ಇಂದಿನಿಂದ 9 ಜಿಲ್ಲೆಗಳಲ್ಲಿಭಾರಿ ಮಳೆ- ಆರೇಂಜ್ ಅಲರ್ಟ್ ಘೋಷಣೆ

Written by Ramlinganna

Updated on:

Heavy rain alert in nine districts ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ 9 ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ನೀಡಲಾಗಿದೆ.

ನೈಋತ್ಯ ಮುಂಗಾರು ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮುಂದಿನ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜುಲೈ 26  ರಂದು ಕಲಬುರಗಿ, ಬೀದರ್, ಬೆಳಗಾವಿ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ ಹಾಗೂ ಕೊಡಗು ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ನೀಡಲಾಗಿದೆ. ಅದೇ ರೀತಿ ಹಾಸನ, ಚಿತ್ರದುರ್ಗ, ಬಳ್ಳಾರಿ ಕೊಪ್ಪಳ, ಯಾದಗಿರಿ ಹಗೂ ರಾಯಚೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಜುಲೈ 27 ವಿಜಯಪುರ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಜುಲೈ 28 ರಂದು ಉಡುಪಿ, ಕೊಡಗು ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Heavy rain alert in nine districts ಕಲಬುರಗಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ

ಜುಲೈ 26 ರಂದು ಕಲಬುರಗಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ಜಿಲ್ಲಾಡಳಿತ ಬುಧವಾರ ಜಿಲ್ಲೆಯ ಶಾಲೆಗಳು, ಅಂಗನವಾಡಿಗಳಿಗೆ ರಜೆ ಘೋಷಿಸಿದೆ.

ಇದನ್ನೂ ಓದಿ : ಜುಲೈ 27 ರಂದು ಪಿಎಂ ಕಿಸಾನ್ 14ನೇ ಕಂತಿನ ಹಣ ರೈತರ ಖಾತೆಗೆ ಜಮೆ ಯಾರ್ಯಾರಿಗೆ ಜಮೆಯಾಗಲಿದೆ ಚೆಕ್ ಮಾಡಿ

ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಬಿಟ್ಟು ಬಿಡದೆ ಮಳೆ ಸುರಿಯುತ್ತಿದೆ. ಜಿಲ್ಲೆಯಲ್ಲಿ ರೆಡ್ ಅಲರ್ಟ್ ಇರುವ ಕಾರಣ ಇನ್ನೂ ಹೆಚ್ಚಿಗೆ ಮಳೆ ಸುರಿಯುವ ಸಾಧ್ಯತೆಗಳು ಇವೆ. ಆದ್ದರಿಂದ ಮಕ್ಕಳ ಸುರಕ್ಷತೆ ದೃಷ್ಟಿಯಿಂದಾಗಿ ಜಿಲ್ಲಾದ್ಯಂತ ಶಾಲೆಗಳು ಹಾಗೂ ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ ಎಂದು ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನೂಮ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಭಾರಿ ಮಳೆಯ ಮುನ್ಸೂಚನೆ – ಬೀದರ್ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಬೀದರ್ ಜಿಲ್ಲಾದ್ಯಂತ ಜುಲೈ 27 ರಂದು ಭಾರಿ ಮಳೆಯಾಗುವ ಮುನ್ಸೂಚನೆ ಇರುವದರಿಂದ ಜಿಲ್ಲೆಯ ಶಾಲಾ, ಕಾಲೇಜು ಹಾಗೂ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಬುಧವಾರ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಲ್ಲಿ 100 ರಿಂದ 130  ಮಿ.ಮೀ ಮಳೆಯಾಗುವ ಸಾಧ್ಯತೆಯಿದೆ. ಯಾರೂ ಕೂಡ ಅನಗತ್ಯವಾಗಿ ಹೊರಗೆ ಓಡಾಡಬಾರದು. ತಗ್ಗು ಪ್ರದೇಶ, ಹಳ್ಳ, ನದಿಗೆ ಹೊಂದಿಕೊಂಡಿರುವ ಪ್ರದೇಶದ ಜನ ಎಚ್ಚರಿಕೆ ವಹಿಸಬೇಕು.  ನೀರು ಹರಿಯುತ್ತಿರುವ ಮಾರ್ಗಗಳನ್ನು ಜನ ದಾಡಬಾರದು ಎಂದು ತಿಳಿಸಿದ್ದಾರೆ.

ಆಗಸ್ಟ್ 3 ರವರೆಗೆ ಜಿಲ್ಲೆಯಲ್ಲಿ ಸರಸರಿ ಮಳೆ ಸಾಧ್ಯತೆ

ಮೈಸೂರು ಜಿಲ್ಲೆಯಲ್ಲಿ ದೀರ್ಘಾವಧಿ ಹವಾಮಾನ ಮುನ್ಸೂಚನೆ ಪ್ರಕಾರ ಆಗಸ್ಟ್ 3 ರವರೆಗೆ ಸರಾಸರಿ ಮಳೆಯಾಗುವ ಸಂಭವ ಇರುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಪಶ್ಚಿಮ ಘಟದಲ್ಲಿ ವರುಣನ ಅಬ್ಬರ ಮುಂದುವರೆದಿದ್ದು, ಗೋವಾ ರೈಲ್ವೆ ಮಾರ್ಗದ ದೂಧಸಾಗರದ ಬಳಿ ಭಾರಿ ಭೂಕುಸಿತ ಉಂಟಾಗಿದೆ. ಈ ಹಿನ್ನೆಲೆ ಕೆಲ ರೈತಲುಗಳ ಸಂಚಾರವನ್ನು ನೈರುತ್ಯ ರೈಲ್ವೆ ಸ್ಥಗಿತಗೊಳಿಸಿದೆ.

ಬೆಳಗಾವಿ ಸೇರಿ ವಿವಿಧ ಕಡೆ ಸುರಿಯುತ್ತಿರುವ ಧಾರಾಕಾರ ಮಳೆಗೆ ದೂಧಸಾಗರ ಜಲಪಾತದ ಬಳಿಯ ಸುರಂಗ ಮಾರ್ಗದಲ್ಲಿ ಭಾರಿ ಪ್ರಮಾಣದಲ್ಲಿಗುಡ್ಡ ಕುಸಿತಗೊಂಡಿದ್ದು, ಗೋವಾಕ್ಕೆ ತೆರಳುವ ರೈಲುಗಳನ್ನು ರದ್ದುಗೊಳಿಸಲಾಗಿದೆ. ಗುಡ್ಡ ಕುಸಿತದಿಂದ ರೈಲು ಹಳಿಯ ಮೇಲೆ ಮಣ್ಣು ಬಿದ್ದಿದೆ.

ಕೃಷ್ಣಾ  ನದಿ ನೀರಿನ ಮಟ್ಟ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಮಹಾರಾಷ್ಟ್ದದ ವಿವಿಧ ಜಲಾಶಯಗಳಿಂದ ದೂಧಗಂಗಾ ನದಿಯಿಂದ 28,160 ಕ್ಯೂಸೆಕ ನೀರು ಹರಿದು ಬರುತ್ತಿದೆ.

Leave a Comment