here Heavy rain alert : ಪ್ರಸಕ್ತ ಸಾಲಿನಲ್ಲಿ ಮುಂಗಾರು ಪೂರ್ವ ಮಳೆ ಭರ್ಜರಿಯಾಗಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ.ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಇದೇ ರೀತಿ ಮುದಿನ ವಾರ ಸಹ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನಮ್ಮ ಯೂಟೂಬ್ ಚಾನೆಲ್ ಸಬಸ್ಕ್ರೈಬ್ ಮಾಡಿ ಮಳೆ ಮಾಹಿತಿ ಪಡೆಯಿರಿ
ಮೇ 22 ರಿಂದ 24 ರವರೆಗೆ ಮೂರು ದಿನಗಳಕಾಲ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಹೌದು, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಮೇ 22 ರಂದು ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಮೇ 22 ರಂದು ಆರೇಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದ. ಮೇ 23 ಹಾಗೂ 24 ರಂದು ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಇದೇ ಅವಧಿಯಲ್ಲಿ ಉಡುಪಿ ಜಿಲ್ಲೆಗೆ ಮೊದಲ ದಿನ ರೆಡ್ ಹಾಗೂ ಉಳಿದ ಎರಡು ದಿನ ಆರೇಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲೂ ಮೂರು ದಿನ ವ್ಯಾಪಕ ಮಳೆಯಾಗಲಿದೆ.. ಮೇ 22 ರಂದು ಧಾರವಾಡ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಬೆಳಗಾವಿ ಜಿಲ್ಲೆಗೆ ಆರೇಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಚಿಕ್ಕಬಳ್ಳಾಪುರ, ಬಳ್ಳಾರಿ, ಕೋಲಾರ,ಬೀದರ್ , ಕಲಬುರಗಿ ಹಾಗೂ ವಿಜಯಪುರ ಜಿಲ್ಲೆಗಳಿಗೆ ಮೇ 22 ರಂದು ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ಇದನ್ನೂ ಓದಿ : ಗ್ರಾಪಂನಿಂದ ನಿಮ್ಮೂರಿಗೆ ಯಾವ ಯಾವ ಕಾಮಗಾರಿ ಮಂಜೂರಾಗಿದೆ? ಇಲ್ಲೇ ಚೆಕ್ ಮಾಡಿ
ಮೇ 23 ರಂದು ಶಿವಮೊಗ್ಗ, ಧಾರವಾಡ, ಚಿಕ್ಕಮಗಳೂರು ಹಾಗೂ ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ಮೇ 24 ರಂದು ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಕಡಗು ಜಿಲ್ಲೆಗಳಿಗೆ ಆರೇಂಜ್ ಅಲರ್ಚ್ ಎಚ್ಚರಿಕೆ ನೀಡಲಾಗಿದೆ.
ಧಾರವಾಡ, ಗದಗ, ಹಾಸನ, ಮೈಸೂರು, ಚಾಮರಾಜನಗರ, ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಚ್ ಎಚ್ಚರಿಕೆ ನೀಡಲಾಗಿದೆ.
here Heavy rain alert ನಿಮ್ಮೂರಿನಲ್ಲಿ ಮಳೆ ಯಾವಾಗ ಬರಲಿದೆ?
ನಿಮ್ಮೂರಿನಲ್ಲಿಇಂದು ಮಳೆಯಾಗುತ್ತೋ ಇಲ್ಲವೋ ಹಾಗೂ ನಿಮ್ಮೂರಿನಲ್ಲಿ ಮಳೆ ಯಾವಾಗಬರುತ್ತದೆ ಎಂಬ ಮಾಹಿತಿಯನ್ನು ಸಾರ್ವಜನಿಕರು ಪಡೆಯಬಹುದು.ಹೌದು, ವರುಣಮಿತ್ರ ಸಹಾಯವಾಣಿ ನಂಬರ್ 9243345433 ಗೆ ಕರೆ ಮಾಡಿದರೆ ಸಾಕು, ಈಗ ನೀವು ದಿನನಿತ್ಯದ ಹವಾಮಾನ ವರದಿಯನ್ನುಪಡೆದುಕೊಳ್ಳಬಹುದು. ಇದು ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸುತ್ತದೆ. ಹಾಗಾಗಿ ರೈತರು, ಸಾರ್ವಜನಿಕರು ಯಾವುದೇ ಸಮಯದಲ್ಲಿ ಕರೆ ಮಾಡಿ ಮಳೆಯ ಮಾಹಿತಿಯನ್ನುಪಡೆಯಬಹುದು.
