 36 ಸಹಾಯಕಿಯರ ಹುದ್ದೆಗಳನ್ನು ತಾತ್ಕಾಲಿಕವಾಗಿ ಗೌರವಧನದ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಸ್ಥಳೀಯ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ.ಯನ್ನು ಏಪ್ರೀಲ್ 6 ರೊಳಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ, ಸಾಮರ್ಥ್ಯ ಸೌಧ, ತಾಲೂಕು ಪಂಚಾಯತಿ ಆವರಣ, ಚಿಕ್ಕನಾಯಕನಹಳ್ಳಿ ಇವರಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿತಾಗಿ ದೂರವಾಣಿ ಸಂಖ್ಯೆ 08133268245 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಹೊಲಿಗೆ ತರಬೇತಿಗೆ ಅರ್ಜಿ ಆಹ್ವಾನ
ಕೋಲಾರ ಜಿಲ್ಲೆಯ ಹಿಂದುಳಿದ ವರ್ಗಗಳ ಯುವ ಜನರಿಗೆ ಅಲ್ಪಾವಧಿ ಕೋರ್ಸ ಗಳ ಮೂಲಕ ಕೌಶಲ್ಯ ತರಬೇತಿ ನೀಡಲು ಅಮೃತ ಮುನ್ನಡೆ ಎಂಬ ಹೊಸ ಯೋಜನೆಯಯಲ್ಲಿ ಅಪೆರೆಲ್ ಟ್ರೇನಿಂಗ್ ಆ್ಯಂಡ್ ಡಿಸೈನ್ ಸೆಂಟರ್ ನಿಂದ ಮೂರು ತಿಂಗಳ ಕಾಲ ಉಚಿತ ತರಬೇತಿಗೆ ಅರ್ಹ ಹಿಂದುಳಿದ ವರ್ಗದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ 18 ರಿಂದ 45 ವರ್ಷಗಳ ವಯೋಮಾನದವರಾಗಿರಬೇಕು. ತರಬೇತಿಯನ್ನು ಯಶಸ್ವಿಯಾಗಿ ಪೂರೈಸಿದವರಿಗೆಶೇ. 100 ರಷ್ಟು ಉದ್ಯೋಗವನ್ನು ಒದಗಿಸಲಾಗುವುದು.
ಆಧಾರ್ ಕಾರ್ಡ್, ವಿದ್ಯಾರ್ಹತೆ ದಾಖಲೆ, ಜಾತಿ ಆದಾಯ ಪ್ರಮಾಣ ಪತ್ರ, ನಾಲ್ಕು ಫೋಟೋ ಹೊಂದಿರಬೇಕು. ಹೆಚ್ಚಿನ ಮಾಹಿತಿತಾಗಿ 08152 220222, 9740704590 ಗೆ ಸಂಪರ್ಕಿಸಲು ಕೋರಲಾಗಿದೆ.