ಪೂರ್ವ ಅರಬ್ಬಿ ಸಮುದ್ರದ ಕರ್ನಾಟಕದ ಕರಾವಳಿಯಲ್ಲಿ ಕಡಿಮೆ ಒತ್ತಡವಿರುವ ಕಾರಣ ಕರಾವಳಿ ಜಿಲ್ಲೆಗಳ ಬಹುತೇಕ ಜಿಲ್ಲೆಗಳಲ್ಲಿ ಜೂನ್ 28ರವರೆಗೆ ಗುಡುಗು ಸಹಿತ ವ್ಯಾಪಕ (heavy rain alert) ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನ ಹಲವು ಭಾಗಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ 26ರವರೆಗೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದ್ದು, 27 ಮತ್ತು 28 ರಂದು ಕೆಲವೆಡೆ ಮಳೆಯಾಗುವ ಸಾಧ್ಯತೆಯಿದೆ.
ಕರಾವಳಿಯಲ್ಲಿ ಗುರುವಾರ ವ್ಯಾಪಕ ಮಳೆಯಾಗುತ್ತಿದ್ದು, ಉತ್ತರ ಕನ್ನಡದಲ್ಲಿ 3 ಸೆಂ. ಮೀಟರ್ ಮಳೆಯಾದರೆ, ಆಗುಂಬೆಯಲ್ಲಿ 2 ಸೆಂ.ಮೀಟರ್ ಮಳೆಯಾಗಿದೆ. ಇನ್ನೂ ಜೂನ್ 28 ರವರೆಗೆ ಉತ್ತರ ಕನ್ನಡ, ದಕ್ಷಿಣಕನ್ನಡ, ಉಡುಪಿ, ಶಿವಮೊಗ್ಗ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.
ರಾಜ್ಯದಲ್ಲಿ ತಂತುರು ಮಳೆ
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಗುರುವಾರ ವ್ಯಾಪಕ ಮಳೆಯಾಗಿದೆ. ಕಲಬುರಗಿ, ಯಾದಗಿರಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ. ಕೋಲಾರ, ಬೀದರ್, ದಕ್ಷಿಣಕನ್ನಡ, ಉತ್ತರ ಕನ್ನಡ, ಉಡುಪಿ, ಕೋಲಾರ ಜಿಲ್ಲೆಯ ಕೆಲವೆಡೆ ತುಂತುರು ಮಳೆಯಾಗಿದೆ.
ಬೆಂಗಳೂರಿನ ಕೆಲ ಭಾಗಗಳಲ್ಲಿ ತುಂತುರು ಮಳೆಯಾಗಿದೆ. ಮಧ್ಯಾಹ್ನದ ನಂತರ ಮೋಡ ಕವಿದ ವಾತಾವರಣ ಕಂಡುಬಂದಿದೆ. ಬೆಂಗಳೂರು ನಗರ ಸೇರಿದಂತೆ ಸುತ್ತಮುತ್ತಲ ಭಾಗಗಳ್ಲಿ ಮೋಡ ಕವಿದ ವಾತಾವರಣ ಮುಂದುವರೆಯಲಿದ್ದು, ಕೆಲವೊಮ್ಮೆ ಮಳೆಯಾಗುವ ಸಾಧ್ಯತೆಯುದೆ. ಕಲಬುರಗಿ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ತುಂತುರು ಮಳೆಯೂ ಆಗಿದೆ.