Heavy rain red alert ಈ ಜಿಲ್ಲೆಗಳಲ್ಲಿ ಭಾರಿ ಮಳೆ ರೆಡ್ ಅಲರ್ಟ್

Written by Ramlinganna

Published on:

Heavy rain red alert : ದೇಶದ ಕೃಷಿ ಚಟುವಟಿಕೆಯ ಆಧಾರವಾಗಿರುವ ನೈಋತ್ಯ ಮಂಗಾರು ಮಾರುತಗಳು ಭಾನುವಾರ ಅಂಡಮಾನ್ ನಿಕೋಬಾರ್ ದ್ವೀಪಸಮೂಹವನ್ನು ಪ್ರವೇಶಿಸಿವೆ.

ಅದರಿಂದಾಗಿ ದೇಶದ ದಕ್ಷಿಣದ ತುತ್ತತುದಿಯ ಪ್ರದೇಶವಾಗಿರುವ ನಿಕೋಬಾರ್ ದ್ವೀಪಗಳ ಮೇಲೆ ಉತ್ತಮ ಮಳೆ ಸುರಿದಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ನೈಋತ್ಯ ಮುಂಗಾರು ಮಾಲ್ಡಿವ್ಸ್ ಹಾಗೂ ಕಮೋರಿನ್ ದ್ವೀಪಗಳನ್ನು ದಾಟಿ ಬಂಗಾಳಕೊಲ್ಲಿಯ ನಿಕೋಬಾರ್ ದ್ವೀಪಗಳು ಹಾಗೂ ದಕ್ಷಿಣ ಅಂಡಮಾನ್ ಸಮುದ್ರದ ಮೇಲೆ ಭಾನುವಾರ ಮಳೆ ಸುರಿಸಿವೆ. ಕೇರಳಕ್ಕೆ ಮೇ 31 ರಂದು ಮಾರುತಗಳು ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಕಳೆದ ವರ್ಷವೂ ಸಹ ಮೇ19 ರಂದೇ ಮುಂಗಾರು ಮಾರುತಗಳು ಅಂಡಮಾನ್ ಮತ್ತು ನಿಕೋಬಾರ್ ದ್ವಿಪ ಪ್ರವೇಶಿಸಿದ್ದವು. ಆದರೆ ಆ ವೇಳೆ ಮಾವಾರ್ ಚಂಡಮಾರುತ ಕಾಣಿಸಿಕೊಂಡ ಪರಿಣಾಮ ಭಾರತದ ಕರಾವಳಿ ಪ್ರವೇಶ ಮಾಡುವುದು ತಡವಾಗಿತ್ತು. ಜೂನ್ 8 ರಂದು ಮುಂಗಾರು ಮಾರುತ ಭಾರತಕ್ಕೆ ಪ್ರವೇಶಿಸಿತ್ತು. 2022 ರಲ್ಲಿ ಮೇ 29 ರಂದು  ಹಾಗೂ2021 ರಲ್ಲಿ ಜೂನ್ 3 ರಂದು ಪ್ರವೇಶಿಸಿತ್ತು. ಜೂನ್ 1 ನ್ನು ಮುಂಗಾರು ಮಾರುತ ಕೇರಳವನ್ನು ಪ್ರವೇಶಿಸುವ ವಾಡಿಕೆಯ ದಿನಾಂಕವೆಂದು ಪರಿಗಣಿಸಲಾಗುತ್ತದೆ. ಈ ವರ್ಷವೂ ಹೆಚ್ಚು ಕಮ್ಮ ಅದೇ  ಸಮಯಕ್ಕೆ ಕೇರಳದಲ್ಲಿ ಮುಂಗಾರು ಮಳೆ ಆರಂಭವಾಗುವ ನಿರೀಕ್ಷೆಯಿದೆ.  ಇದು ಕಳೆದ ವರ್ಷ ಬರದಿಂದ ಬಳಲಿದ್ದ ದೇಶದ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಅಲ್ಲದೆ, ದೇಶದ ಅನೇಕ ಭಾಗಗಳು ಉಷ್ಣ ಮಾರುತಗಳ ಪ್ರಕೋಪದಿಂದ ಬಳಲುತ್ತಿದ್ದು, ಅಲ್ಲೂವಾತಾವರಣ ತಂಪಾಗುವ ಆಶಾಭಾವ ಮೂಡಿದೆ.

ದೇಶದ ಶೇ. 52 ರಷ್ಟು ಕೃಷಿ ಚಟುವಟಿಕೆಗಳು ನೇರವಾಗಿ ಮುಂಗಾರು ಮಳೆಯನ್ನೇ ಅವಲಂಬಿಸಿವೆ. ಅಲ್ಲದೆ, ಈ ಮಾರುತಗಳು ಸುರಿಸುವ ಮಳೆಯಿಂದಾಗಿಯೇ ದೇಶದ ಅಣೆಕಟ್ಟುಗಳು ತುಂಬಿ, ಜಲವಿದ್ಯುತ್ ಉತ್ಪಾದನೆಗೂ ಅನುಕೂಲವಾಗುತ್ತದೆ.

