Heavy rain alert in karnataka : ಕರ್ನಾಟಕದ ವಿವಿಧ ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಭಾಗದ ಕೆಲವು ಕಡೆಗಳಲ್ಲಿ ಭೂ ಕುಸಿತವಾಗುವ ಮುನ್ನೆಚ್ಚರಿಕೆಯನ್ನು ನೀಡಲಾಗಿದೆ.
ಮುಂದಿನ ಮೂರು ದಿನಗಳ ಕಾಲ ಮಳೆ ಹವಾಮಾನ ಕುರಿತ ಮಾಹಿತಿಯನ್ನು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರವು ಹವಾಮಾನ ಇಲಾಖೆ ವರದಿ ಆಧರಿಸಿ ಬಿಡುಗಡೆ ಮಾಡಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಒಂದು ಅಥವಾ ಎರಡು ಕಡೆಗಳಲ್ಲಿ ಜುಲೈ 17 ಹಾಗೂ 18 ರಂದು ಮಳೆಯಾಗಲಿದೆ.
ಶುಕ್ರವಾರ ಸಂಜೆ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳ ಕೆಲವೆಡೆ ಅತೀ ಹೆಚ್ಚು ಮಳೆಯಾಗುವ ಸಾಧ್ಯತೆಯಿರುವುದರಿಂದ ಈ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಇದಲ್ಲದೆ ಕರಾವಳಿ ಜಿಲ್ಲೆಗಳಲ್ಲು ಜುಲೈ 18 ಹಾಗೂ 19 ರಂದು ,ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಜುಲೈ 18 ರಂದು ಒಂದೆರಡು ಕಡೆ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
Heavy rain alert in karnataka ಐದು ದಿನ ಮೊದಲೇ ಮಳೆಯ ಮಾಹಿತಿ ಇಲ್ಲಿ ಪಡೆಯಿರಿ
ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ
https://play.google.com/store/apps/details?id=com.aas.meghdoot&hl=en_IN&gl=US&pli=1
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು. ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.
ಇದನ್ನೂ ಓದಿ : ರೈತರೇ ನಿಮ್ಮ ಜಮೀನಿನ ಹಳೇ ಪಹಣಿ ಮುಟೇಶನ್ ಹೀಗೆ ಚೆಕ್ ಮಾಡಿ
ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ಮಾಹಿತಿ ಸಿಗಲಿದೆ ಇದಾದ ನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.
ನೀವು ಈ ಯಾಪ್ ಒಮ್ಮೆ ಮೊಬೈಲ್ ನಲ್ಲಿ ಇನಸ್ಟಾಲ್ ಮಾಡಿಕೊಂಡರೆ ಸಾಕು, ಮತ್ತೆ ಮತ್ತೆ ನೀವು ಮನೆಯಲ್ಲಿಯೇ ಕುಳಿತು ಮಳೆಯ ಮಾಹಿತಿ ಪಡೆಯಬಹುದು. ಇದಕ್ಕಾಗಿ ನೀವು ಯಾವ ಹಣವೂ ಖರ್ಚು ಮಾಡಬೇಕಿಲ್ಲ. ಹವಾಮಾನ ವರದಿ, ಗಾಳಿಯ ಬೀಸುವ ದಿಕ್ಕು, ಮಂದಿನ ಐದು ದಿನದ ಹವಾಮಾನ ಮಾಹಿತಿ ಪಡೆಯಬಹುದು.





