ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ- ಐದು ದಿನ ಮೊದಲೇ ಮಳೆ ಮಾಹಿತಿ ಬೇಕೆ? ಇಲ್ಲಿ ಕ್ಲಿಕ್ ಮಾಡಿ

Written by Ramlinganna

Published on:

ವಾಯುಭಾರ ಕುಸಿತದ  ಪ್ರಭಾವದಿಂದಾಗಿ ಮುಂಗಾರು ಚುರುಕುಗೊಂಡಿದ್ದು, ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಐದು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಹೌದು, ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ದಟ್ಟೈಸಿರುವ  ಮೋಡಗಳು ಗುಜರಾತ್ ಮೂಲಕ ಚಲಿಸುತ್ತಿರುವದರ ಪ್ರಭಾವದಿಂದಾಗಿ ಮುಂಗಾರು ಮಾರುತಗಳು ಚುರುಕುಗೊಂಡಿವೆ.

ಗಾಳಿಯ ದಿಕ್ಕು ಬದಲಾಗಿ ಪಶ್ಚಿಮದಿಂದ ಬೀಸುತ್ತಿದೆ. ಈ ಎಲ್ಲಾ ಕಾರಣಕ್ಕೆ ಕರಾವಳಿಯ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಮಂದಿನ 48 ಗಂಟೆ ಧಾರಾಕಾರ ಮಳೆ ಆಗುವ ಸೂಚನೆ ಇರುವುದರಿಂದ ಕರಾವಳಿಯ ಮೂರುಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಮುನ್ಸೂಚನೆ ನೀಡಲಾಗಿದೆ. ಇನ್ನೂ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಯಲ್ಲಿ ಮುಂದಿನ 24 ಗಂಟೆಯಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿರುವುದರಿಂದ ಈ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಮತ್ತು ಕೊಡಗು ಜಿಲ್ಲೆಯಲ್ಲಿ6 ಸೆಂ. ಮೀಟರ್ ನಿಂದ 11 ಸೆಂ. ಮೀಟರ್ ವರೆಗೆ ಮಳೆಯಾಗುವ ಸಾಧ್ಯತೆಯಿದೆ.

ಐದು ದಿನ ಮೊದಲೇ ಮಳೆಯ ಮಾಹಿತಿ ಬೇಕೇ?

ರೈತರು ಐದು ದಿನ ಮೊದಲೇ ತಮ್ಮ ಜಿಲ್ಲೆಯಲ್ಲಿ ಮಳೆಯಾಗುತ್ತೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಲು ಗೂಗಲ್ ಪ್ಸೇ ಸ್ಟೋರ್ ನಲ್ಲಿ Meghdoot ಎಂದು ಟೈಪ್ ಮಾಡಿ ಡೌನ್ಲೋಡ್ ಮಾಡಿಕೊಳ್ಳಬಹುದು. ಅಥವಾ ಈ

https://play.google.com/store/apps/details?id=com.aas.meghdoot&hl=en_IN&gl=US

ಲಿಂಕ್ ಮೇಲ ಕ್ಲಿಕ್ ಮಾಡಿ ಮೇಘದೂತ್ ಆ್ಯಪ್ ಇನಸ್ಟಾಲ್ ಮಾಡಿಕೊಳ್ಳಬಹುದು. ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿದ ನಂತರ ಇನಸ್ಟಾಲ್ ಮೇಲೆ ಕ್ಲಿಕ್ ಮಾಡಿ ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ. ನಂತರ ನೀವು ಯಾವ ಭಾಷೆಯಲ್ಲಿ ಮಾಹಿತಿ ಚೆಕ್ ಮಾಡಬೇಕೆಂದುಕೊಂಡಿದ್ದೀರೋ ಆ ಭಾಷೆಯನ್ನು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ.

