Heavy rain alerts : ರಾಜ್ಯದ ಎಲ್ಲೆಡೆ ಬುಧವಾರ ಹಾಗೂ ಗುರುವಾರ ಎರಡು ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಎಲ್ಲಾಜಿಲ್ಲೆಗಳಲ್ಲಿಯೂ ಮಳೆಯಾಗುವುದರಿಂದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ರಾಜ್ಯದಲ್ಲಿ ಜೋರು ಮಳೆಯೊಂದಿಗೆ ಗಾಳಿ ಸಹಿತ ಬೀಸಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಉಡುಪಿ, ಬೆಳಗಾವಿ, ಗದಗ, ಹಾವೇರಿ, ಬಾಗಲಕೋಟೆ, ವಿಜಯಪುರ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗುವಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿ. ಮೀ ವೇಗದಲ್ಲಿ ಗಾಳಿ ಬೀಸಬಹುದು. ಕರಾವಳಿಯಲ್ಲಿ ಪ್ರತಿ ಗಂಟೆಗೆ 50 ರಿಂದ 60 ಕಿ. ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಮೀನುಗಾರರು ಸಮುದ್ರದ ಪ್ರದೇಶಗಳಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಇದನ್ನೂ ಓದಿ ನಿಮಗೆ ಗೊತ್ತಿಲ್ಲದೆ ನಿಮ್ಮ ಜಮೀನಿನ ಮೇಲೆ ಸಾಲಪಡೆದಿದ್ದಾರೆಯೇ? ಇಲ್ಲೇ ಚೆಕ್ ಮಾಡಿ
ಬೆಂಗಳೂರಿನ ಸುತ್ತಮುತ್ತ ಮೋಡ ಕವಿದ ವಾತಾವರಣ ಇರಲಿದೆ. ಗಾಳಿಸಹಿತ ಸಾಧಾರಣ ಚದುರಿದ ಮಳೆಯಾಗಲಿದೆ. ಪ್ರತಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Heavy rain alerts ನಿಮ್ಮೂರಿನ ಮಳೆಯ ಮಾಹಿತಿ ಬೇಕೆ?
ನಿಮ್ಮೂರಿನಲ್ಲಿ ಮಳೆಯಾಗುವ ಬರುತ್ತದೆ ಎಂಬ ಮಾಹಿತಿ ಬೇಕೆ? ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದು.
ಐದು ದಿನ ಮೊದಲೇ ಮಳೆಯ ಮಾಹಿತಿ ಇಲ್ಲಿ ಪಡೆಯಿರಿ
ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ
https://play.google.com/store/apps/details?id=com.aas.meghdoot&hl=en_IN&gl=US&pli=1
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು. ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.
ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.





