Heavy rains in 20 district : ರಾಜ್ಯದಲ್ಲಿ ಮತ್ತೆ ಮಳೆಯ ಆರ್ಭಟ ಹೆಚ್ಚಾಗಿದೆ. ಹೌದು, ಇಂದಿನಿಂದ ನಾಲ್ಕು ದಿನಗಳ ಕಾಲ 20ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ, ಕನ್ನಡ, ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಉಡುಪಿ ತುಮಕೂರು, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ವಿಜಯನಗರ, ಶಿವಮೊಗ್ಗ, ರಾಮನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ದಾವಣಗೆರೆ, ಚಿಕ್ಕಮಗಳೂರು, ಚಿತ್ರದುರ್ಗ, ಚಾಮರಾಜನಗರ, ಕೊಪ್ಪಳ, ಯಾದಗಿರಿ, ರಾಯಚೂರು, ಬೆಳಗಾವಿ, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಲಿದೆ.
ಆಗಸ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿಯುತ್ತಿರುವ ಮಳೆಯಿಂದ ಅಪಾರ ಬೆಳೆ ಹಾಳಾಗುತ್ತಿದೆ. ಇದರಿಂದಾಗಿ ರೈತರು ಸಂಕ ಷ್ಟದಲ್ಲಿ ಸಿಲುಕಿದ್ದಾರೆ. ಬಿತ್ತಿದ ಬೆಳೆ ಜಮೀನಿನಲ್ಲೇ ಹಾಳಾಗುತ್ತಿದೆ. ಹೀಗಾಗಿ ರೈತರಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಬೆಳೆ ಹಾಳಾದ ರೈತರು ತಮ್ಮ ಬೆಳೆಗೆ ವಿಮೆ ಮಾಡಿಸಿದ್ದರೆ ವಿಮಾ ಸೌಲಭ್ಯ ಪಡೆದುಕೊಳ್ಳಬಹುದು.ಹೌದು, ನೀವು ಯಾವ ವಿಮಾ ಕಂಪನಿಗೆ ವಿಮೆ ಮಾಡಿಸಿದ್ದೀರೋ ಆ ವಿಮಾ ಕಂಪನಿಗೆ ದೂರು ನೀಡಿ ವಿಮಾ ಸೌಲಭ್ಯ ಪಡೆಯಬಹುದು. ಯಾವ ವಿಮಾ ಕಂಪನಿಯನ್ನು ಯಾವ ಜಿಲ್ಲೆಯವರು ಸಂಪರ್ಕಿಸಬೇಕು, ಹಾಗೂ ವಿಮಾ ಕಂಪನಿಗಳ ನಂಬರುಗಳನ್ನು ಇಲ್ಲಿ ನೀಡಲಾಗಿದೆ. ರೈತರು ಕರೆ ಮಾಡಿ ವಿಮಾ ಸೌಲಭ್ಯ ಪಡೆದುಕೊಳ್ಳಬಹುದು.
ಇದನ್ನೂ ಓದಿ : ಬೆಳೆ ವಿಮೆ ಹಣ ಜಮೆಯಾಗಲು ರೈತರೇನು ಮಾಡಬೇಕು ಗೊತ್ತಾ? ಇಲ್ಲಿದೆ ಮಾಹಿತಿ
ನಿಮ್ಮ ಜಿಲ್ಲೆಯಲ್ಲಿ ಮಳೆಯಾಗುತ್ತೋ ಇಲ್ಲವೋ ಎಂಬ ಮಾಹಿತಿ ಪಡೆಯಲು ಎಲ್ಲಿಯೂ ಹೋಗಬೇಕಿಲ್ಲ. ಯಾವ ಕಚೇರಿಗೂ ಹೋಗಬೇಕಿಲ್ಲ. ಒಂದು ಕರೆ ಮಾಡಿದರೆ ಸಾಕು ನಿಮ್ಮ ಊರಿನಲ್ಲಿ ಮಳೆಯಾಗುತ್ತೋ ಇಲ್ಲವೋ ಹಾಗೂ ಯಾವ ಪ್ರಮಾಣದಲ್ಲಿ ಮಳೆಯಾಗುತ್ತದೆ ಎಂಬ ಮಾಹಿತಿ ಕ್ಷಣಮಾತ್ರದಲ್ಲಿ ಸಿಗಲಿದೆ. ಹಾಗಾದರೆ ಯಾವ ನಂಬರಿಗೆ ಕರೆ ಮಾಡಬೇಕು ಎಂಬ ಪ್ರಶ್ನೆ ಮೂಡುತ್ತಿದೆಯೇ? ಇಲ್ಲಿದೆ ನೋಡಿ ಮಾಹಿತಿ.
Heavy rains in 20 district ನಿಮ್ಮೂರಿನ ಮಳೆಯ ಮಾಹಿತಿ ಬೇಕೆ?
ನಿಮ್ಮೂರಿನಲ್ಲಿ ಮಳೆಯಾಗುವ ಬರುತ್ತದೆ ಎಂಬ ಮಾಹಿತಿ ಬೇಕೆ? ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದು.
ಐದು ದಿನ ಮೊದಲೇ ಮಳೆಯ ಮಾಹಿತಿ ಇಲ್ಲಿ ಪಡೆಯಿರಿ
ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ
https://play.google.com/store/apps/details?id=com.aas.meghdoot&hl=en_IN&gl=US&pli=1
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು. ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.
ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ. ಈ ಆ್ಯಪ್ ಒಮ್ಮೆ ನಿಮ್ಮ ಮೊಬೈಲ್ ನಲ್ಲಿ ಇಸ್ಟಾಲ್ ಮಾಡಿಕೊಂಡರೆ ಸಾಕು.





