rain alert in three district ಕರಾವಳಿಯಲ್ಲಿ ವ್ಯಾಪಕ ಮಳೆಯಾಗುವ ಹಿನ್ನೆಯಲ್ಲಿ ಜುಲೈ 7 ರಂದು ಉತ್ತರ ಕನ್ನಡ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಮುಂದಿನ 24 ಗಂಟೆಯಲ್ಲಿ ಈ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಯ ಶಿಕ್ಷಣ ಸಂಸ್ಥೆಗಳಲ್ಲಿ ರಜೆ ಘೋಷಿಸಲಾಗಿದೆ.
ದಕ್ಷಿಣ ಜಿಲ್ಲೆಯ ಎಲ್ಲಾಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಯೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.
ಉಡುಪಿ ಜಿಲ್ಲೆಯಲ್ಲಿಯೂ ಎಲ್ಲಾ ಅಂಗನವಾಡಿ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ಆದೇಶ ಹೊರಡಿಸಿದ್ದಾರೆ.
ಭಾರತೀಯ ಹವಾಮನ ಇಲಾಖೆಯ ಪ್ರಕಾರ ಜುಲೈ 7 ರಂದು 204.5 ಮಿ.ಮೀ ಮಳೆಯಾಗುವ ಸಾಧ್ಯತೆಯಿದೆ. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ, ತೀರ ಸಮುದ್ರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸಬೇಕು. ಮೀನುಗಾರರು ಸಮುದ್ರಕ್ಕೆ ಇಳಿಯಬಾರದೆಂದು ಸೂಚನೆ ನೀಡಲಾಗಿದೆ. ಪ್ರವಾಸಿಗರು ಸಾರ್ವಜನಿಕರು ನದಿ ತೀರಕ್ಕೆ ಸಮುದ್ರ ತೀರಕ್ಕೆತೆರಳದಂತೆ ಸೂಚಿಸಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಮುಂದುವರೆದು, ಕರಾವಳಿ ಜಿಲ್ಲೆಗಳಿಗೆ ಜುಲೈ 8 ಕ್ಕೆ ಆರೇಂಜ್ ಅಲರ್ಟ್ ಹಾಗೂ ಜುಲೈ 9 ಮತ್ತು 10 ರಂದು ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ಇದನ್ನೂ ಓದಿ : ನಿಮ್ಮ ಜಮೀನಿನ ಅಕ್ಕಪಕ್ಕ ಯಾರಿಗೆಷ್ಟು ಜಮೀನಿದೆ? ಚೆಕ್ ಮಾಡಿ
ಪ್ರಾಕೃತಕಿ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ 1077 ಅಥವಾ 0824 2442590 ಗೆ ಸಂಪರ್ಕಿಸಲು ಕೋರಲಾಗಿದೆ.
ಕೊಡಗು ಜಿಲ್ಲೆಯಾದ್ಯಂತ ಧಾರಾಕಾರ ಮಳೆ- ಇಂದು ಶಾಲಾ ಕಾಲೇಜಿಗೆ ರಜೆ
ಕೊಡಗು ಜಿಲ್ಲೆಯಾದ್ಯಂತ ಗುರುವಾರ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿತ್ತು. ಭಾರಿ ಗಾಳಿ ಮಳೆಯ ಹಿನ್ನೆಲೆಯಲ್ಲಿ ಶುಕ್ರವಾರ ಜಿಲ್ಲೆಯ ಅಂಗನವಾಡಿ ಸೇರಿದಂತೆ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಭಾರಿ ಮಳೆಗೆ ಭಾಗಮಂಡಲ ತ್ರಿವೇಣಿ ಸಂಗಮ ಮುಳುಗಡೆ ಆತಂಕ ಎದುರಾಗಿದೆ. ಮಳೆ ತೀವ್ರಗೊಂಡಲ್ಲಿ ಭಾಗಮಂಡಲ- ಮಡಿಕೇರಿ ನಡುವಿನ ರಸ್ತೆ ಸಂಪರ್ಕ ಕಡಿತಗೊಳ್ಳುವ ಸಾಧ್ಯತೆಯಿದೆ. ಕಾವೇರಿ ನದಿ ಪಾತ್ರದ ಜನರಿಗೆ ಪ್ರವಾಹ ಭೀತಿ ಉಂಟಾಗಿದೆ.