ಐದು ದಿನ ಮೊದಲೇ ಮಳೆಯ ಮಾಹಿತಿ ಇಲ್ಲಿ ಪಡೆಯಿರಿ
ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ
https://play.google.com/store/apps/details?id=com.aas.meghdoot&hl=en_IN&gl=US&pli=1
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು. ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.
ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.
ಈ ಬಾರಿ ನೈರುತ್ಯ ಮುಂಗಾರು ಮೇ 27 ರಂದು ಕೇರಳ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಶನಿವಾರ ತಿಳಿಸಿದೆ.
ವಾಡಿಕೆಯಂತೆ ಜೂನ್ 1 ರಂದು ಮಳೆ ಕೇರಳಕ್ಕೆ ಕಾಲಿಡುತ್ತದೆ. ಆದರೆ ಈ ಬಾರಿ 5 ದಿನ ಮುಂಚಿತವಾಗಿ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹಿಂದೆ ಮುಗಾರು ಮಳೆ ಯಾವಾಗ ಬರುತ್ತಿತ್ತು?
ಹವಾಮಾನ ಇಲಾಖೆಯ ದತ್ತಾಂಶದ ಪ್ರಕಾರ, 2009 ರಲ್ಲಿ ಮೇ 23 ರಂದು ಮಳೆ ಪ್ರಾರಂಭವಾಗಿತ್ತು. ಈ ವರ್ಷ ನಿರೀಕ್ಷೆಯಂತೆ ಮೇ 27 ರಂದು ಕೇರಳಕ್ಕೆ ಮಾನ್ಸೂನ್ ಆಗಮಿಸಿದರೆ16 ವರ್ಷಗಳ ನಂತರ ಮೊದಲ ಬಾರಿಗೆ ಭಾರತದ ಮುಖ್ಯ ಭೂ ಭಾಗದಲ್ಲಿಮುಂಗಾರು ಮಾರುತಗಳು ಬೇಗನೆ ಪ್ರವೇಶ ಮಾಡಿದಂತಾಗುತ್ತದೆ. ಮಳೆ ಕೇರಳವನ್ನು ಪ್ರವೇಶಿಸಿದ ನಂತರ ಭಾರತದ ಮುಖ್ಯ ಭೂಭಾಗದ ಮೇಲೆ ಮಳೆಯ ಆಗಮವನವನ್ನು ಅಧಿಕೃತವಾಗಿ ಘೋಷಿಸಲಾಗುತ್ತದೆ.
ಇದು ಖಾರೀಫ್ ಬಿತ್ತನೆ ಋತುವಿನ ಮೇಲೆ ಸಕಾರಾತ್ಮಕ ಪರಿಣಾಮ ಬೀರಲಿದೆ ಎಂದು ನಿರೀಕ್ಷಿಸಲಾಗಿದೆ.2025 ರ ಮುಂಗಾರು ಋತುವಿನಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆ ಸುರಿಯಲಿದೆ ಎಂದು ಏಪ್ರೀಲ್ ನಲ್ಲಿ ಮುನ್ಸೂಚನೆ ನೀಡಿದ್ದ ಐಎಂಡಿ ಎಲ್ ನಿನೋ ಸಾಧ್ಯತೆಯಿದೆ ತಳ್ಳಿಹಾಕಿತ್ತು.