ಇಂದಿನಿಂದ ಮೂರು ದಿನ ಭಾರಿ ಮಳೆಯಾಗುವ ಸಾಧ್ಯತೆ

Written by Ramlinganna

Published on:

Heavy rain alert three days ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 21 ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ, ಬೆಂಗಳೂರು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ 6 ರಿಂದ 11 ಸೆಂ.ಮೀವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಕೊಡಗು ಜಿಲ್ಲೆಗೆಮೇ 19 ರಿಂದ 21 ರವರೆಗೆ ಆರೇಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಮೇ 20 ರಂದು ಶಿವಮೊಗ್ಗ ಜಿಲ್ಲೆಗೆ ಆರೇಂಜ್ ಅಲರ್ಟ್ ನೀಡಲಾಗಿದೆ.

ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗುವ ಸಾಧ್ಯತೆಯಿದೆ  ಬೆಂಗಳೂರಿನಲ್ಲಿ ಶನಿವಾರ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣವಿತ್ತು. ಮಧ್ಯಾಹ್ನದ ನಂತರ ಕೆಲವು ಪ್ರದೇಶಗಳಲ್ಲಿ ಮಳೆಯಾಯಿತು.

ಕಲಬುರಗಿ ಜಿಲ್ಲೆಯಲ್ಲಿ ಸಾಯಂಕಾಲ ಮೋಡ ಕವಿದ ವಾತಾವರಣವಿತ್ತು. ನಂತರ ಕೆಲಹೊತ್ತು ಗುಡುಗು ಮಿಂಚಿನ ಸದ್ದು ಇತ್ತು.ಅಲ್ಲಲ್ಲಿ ಚದುರಿತ ಮಳೆಯಾಯಿತು. ಇದರಿಂದಾಗಿ ತಂಪಾದ ವಾತಾವರಣ ಏರ್ಪಟ್ಟಿತ್ತು.

ಮೇಘದೂತ್ ಆ್ಯಪ್  ನಲ್ಲಿ ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ

ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ

https://play.google.com/store/apps/details?id=com.aas.meghdoot&hl=en_IN&gl=US&pli=1

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು.  ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.

ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.

Heavy rain alert three days ನಿಮ್ಮೂರಿನ ಮಳೆಯ ಮಾಹಿತಿ ಬೇಕೆ?

ನಿಮ್ಮೂರಿನಲ್ಲಿ ಮಳೆಯಾಗುವ ಬರುತ್ತದೆ ಎಂಬ ಮಾಹಿತಿ ಬೇಕೆ?  ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದು.

ಮಳೆಯ ಮಾಹಿತಿ ನೀಡಲು ಬಂದಿವೆ ಮೊಬೈಲ್ ಆ್ಯಪ್

ನೀವು ಮನೆಯಲ್ಲಿಯೇ ಮಳೆಯ ಮಾಹಿತಿ ಚೆಕ್ ಮಾಡಲು ಮೇಘದೂತ, ಮೌಸಮ್ ಆ್ಯಪ್ ಗಳು ಇವೆ. ಈ ಆ್ಯಪ್ ಗಳನ್ನು ನಿಮ್ಮ ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿಕೊಂಡರೆ ಸಾಕು, ನಿಮಗೆ ಮುಂದಿನ ಐದು ದಿನಗಳ ಮಳೆಯ ಮಾಹಿತಿಯನ್ನು ಚೆಕ್ ಮಾಡಬಹುದು.

ಇದನ್ನೂ ಓದಿ ಮುಟೇಶನ್ ಪ್ರಕಾರ ನಿಮಗೆಷ್ಟು ಎಕರೆ ಜಮೀನಿದೆ? ಇಲ್ಲೇ ಚೆಕ್ ಮಾಡಿ

ಗುಡುಗು ಸಿಡಿಲಿನ ಮಾಹಿತಿ ನೀಡಲು ಬಂದಿವ್ ಆ್ಯಪ್ ಗಳು

ಗುಡುಗು ಸಿಡಿಲು ಬೀಳುವ ಐದು, ಹತ್ತು ನಿಮಿಷ ಮೊದಲೇ ಸಿಡಿಲಿನ ಮಾಹಿತಿ ನೀಡಲು ಸಿಡಿಲು ಹಾಗೂ ದಾಮಿನಿ ಆ್ಯಪ್ ಗಳು ಇವೆ.ಈ ಆ್ಯಪ್ ಗಳನ್ನು ಮೊಬೈಲ್ ನಲ್ಲಿ ಇನಸ್ಟಾಲ್ ಮಾಡಿಕೊಂಡು ಸಿಡಿಲು ಬಡಿಯುವ ಐದು ನಿಮಿಷ ಮೊದಲೇ ಮಾಹಿತಿ ಪಡೆಯಬಹುದು. ಈ ಆ್ಯಪ್ ರೈತರಿಗೆ ತುಂಬಾ ಉಪಯುಕ್ತವಾಗಲಿದೆ. ಹೌದು, ಈ ಆ್ಯಪ್ ಸಹಾಯದಿಂದ ಸಿಡಿಲಿನ ಮಾಹಿತಿಯನ್ನು ಪಡೆಯಬಹುದು.

Leave a Comment