ಇಂದಿನಿಂದ ನಾಲ್ಕು ದಿನ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

Written by Ramlinganna

Published on:

Heavy rain alert today : ಬಂಗಾಳ ಕೊಲ್ಲಿಯ ನೈಋತ್ಯದಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಬೆಂಗಳೂರು ಸೇರಿದಂತೆ ರಾಜ್ಯದ ಐದು ಜಿಲ್ಲೆಗಳಲ್ಲಿ ಶನಿವಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಯೂಟೂಬ್ ಚಾನೆಲ್ ಸಬಸ್ಕ್ರೈಬ್ ಮಾಡಿ ಕೃಷಿ ಮಾಹಿತಿ ಪಡೆಯಿರಿ

ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಈ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ತುಮಕೂರು ಹಾಗೂ ಚಾಮರಾಜನಗರ ಜಿಲ್ಲೆಯ ಕೆಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದೆಡೆ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಶನಿವಾರದಿಂದ ನಾಲ್ಕು ದಿನ ರಾಜ್ಯದ ವಿವಿಧೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಡಿಸೆಂಬರ್ 2 ರಂದು ಮೂರು ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ನೀಡಲಾಗಿದೆ. ಅದೇ ರೀತಿ ಡಿಸೆಂಬರ್ 2 ರಿಂದರಿ 10 ಜಿಲ್ಲೆಗಳಿಗೆ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.ಡಿಸೆಂಬರ್ 3 ರಂದು  ರಾಜ್ಯದ  12 ಜಿಲ್ಲೆಗಳಿಗೆ  ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

Heavy rain alert today  ನಿಮ್ಮೂರಿನಲ್ಲಿ ಮಳೆ ಯಾವಾಗ ಬರುತ್ತದೆ? ಈ ಕೆಳಗಿನ ನಂಬರಿಕೆ ಕರೆ ಮಾಡಿ

ನಿಮ್ಮೂರಿನ ಸುತ್ತಮುತ್ತ ಯಾವಾಗ ಮಳೆಯಾಗುತ್ತದೆ ಎಂಬ ಮಾಹಿತಿ ಪಡೆಯಲು ನೀವು ಇಲ್ಲಿ ನೀಡಲಾಗಿರುವ ನಂಬರಿಗೆ ಕರೆ ಮಾಡಿದರೆ ಸಾಕು, ನಿಮಗೆ ಕುಳಿತಲ್ಲೇಮಾಹಿತಿ ಸಿಗಲಿದೆ.

ಹೌದು, 92433 45433 ನಂಬರಿಗೆ ಕರೆ ಮಾಡಿದರೆ ಸಾಕು ನಿಮಗೆ ಅಂದಿನ ಹವಾಮಾನ ಮಳೆ ಮಾಹಿತಿ ಸಿಗಲಿದೆ. ಇದಕ್ಕಾಗಿ ನೀವು ಯಾವ ಶುಲ್ಕ ಪಾವತಿಸಬೇಕಿಲ್ಲ. ಉಚಿತವಾಗಿ ರೈತರು ಮನೆಯಲ್ಲಿಯೇ ಕುಳಿತು ಮಾಹಿತಿ ಪಡೆಯಬಹುದು.

ಇದನ್ನೂ ಓದಿ ಸರ್ವೆ ನಂಬರ್ ಹಾಕಿ ಜಮೀನಿನ ಮುಟೇಶನ್ ಚೆಕ್ ಮಾಡಿ

ನಿಮಗೆ ಮುಂದಿನ 48 ಗಂಟೆಗಳ ಅವಧಿಯಲ್ಲಿ ಮಳೆಯಾಗುತ್ತೋ ಇಲ್ಲವೋ ಎಂಬ ಮಾಹಿತಿ ಸಿಗುತ್ತದೆ. ಇದರೊಂದಿಗೆ ಗಾಳಿಯ ವೇಗ ಮಳೆಯ ಪ್ರಮಾಣ ಸೇರಿದಂತೆ ಹವಾಮಾನ ವರದಿಯ ಇನ್ನಿತರ ಮಾಹಿತಿ ಸಿಗಲಿದೆ.

Heavy rain alert today ಮೇಘದೂತ್ ಆ್ಯಪ್  ನಲ್ಲಿ ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ

ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ

https://play.google.com/store/apps/details?id=com.aas.meghdoot&hl=en_IN&gl=US&pli=1

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು.  ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.

ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.

Leave a Comment