Heavy rain alert announced : ರಾಜ್ಯದಲ್ಲಿ ಜೂನ್ 24 ರಂದು ಭಾರಿ ಮಳೆಯಾಗಲಿರುವುದರಿಂದ 8 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಹೌದು,ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು ಜೂನ್ 24 ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಜಿಲ್ಲೆಗಳಲ್ಲಿಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಜಿಲ್ಲೆಗಳಲ್ಲಿ ಸುಮಾರು 20 ಸೆಂ.ಮೀ.ಮಳೆಯಾಗುವ ಸಾಧ್ಯತೆಯಿದೆ.
Heavy rain alert announced ಜೂನ್ 22 ರಿಂದ ರಾಜ್ಯದಲ್ಲಿ ಮತ್ತೆ ಮಳೆ ಹೆಚ್ಚಾಗಲಿದೆ
ಜೂನ್ 22 ರಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯ ಅಬ್ಬರ ಹೆಚ್ಚಾಗಲಿದೆ. ಜೂನ್ 24 ರವರೆಗೆ ಉತ್ತರ ದಕ್ಷಿಣ ಒಳನಾಡು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಜೂನ್ 22 ರಂದು ಕರಾವಳಿಯ 3 ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜೂನ್ 23 ರಂದು ಕರಾವಳಿಯ 3 ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ,ಕೊಡಗು, ಮಂಡ್ಯ ಶಿವಮೊಗ್ಗ ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ನೀಡಲಾಗಿದೆ. ಬೀದರ್, ಧಾರವಾಡ, ಮೈಸೂರು, ದಾವಣಗೆರೆ ಹಾಗೂ ತುಮಕೂರುಜಿಲ್ಲೆಗಳಲ್ಲಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಮೇಘದೂತ್ ಆ್ಯಪ್ ನಲ್ಲಿ ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ
ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ
https://play.google.com/store/apps/details?id=com.aas.meghdoot&hl=en_IN&gl=US&pli=1
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು. ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.
ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.
ನಿಮ್ಮೂರಿನ ಮಳೆಯ ಮಾಹಿತಿ ಬೇಕೆ?
ನಿಮ್ಮೂರಿನಲ್ಲಿ ಮಳೆಯಾಗುವ ಬರುತ್ತದೆ ಎಂಬ ಮಾಹಿತಿ ಬೇಕೆ? ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದು.
ಇದನ್ನೂ ಓದಿ ಬರ ಪರಿಹಾರ ನಿಮಗೆಷ್ಟು ಜಮೆ? ಇಲ್ಲೆ ಚೆಕ್ ಮಾಡಿ
ರೈತರು ಕೃಷಿ ಚಟುವಟಿಕೆ ಕೈಗೊಳ್ಳುವ ಮೊದಲು ವರುಣಮಿತ್ರ ಸಹಾಯವಾಣಿ ನಂಬರ್ ಅಥವಾ ಮೇಘದೂತ್ ಆ್ಯಪ್ ಸಹಾಯದಿಂದ ಮಾಹಿತಿ ಪಡೆದುಕೊಳ್ಳಬೇಕು. ಏಕೆಂದರೆ ಸರಿಯಾದ ಹವಾಮಾನ ಇಲಾಖೆಯ ಮಾಹಿತಿ ಪಡೆದು ಕೃಷೆ ಚಟುವಟಿಕೆ ಕೈಗೊಳ್ಳುವುದರಿಂದ ರೈತರಿಗೆ ಹಾನಿಯಾಗುವುದಿಲ್ಲ. ಒಮ್ಮೆ ರೈತರು ಸರಿಯಾದ ಮಾಹಿತಿ ಪಡೆದುಕೊಳ್ಳುವುದು ಉತ್ತಮ.
ಈ ಹಿಂದೆ ಸರಿಯಾಗಿ ಮಳೆಯ ಮಾಹಿತಿ ಸಿಗುತ್ತಿರಲಿಲ್ಲ. ಹಾಗಾಗಿ ರೈತರಿಗೆ ಹಾನಿಯಾಗುತ್ತಿತ್ತು. ಈಗ ತಂತ್ರಜ್ಞಾನ ಬೆಳೆದಿದ್ದರಿಂದ ರೈತರು ತಂತ್ರಜ್ಞಾನದ ಸದುಪಯೋಗ ಪಡೆದುಕೊಳ್ಳಬೇಕು.