heavy rain alert two days : ರಾಜ್ಯದಲ್ಲಿ ಇಂದಿನಿಂದ ಎರಡು ದಿನ ಗುಡುಗು ಸಹಿತ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಈಗಾಗಲೇ ಅಲ್ಲಲ್ಲಿ ಗುಡುಗು ಸಿಡಿಲು ಸಹಿತ ಅಲ್ಲಲ್ಲಿ ಮಳೆಯಾಗುತ್ತಿರುವುದು ತಮಗೆಲ್ಲಾ ಗೊತ್ತಿದ್ದ ಸಂಗತಿ. ಕೆಲವು ಜಿಲ್ಲೆಗಳಲ್ಲಿ ಮಳೆಯಾದರೆ ಇನ್ನೂ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿಲ್ಲ. ಆದರೂ ಮುಂಗಾರುಪೂರ್ವ ಮಳೆಯಿಂದಾಗಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ತಂಪಾದ ವಾತಾವರಣ ನಿರ್ಮಾಣವಾಗಿದೆ.
ಇನ್ನೂ ಎರಡು ದಿಗಳ ಕಾಲ ರಾಜ್ಯದಲ್ಲಿ ಕೆಲವು ಕಡಮೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಯಾವ ಜಿಲ್ಲೆಯಲ್ಲಿ ಯಾವ ಯಾವ ದಿನ ಮಳೆಯಾಗಲಿದೆ ಎಂಬ ಮಾಹಿತಿಯನ್ನುಇಲ್ಲಿನೀಡಲಾಗಿದೆ.
ಭಾರತ ಹವಾಮಾನ ಇಲಾಖೆ ಪ್ರಕಾರ, ಶನಿವಾರ ಮತ್ತು ಭಾನುವಾರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ. ದಕ್ಷಿಣ ಕನ್ನಡ ಮತ್ತು ಉಡುಪಿಯಾದ್ಯಂತ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕರ್ನಾಟಕದ ಉತ್ತರ ಕನ್ನಡ, ಬೆಳಗಾವಿ, ಹಾವೇರಿ, ಧಾರವಾಡ, ಗದಗ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿಯೂ ಮಳೆಯಾಗುವ ನಿರೀಕ್ಷೆಯಿದೆ. ಗಂಟೆಗೆ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಮುನ್ಸೂಚನೆ ಇದೆ. ದಕ್ಷಿಣ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದ್ದು, ಜೊತೆಗೆ ಬಿರುಗಾಳಿಯೂ ಬೀಸುವ ಮುನ್ಸೂಚನೆ ನೀಡಲಾಗಿದೆ.
heavy rain alert two days ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆ
ಮೇ ತಿಂಗಳ ಆರಂಭದಲ್ಲಿ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುತ್ತಿದ್ದು, ಇನ್ನು ಒಂದು ವಾರ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 1 ರಿಂದ ಮೇ 3 ರವರೆಗೆ ಮಧ್ಯಾಹ್ನ ಮತ್ತು ಸಂಜೆ ವಿರಳ ಮಳೆಯಾಗುವ ನಿರೀಕ್ಷೆಯಿದೆ. ಮೇ 4ರಿಂದ ಮಳೆಯ ತೀವ್ರತೆ ಹೆಚ್ಚಾಗಿದೆ. ಮೇ5 ಹಾಗೂ ಮೇ 6 ರಂದು ಮಳೆಯ ಅಬ್ಬರ ಜೋರಾಗಲಿದೆ.
ಶುಕ್ರವಾರ ರಾತ್ರಿಯಿಡಿ ಬೆಂಗಳೂರಿನಲ್ಲಿ ಮಳೆಯಾಗಿದ್ದು, ನಿವಾಸಿಗಳಿಗೆ ಬಿಸಿಲಿನ ತಾಪದಿಂದ ಮುಕ್ತಿ ಸಿಕ್ಕಿದೆ.ಕಮ್ಮನಹಳ್ಳಿ ಮುಖ್ಯ ರಸ್ತೆ, ಮರಿಯಪ್ಪ ರಸ್ತೆ, ಎಚ್‌ಆರ್‌ಬಿಆರ್ ಲೇಔಟ್, ಕಲ್ಯಾಣ್ ನಗರ ಮತ್ತು ಬಾಣಸವಾಡಿ ಪ್ರದೇಶಗಳು ಮಳೆ ಕೆಲ ಅನಾಹುತ ಸೃಷ್ಟಿಸಿದೆ.
heavy rain alert two days ನಿಮ್ಮೂರಿನ ಮಳೆಯ ಮಾಹಿತಿ ಬೇಕೆ?
ನಿಮ್ಮೂರಿನಲ್ಲಿ ಮಳೆಯಾಗುವ ಬರುತ್ತದೆ ಎಂಬ ಮಾಹಿತಿ ಬೇಕೆ? ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದು.
heavy rain alert two days ಐದು ದಿನ ಮೊದಲೇ ಮಳೆಯ ಮಾಹಿತಿ ಇಲ್ಲಿ ಪಡೆಯಿರಿ
ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ
https://play.google.com/store/apps/details?id=com.aas.meghdoot&hl=en_IN&gl=US&pli=1
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು. ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.
ಇದನ್ನೂ ಓದಿ : ಮಹಿಳೆಯರಿಗೆ ಗುಡ್ ನ್ಯೂಸ್ ಈ ವಾರದಲ್ಲಿ ಗೃಹಲಕ್ಷ್ಮೀ 3 ಕಂತಿನ ಹಣ ಜಮೆ
ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.