rain alert in three district ಕರಾವಳಿಯಲ್ಲಿ ಅಬ್ಬರದ ಮಳೆ
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಮುಂಗಾರು ಮಳೆ ಇದೀಗ ಚುರುಕುಗೊಂಡಿದೆ. ಕುಮಾರಧಾರ, ನೇತ್ರಾವತಿ, ಸೌಪರ್ಣಿಕಾ, ವಾರಾಹಿ, ಶಾಂಭಾವಿ ಮತ್ತು ಗುಂಡಬಾಳ ಸೇರಿ ಹಲವು ನದಿಗಳ ನೀರಿನ ಮಟ್ಟ ಹೆಚ್ಚಳವಾಗಿದೆ.
ರಾಜ್ಯದಲ್ಲಿ ಒಂದೆಡೆ ಮಳೆಯಾದರೆ ಇನ್ನೊಂದೆಡೆ ಮಳೆಯ ಕೊರತೆ
ರಾಜ್ಯದಲ್ಲಿ ಮುಂಗಾರು ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಪ್ರವೇಶ ಮಾಡಿದ್ದರೂ ಸಹ ಉತ್ತರ ಕರ್ನಾಟಕದ ಭಾಗದಲ್ಲಿ ಮಳೆಯ ತೀವ್ರ ಕೊರತೆ ಕಾಣಿಸುತ್ತಿದೆ.ಇನ್ನೂ ಬಹುತೇಕ ರೈತರು ಬಿತ್ತನೆ ಮಾಡಿಲ್ಲ. ಕೆಲವು ಕಡೆ ರೈತರು ಬಿತ್ತನೆ ಮಾಡಿದ್ದರೂ ಮೊಳಕೆಯೊಡೆಯದೆ ರೈತರು ಸಂಕಷ್ಟದಲ್ಲಿದ್ದಾರೆ. ಹೀಗಾಗಿ ಪ್ರಸಕ್ತ ವರ್ಷ ರೈತರು ತೀವ್ರ ಸಂಕಷ್ಟಕ್ಕೊಳಗಾಗಿದ್ದಾರೆ.
ಕಳೆಡೆರಡು ದಿನಗಳಿಂದ ಮೋಡ ಕವಿದ ವಾತಾವರಣವಿದ್ದರೂ ಮಳೆಯಾಗುತ್ತಿಲ್ಲ.ಇನ್ನೇನು ಮಳೆಯಾಗುತ್ತದೆ ಎಂಬ ನಿರೀಕ್ಷೆಯಲ್ಲಿರುವ ಕಾರ್ಮೋಡಗಳು ಕಣ್ಮರೆಯಾಗುತ್ತಿವೆ. ಇದರಿಂದಾಗಿ ಆಕಾಶದತ್ತ ನೋಡುವ ರೈತರು ನಿಟ್ಟುಸಿರು ಬಿಡುತ್ತಿದ್ದಾರೆ. ಮಳೆರಾಯ ಎಲ್ಲಾ ಕಡೆ ಕರುಣಿಸಿದರೆ ಒಳ್ಳೆಯದೆಂದು ಬಹುತೇಕ ರೈತರು ಪ್ರಾರ್ಥನೆಯಲ್ಲಿ ತೊಡಗಿದ್ದಾರೆ.
ವರುಣಮಿತ್ರ ಸಹಾಯವಾಣಿಗೆ ಕರೆ ಮಾಡಿ ಮಳೆಯ ಮಾಹಿತಿ ಪಡೆಯಿರಿ
ರೈತರು ಮನೆಯಲ್ಲಿಯೇ ಕುಳಿತು ಮಳೆ ಯಾವಾಗ ಸುರಿಯುತ್ತದೆ ಎಂಬುದನ್ನು ಈಗ ಮನೆಯಲ್ಲಿಯೇ ಕುಳಿತು ವರುಣಮಿತ್ರ ಸಹಾಯವಾಣಿ ನಂಬರ್ 92433 45433 ನಂಬರಿಗೆ ಕರೆ ಮಾಡಿ ತಿಳಿದುಕೊಳ್ಳಬಹುದು.