ಏ. 14 ಮತ್ತು 15 ರಂದು ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ

Written by By: janajagran

Updated on:

heavy rain- yellow alert ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಏಪ್ರೀಲ್ 14 ಮತ್ತು 15 ರಂದು ಗುಡುಗು ಮಿಂಚಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ  ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಮಲೆನಾಡು ಜಿಲ್ಲೆಗಳಾದ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನದಲ್ಲಿ ಮಳೆಯಾಗುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಕೋಲಾರ, ಚಾಮರಾಜನಗರ, ಮಂಡ್ಯ, ಮೈಸೂರು, ದಾವಣಗೆರೆ, ರಾಮನಗರ, ತುಮಕೂರು ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಬಾಗಲಕೋಟ, ಧಾರವಾಡ, ಹಾವೇರಿ, ಗದಗ, ಕಲಬುರಗಿ, ರಾಯಚೂರು, ಕೊಪ್ಪಳ, ಯಾದಗಿರಿ ಮತ್ತು ವಿಜಯಪುರದಲ್ಲಿ ಏ. 13 ರಿಂದ  ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

heavy rain- yellow alert ಬಿರುಬಿಸಿಲಿನ ನಡುವೆ ಉತ್ತರ ಕರ್ನಾಟಕದಲ್ಲಿ ಸುರಿಯಿತು ಮಳೆ

ಏ. 9 ರಂದು ಹವಾಮಾನ ಇಲಾಖೆಯು ನೀಡಿದ ಮುನ್ಸೂಚನೆಯಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಿದೆ. ವಿಶೇಷವಾಗಿ ಕಾದುಕೆಂಡವಾಗಿದ್ದ ಕಲಬುರಗಿ ಜಿಲ್ಲೆಯಲ್ಲಿ ಮಳೆರಾಯ ತಂಪೆರೆದಿದ್ದಾನೆ.

ಇದನ್ನೂ ಓದಿ ನಿಮ್ಮ ಜಮೀನು ಯಾರಿಂದ ಯಾರಿಗೆ ವರ್ಗಾವಣೆಯಾಗಿದೆ? ಚೆಕ್ ಮಾಡಿ

ಹುಬ್ಬಳ್ಳಿ, ಧಾರವಾಡ, ವಿಜಯಪುರ, ಬೆಳಗಾವಿಯ ವಿವಿಧೆಡೆ ಸಹ ಮಳೆಯಾಗಿದೆ. ಗುಡುಗುಡ ಮಿಂಚಿನ ಆರ್ಭಟದೊಂದಿಗೆ ಮಳೆಯಾಗಿದೆ.

ಕಳೆದ ಒಂದು ತಿಂಗಳಿಂದ ಬಿಸಿಲಿಗೆ ಕಾದು ಕೆಂಡವಾಗಿದ್ದ ಉತ್ತರ ಕರ್ನಾಟಕದ ನೆಲ ತಂಪಾಗಿದೆ. ಈ ಭಾಗದಲ್ಲಿ ಬಿಸಿಲು ಸಹ ದಾಖಲೆಮಟ್ಟದಲ್ಲಿ ಏರಿಕೆಯಾಗಿತ್ತು. ಶುಕ್ರವಾರ ಸುರಿದ ಅಲ್ಪ ಮಳೆಯ ಸ್ವಲ್ಪ ನೆಮ್ಮದಿ ನೀಡಿದೆ.

ತೊಗರಿ ಬೆಳೆ ಹಾನಿಯಾದ ರೈತರಿಗೆ ಹೆಕ್ಟೇರಿಗೆ 10 ಸಾವಿರ ರೂಪಾಯಿ ಪರಿಹಾರ ಘೋಷಣೆ

ನೆಟೆ ರೋಗದಿಂದ ತೊಗರಿ ಬೆಳೆ ಕಳೆದುಕೊಂಡು ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಬೀದರ್, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳ ರೈತರ ನೆರವಿಗೆ ಸರ್ಕಾರ ಧಾವಿಸಿದ್ದು, ಪ್ರತಿ ಹೆಕ್ಟೇರಿಗೆ 10 ಸಾವಿರ ರೂಪಾಯಿ ಪರಿಹಾರ ಘೋಷಿಸಿದೆ.

ಹೌದು,  ಬೀದರ್, ಕಲಬುರಗಿ, ಮತ್ತು ಯಾದಗಿರಿ ಜಿಲ್ಲೆಯಲ್ಲಿ ನೆಟೆ ರೋಗದಿಂದ ತೊಗರಿ  ಬೆಳೆಗೆ ಸಂಬಂಧಿಸಿದ ಬೆಳೆಹಾನಿಯನ್ನುವಿಶೇಷ ಪ್ರಕರಣವೆಂದು ಪರಿಗಣಿಸಿ ಸರ್ಕಾರವು ಪ್ರತಿ ಹೆಕ್ಟೇರಿಗೆ 10 ಸಾವಿರ ರೂಪಾಯಿಯಂತೆ ಎನ್.ಡಿ.ಆರ್.ಎಫ್ /ಎಸ್.ಡಿಆರ್.ಎಫ್ ಮಾರ್ಗಸೂಚಿಯಂತೆ ಗರಿಷ್ಠ ಎರಡು ಹಕ್ಟೇರಿಗೆ ಸೀಮಿತಗೊಳಿಸಿ ಬಾಧಿತ ರೈತರಿಗೆ ಪರಿಹಾರ ಘೋಷಿಸಿದೆ.

ಒಟ್ಟು ಮೊತ್ತವು 233 ಕೋಟಿ ರೂಪಾಯಿ ಆಗಲಿದೆ ಎಂದು ಅಂದಾಜಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಗಳವಾರ ಸಾಯಂಕಾಲ ಕಲಬುರಗಿ ಜಿಲ್ಲಾ ಪ್ರವಾಸದಿಂದ ಹಿಂದಿರುಗಿದ ಬಳಿಕ ಅಧಿಕಾರಗಳ ಜತೆ ಸಭೆ ನಡೆಸಿ ಈ ತೀರ್ಮಾನ ಕೈಗೊಂಡರು.

ಬೀದರ್, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಯಲ್ಲಿ ಅಕಾಲಿಕ ಮಳೆ ಹಾಗೂ ತದನಂತರ ನವೆಂಬರ್ ತಿಂಗಳಲ್ಲಿ ತಲೆದೋರಿದ ಮಳೆಯಿಂದಾಗಿ ರೈತರ ಅಪಾರ ಬೆಳೆ ಹಾನಿಯಾಗಿತ್ತು.

Leave a Comment