ಇಂದು ಭಾರಿ ಮಳೆ ಎಚ್ಚರಿಕೆ ಶಾಲೆಗಳಿಗೆ ರಜೆ ಘೋಷಣೆ

Written by Ramlinganna

Published on:

Heavy rain school holiday : ರಾಜ್ಯದಲ್ಲಿ ಭಾರಿ ಮಳಯಾಗುತ್ತಿರುವ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಹೌದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿರುವುದರಿಂದ ಜೂನ್ 27 ರಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳು  ಸುತ್ತೋಲೆ ಹೊರಡಿಸಿದ್ದಾರೆ.

ಭಾರಿ ಮಳೆಯಾಗುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಅನುದಾನಿತ ಸರ್ಕಾರಿ ಹಾಗೂ ಖಾಸಗಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಭಾರಿ ಮಳಯಾಗುವ ಹಿನ್ನೆಲೆಯಲ್ಲಿ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರಲಿದ್ದು, ಅಪಾಯ ಸಾಧ್ಯತೆ ಇರುತ್ತದೆ. ಹೀಗಾಗಿ ಪ್ರವಾಸಿಗರು, ಸಾರ್ವಜನಿಕರು, ಕಡಲ ತೀರಗಳಿಂದ ಅಂತರ ಕಾಯ್ದುಕೊಳ್ಳಬೇಕು ಎಂದು ತಿಳಿಸಲಾಗಿದೆ.

Heavy rain school holiday ಸಮುದ್ರಕ್ಕೆ ತೆರಳದಂತೆ ಮೀನುಗಾರರಿಗೆ ಸೂಚನೆ

ಹವಾಮಾನ ಇಲಾಖೆ ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ಮೀನುಗಾರರು ಕೂಡ ಸಮುದ್ರಕ್ಕೆ ತೆರಳಿ ಮೀನುಗಾರಿಕೆ ಮಾಡುವುದಕ್ಕೆ ನಿಷೇಧ ಹಾಕಲಾಗಿದೆ. ಕಡಲ ಕೊರೆತ, ಭೂ ಕುಸಿತ ಸಾಧ್ಯತೆಗಳು ಹೆಚ್ಚಿವೆ.

ಇದನ್ನೂ ಓದಿ ನಿಮಗೆ ಗೊತ್ತಿಲ್ಲದೆ ಬೆಳೆಸಾಲ ಪಡೆಯಲಾಗಿದೆಯೇ? ಇಲ್ಲೇ ಚೆಕ್ ಮಾಡಿ

ಹೀಗಾಗಿ ಅಪಾಯದಿಂದ ದೂರ ಉಳಿಯಲು ಮೀನುಗಾರರು ಸಮುದ್ರಕ್ಕಿಳಿಯಬಾರದು ಎದು ಸೂಚನೆ ನೀಡಲಾಗಿದೆ.

ಜೂನ್ 29 ವರೆಗೂ ಮಳೆ

ಉಡುಪಿ ಜಿಲ್ಲೆಯ ಕರಾವಳಿ ತೀರದಲ್ಲಿ ಜೂನ್ 29 ರ ತನಕ ಗಂಟೆಗೆ 35 ರಿಂದ 45 ಕಿ.ಮೀ ಹಾಗೂ ಗರಿಷ್ಠ 55 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಮೀನುಗಾರರು ಕಡಲಿಗಿಳಿಯದಂತೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ನಿಮ್ಮೂರಿನ ಮಳೆಯ ಮಾಹಿತಿ ಬೇಕೆ?

ನಿಮ್ಮೂರಿನಲ್ಲಿ ಮಳೆಯಾಗುವ ಬರುತ್ತದೆ ಎಂಬ ಮಾಹಿತಿ ಬೇಕೆ?  ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದು. ಇನ್ನೇಕೆ ತಡ ಕೂಡಲೇ ವರುಣಮಿತ್ರ ಸಹಾಯವಾಣಿ ನಂಬರಿಗೆ ಕರೆ ಮಾಡಿ ನಿಮ್ಮೂರಿನ ಸುತ್ತಮುತ್ತ ಮಳೆ ಯಾವಾಗ ಬರುತ್ತದೆ ಎಂಬುದನ್ನು ಈಗಲೇ ತಿಳಿದುಕೊಳ್ಳಬಹುದು.

ಮೇಘದೂತ್ ಆ್ಯಪ್  ನಲ್ಲಿ ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ

ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ

https://play.google.com/store/apps/details?id=com.aas.meghdoot&hl=en_IN&gl=US&pli=1

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು.  ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.

ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ಕನ್ನಡ ಭಾಷೆ ಆಯ್ಕೆ ಮಾಡಿಕೊಳ್ಳಬೇಕು ಇದಾದ ನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ. ಅಲ್ಲಿ ನಿಮಗೆ ಹವಾಮಾನ ವರದಿ ಕಾಣಿಸುತ್ತದೆ.

ಈ ಆ್ಯಪ್ ದೊಂದಿಗೆ ಇನ್ನೂ ಹಲವಾರು ಆ್ಯಪ್ ಗಳಿವೆ. ಸಿಡಿಲು ಮುನ್ನೆಚ್ಚರಿಕೆನೀಡುವ ಆ್ಯಪ್ ಗಳು ಸಹ ಇದೆ. ಇದನ್ನೂ ಡೌನ್ಲೋಡ್ ಮಾಡಿ ಮಾಹಿತಿಪಡೆಯಬಹುದು.

Leave a Comment