Heavy two days rain alert : ರಾಜ್ಯದ ವಿವಿಧೆಡೆ ಸೋಮವಾರ ಮತ್ತು ಮಂಗಳವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗೆ ಸೋಮವಾರ ಆರೇಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಈ ಜಿಲ್ಲೆಗಳ ಕೆಲವೆಡೆ ನಿರಂತರ ಗಾಳಿಯೊಂದಿಗೆ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಕಡೆ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
Heavy two days rain alert ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ?
ಉತ್ತರ ಒಳನಾಡಿನ ಬೆಳಗಾವಿ ಹಾಗೂ ಧಾರವಾಡದಲ್ಲಿ ನಿರಂತರ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಹಾವೇರಿ, ವಿಜಯಪುರ, ಯಾದಗಿರಿ, ಕೊಪ್ಪಳ, ಹಾಗೂ ರಾಯಚೂರು ಜಿಲ್ಲೆಗಳ ಕೆಲವಡೆ ಸಾಧಾರಣ ಮಳೆಯಾಗುವ ಸಂಭವವಿದೆ.
ಇದನ್ನೂ ಓದಿ : ಬೆಳೆ ವಿಮೆ ಹಣ ಜಮೆಯಾಗಬೇಕಾದರೆ ರೈತರೇನು ಮಾಡಬೇಕು? ಇಲ್ಲಿದೆ ಮಾಹಿತಿ
ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಚಾಮರಾಜನಗರ, ವಿಜಯಪುರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೊಡಗು, ಕೋಲಾರ, ದಾವಣಗೆರೆ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ಸಂಭವವಿದೆ.
ಕರಾವಳಿಯ ಎಲ್ಲ ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಂಗಳವಾರವೂ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ ಒಂದು ವಾರ ಮಳೆ ಮುಂದುವರೆಯುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನಿಮ್ಮ ಜಿಲ್ಲೆಯಲ್ಲಿ ಯಾವ ಪ್ರಮಾಣದಲ್ಲಿ ಮಳೆಯಾಗಲಿದೆ? ಯಾವಾಗ ಮಳೆಯಾಗಲಿದೆ ಎಂಬ ಮಾಹಿತಿ ಬೇಕೆ?
ನಿಮ್ಮೂರಿನ ಮಳೆಯ ಮಾಹಿತಿ ಬೇಕೆ?
ನಿಮ್ಮೂರಿನಲ್ಲಿ ಮಳೆಯಾಗುವ ಬರುತ್ತದೆ ಎಂಬ ಮಾಹಿತಿ ಬೇಕೆ? ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದು.
ಐದು ದಿನ ಮೊದಲೇ ಮಳೆಯ ಮಾಹಿತಿ ಇಲ್ಲಿ ಪಡೆಯಿರಿ
ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ
https://play.google.com/store/apps/details?id=com.aas.meghdoot&hl=en_IN&gl=US&pli=1
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು. ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.
ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.