ಈ ವರ್ಷ ದೇಶದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ ಎಂದು ಕಳೆದ ತಿಂಗಳು ಐಎಂಡಿ ಹೇಳಿತ್ತು. ಫೆಸಿಪಿಕ್ ಮಹಾಸಾಗರದ ನೀರು ತಂಪಾಗುವ ಲಾ ನಿನಾ ವಿದ್ಯಮಾನ ಈ ವರ್ಷ ಸಂಭವಿಸಲಿದ್ದು, ಅದರಿಂದಾಗಿ ಆಗಸ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಭಾರತದಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ.

Heavy rain red alert ಈ ಜಿಲ್ಲೆಗಳಲ್ಲಿ ಭಾರಿ ಮಳೆಯ ಹಿನ್ನೆಲೆಯಲ್ಲಿ ಈ ಭಾಗದಲ್ಲಿ ರೆಡ್ ಅಲರ್ಟ್

ಕೇರಳದ ತಿರುವನಂತಪುರದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ  ಇರುವ ಕಾರಣ ಕೇರಳದ ಇಡುಕ್ಕಿ ಮತ್ತು ಪತ್ತನಂತಿಟ್ಟ ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ಬುಧವಾರ ರೆಡ್ ಅಲರ್ಟ್ ಘೋಷಿಸಿದೆ.

ಕಳೆದ ಕೆಲವು ದಿನಗಳಿಂದ ಮಳೆ ಸುರಿಯುತ್ತಿದ್ದು ಈ ಎರಡು ಜಿಲ್ಲೆಗಳಲ್ಲಿ ಈಗಾಗಲೇ ಆರೇಂಜ್ ಅಲರ್ಟ್ ಘೋಷಣೆ ಮಾಡಲಾಗಿತ್ತು. ಮಳೆ ಅಬ್ಬರಿಸುವ ಮುನ್ಸೂಚನೆಯ ಕಾರಣ ರೆಡ್ ಅಲರ್ಟ್ ನೀಡಲಾಗಿದೆ.

ಇದನ್ನೂ ಓದಿ ಈ ರೈತರಿಗೇಕೆ ಪಿಎಂ ಕಿಸಾನ್ ಹಣ ಜಮೆಯಾಗಲ್ಲ? ಇಲ್ಲೇ ಚೆಕ್ ಮಾಡಿ

ಇನ್ನುಳಿದಂತೆ ತಿರುವಂತನಪುರ, ಕೊಲ್ಲಂ, ಅಳಪ್ಪುಳ, ಕೊಟ್ಟಾಯಂ, ಎರ್ನಾಕುಲಂ, ತ್ರಿಶೂರ್,ಮಲ್ಲಪುರುಂ, ಕೊಯಿಕ್ಕೂಡ ಮತ್ತು ವಯಾನಾಡಿಗೆ ಆರೇಂಜ್ ಅಲರ್ಟ್ ನೀಡಲಾಗಿದ್ದು, ಕಣ್ಣೂರ ಹಾಗೂ ಕಾಸರಗೋಡ ಜಿಲ್ಲೆಗಳಲ್ಲಿ ಯೆಲ್ಲೋ ಆಲರ್ಟ್ ಘೋಷಣೆ ಮಾಡಲಾಗಿದೆ.

ಏನಿದು ರೆಡ್ ಅಲರ್ಟ್, ಆರೇಂಜ್ ಅಲರ್ಟ್ ಹಾಗೂ ಯೆಲ್ಲೋಅಲರ್ಟ್?

24 ಗಂಟೆಯ ಅವಧಿಯಲ್ಲಿ 20 ಸೆಂ.ಮೀ ಗಿಂತ ಹೆಚ್ಚು ಮಳೆಯಾದರೆ ರೆಡ್ ಅಲರ್ಟ್ ಘೋಷಣೆ ಮಾಡಲಾಗುತ್ತದೆ.

11 ರಿಂದ 20 ಸೆಂ. ಮೀ ವರೆಗೆ ಮಳೆಯಾದರೆ ಆರೇಂಜ್ ಅಲರ್ಟ್ ಘೋಷಣೆ ಮಾಡಲಾಗುವುದು. ಅದೇ ರೀತಿ 6 ರಿಂದ 11 ಸೆಂ.ಮೀ  ವರೆಗೆ ಮಳೆಯಾದರೆ ಅದನ್ನು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗುವುದು.

Leave a Comment