ನೀವು ಇಲ್ಲಿ ಕನ್ನಡ ಭಾಷೆ ಆಯ್ಕೆ ಮಾಡಿಕೊಳ್ಳಬಹುದು. ನಂತರ ನೀವು ಯಾವ ಯಾವ ಮಾಹಿತಿಗಳನ್ನು ಚೆಕ್ ಮಾಡಬಹುದು ಎಂಬುದು ಕಾಣಿಸುತ್ತದೆ. ನಂತರ ಮುಂದೆ ಮೇಲೆ ಕ್ಲಿಕ್ ಮಾಡಿದ ಮೇಘದೂತ್ ಆ್ಯಪ್ ಲಾಗಿನ್ ಆಗಬೇಕು. ನಂತರ ನಿಮ್ಮ ಮೊಬೈಲ್ ನಂಬರ್ ನಮೂದಿಸಿ ಲಾಗಿನ್ ಆಗಬೇಕಾಗುತ್ತದೆ. ನಂತರ ವೈಲ್ ಯೂಸಿಂಗ್ ದ ಆ್ಯಪ್ ಮೇಲ ಕ್ಲಿಕ್ ಮಾಡಬೇಕು.

ಇದನ್ನೂ ಓದಿ ಪಿಎಂ ಕಿಸಾನ್ ಅನರ್ಹ ರೈತರ ಪಟ್ಟಿ ಬಿಡುಗಡೆ: ಈ ಪಟ್ಟಿಯಲ್ಲಿರುವವರಿಗೆ ಹಣ ಜಮೆಯಾಗಲ್ಲ

ಆಗ ನಿಮಗೆ ಜಿಲ್ಲೆಯ ಕನಿಷ್ಠ, ಗರಿಷ್ಠ ತಾಪಮಾನ, ಗಾಳಿಯ ವೇಗ ಹಾಗೂ ಗಾಳಿಯ ದಿಕ್ಕು ತೇವಾಂಶದ ಮಾಹಿತಿ ಕಾಣಿಸುತತ್ದೆ. ಅಲ್ಲೇ ಕಾಣುವ ಮುನ್ಸೂಚನೆ ಮೇಲೆ ಕ್ಲಿಕ್ ಮಾಡಿದಾಗ ನಿಮಗೆ ಮುಂದಿನ ಐದು ದಿನಗಳ ಕಾಲ ಹವಾಮಾನದ ವರದಿ ಕಾಣಿಸುತ್ತದೆ.

ಫೋನ್ ಮೂಲಕವೂ ಮಳೆಯ ಮಾಹಿತಿ ಪಡೆಯುವುದು ಹೇಗೆ?

ರೈತರು ತಮ್ಮ ಬಳಿಯಿರುವ ಫೋನ್ ನಿಂದ ವರುಣಮಿತ್ರ ಸಹಾಯವಾಣಿ ನಂಬರಿಗೆ ಕರೆ ಮಾಡಿಯೂ ಮಳೆಯ ಮಾಹಿತಿ ಪಡೆಯಬಹುದು. ಹೌದು, ವರುಣಮಿತ್ರ ಸಹಾಯವಾಣಿ ನಂಬರ್ 92433 45433 ನಂಬರಿಗೆ ಕರೆ ಮಾಡಿದರೆ ಸಾಕು, ನಿಮ್ಮೂರಿನಲ್ಲಿ ಮಳೆಯಾಗುತ್ತೋ ಇಲ್ಲವೋ ಎಂಬ ಮಾಹಿತಿಯನ್ನು ಕೇವಲ ಒಂದೇ ನಿಮಿಷದಲ್ಲಿ ಪಡೆಯಬಹುದು.

ಈ ಸಹಾಯವಾಣಿ ನಂಬರ್ ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸುತ್ತದೆ. ಈ ಮಾಹಿತಿ ಸಂಪೂರ್ಣ ಉಚಿತವಾಗಿರುತ್ತದೆ. ರೈತರು ಈ ಆ್ಯಪ್ ಸಹಾಯದಿಂದ ಹವಾಮಾನದ ಮಾಹಿತಿ ಪಡೆದು ತಮ್ಮ ಕೃಷಿ ಚಟುವಟಿಕೆಯನ್ನು ಮುಂದುವರಿಸಬಹುದು. ಇಂದು ಬಹಳಷ್ಟು ರೈತರು ಈ ಉಚಿತ ಸಹಾಯವಾಣಿಗೆ ಕರೆ ಮಾಡಿ ಹವಾಮಾನ ಮಾಹಿತಿಯನ್ನು ಪಡೆಯುತ್ತಿದ್ದಾರೆ.

Leave a Comment