Hightech Harvester subsidy get : ಕೃಷಿ ಯಾಂತ್ರೀಕರಣ ಯೋಜನೆಯಡಿ ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪನೆ ಮಾಡಲು ಆಸಕ್ತ ವೈಯಕ್ತಿಕ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಯಾದಗಿರಿ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ರೈತರಿಗೆ ಬಾಡಿಗೆ ಆಧಾರದಲ್ಲಿ ಕೃಷಿ ಯಂತ್ರೋಪಕರಣ ಒದಗಿಸುವ ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಇನ್ನಷ್ಟು ಬಲಪಡಿಸಲು ರಾಜ್ಯ ವಲಯ ಕೃಷಿ ಯಾಂತ್ರೀಕರಣ ಯೋಜನೆಯಡಿ ಸರ್ಕಾರ ಈ ಯೋಜನೆಗೆ ಅನುಮೋದನೆ ನೀಡಿದೆ.
ಸಾ.ವ. ದಡಿ ಗರಿಷ್ಠಿ ಶೇ. 50 ರಂತೆ ಹಾಗೂ ಪರಿಶಿಷ್ಟ ಜಾತಿ ವರ್ಗದ ರೈತರಿಗೆ ಗರಿಷ್ಠ ಶೇ. 70 ರಂತೆ ಸಹಾಯಧನ ನೀಡಲಾಗುವುದು.
ಸೌಕರ್ಯನಿಧಿ ಸಾಲದ ನೆರವು ಪಡೆಯಲು ಅವಕಾಶವಿದೆ. ಆಸಕ್ತರು ಆನ್ಲೈನ್
https://zpyadgiri.karnataka.gov.in/
ಮೂಲಕ ಸಲ್ಲಿಸಿದ ಅರ್ಜಿಯೊಂದಿಗೆ ಈ ಮೇಲಿನ ಎಲ್ಲಾ ದಾಖಲಾತಿಗಳನ್ನು ನಿಮ್ಮ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಆಗಸ್ಟ್ 31 ರೊಳಗಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಲು ಅವರು ತಿಳಿಸಿದ್ದಾರೆ.
Hightech Harvester subsidy get ಆನ್ಸೈನ್ ನಸ್ಸಿ ಅರ್ಜಿ ಸಲ್ಲಿಸುವುದು ಹೇಗೆ ?
ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಈ
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪನೆಗೆ ಆನ್ಲೈನ್ ಅರ್ಜಿ ಲಿಂಕ್ ಕಾಣಿಸುತ್ತದೆ. ಇದರ ಮೇಲೆ ಕ್ಲಿಕ್ ಮಾಡಬೇಕು. ಆಘ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ ಅಲ್ಲಿ ನೀವು ಸೆಲೆಕ್ಟ್ ಆಫ್ಶನ್ ನಲ್ಲಿ ಪರಿಶಿಷ್ಟ ಜಾತಿಯವರಾಗಿದ್ದರೆ ಎಸ್.ಸಿ. ಹೆಟೆಕ್ಟ್ ಆಯ್ಕೆ ಮಾಡಿಕೊಳ್ಳಬೇಕು. ಇದಾ ನಂತರ ನಿಮ್ಮ ಹೆಸರು ನಮೂದಿಸಬೇಕು. ನಿಮ್ಮ ತಂದೆಯ ಹೆಸರು ನಮೂದಿಸಬೇಕು. ಎಫ್ಐಡಿ ಸಂಖ್ಯೆ ನಮೂದಿಸಬೇಕು. ಇದಾದ ನಂತರ ಲಿಂಗ ಆಯ್ಕೆ ಮಾಡಿಕೊಳ್ಳಬೇಕು. ನಂತರ ನೀವು ಯಾವ ಜಾತಿಯಗೆ ಸೇರಿದ್ದೀರೋ ಅದನ್ನು ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಿಮ್ಮ ಜಾತಿ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಮೊಬೈಲ್ ನಂಬರ್ ನಮೂದಿಸಬೇಕು. ನಂತರ ಹುಟ್ಟಿದ ದಿನಾಂಕ ನಮೂದಿಸಬೇಕು. ನಂತರ ನಿಮ್ಮ ವಿಳಾಸ ಭರ್ತಿ ಮಾಡಬೇಕಗು. ನಿಮ್ಮ ರಾಜ್ಯ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಜಿಲ್ಲೆ, ತಾಲೂಕು ಊರು ಆಯ್ಕೆ ಮಾಡಿಕೊಳ್ಳಬೇಕು. ಜಮೀನಿನ ವಿವರ ಭರ್ತಿ ಮಾಡಬೇಕು. ನಂತರ ಸಂಬಂಧಿಸಿದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು. ನಂತರ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ನಮೂದಿಸಿ ಸಬ್ಮಿಟ್ ಮೇಲೆ ಕ್ಲಿಕ್ ಮಾಡಬೇಕು.
ಅರ್ಜಿ ಸಲ್ಲಿಸಲು ಷರತ್ತು
ಈ ಹಿಂದೆ ಇಲಾಖೆಯಿಂದ ಸಹಾಯಧನ ಪಡೆದ ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದಲ್ಲಿ ಆಯ್ಕೆಗೆ ಪರಿಗಣಿಸಲಾಗುವುದಿಲ್ಲ.
ಇದನ್ನೂ ಓದಿ 585 ಕೋಟಿ ಬೆಳೆ ವಿಮೆ ಪರಿಹಾರ ಮಂಜೂರು : ಬೆಳೆ ವಿಮೆ ಸ್ಟೇಟಸ್ ಇಲ್ಲೇ ಚೆಕ್ ಮಾಡಿ
ಅರ್ಜಿದಾರರು ಆನ್ಲೈನ್ ನಲ್ಲಿ ಸಲ್ಲಿಸಿದ ಅರ್ಜಿಯ ಮೂಲ ಪ್ರತಿಯನ್ನು ಕಾಯ್ದಿರಿಸಿಕೊಳ್ಳತಕ್ಕದ್ದು ಅರ್ಜಿಯ ಪ್ರತಿಯನ್ನು ನಿಮ್ಮ ತಾಲೂಕು ಸಹಾಯಕ ಕೃಷಿ ನಿರ್ದೇಶಕರಿಗೆ ಸಲ್ಲಿಸಿ.
ಅರ್ಜಿ ಸಲ್ಲಿಸಲು ಯಾವ ದಾಖಲೆ ಬೇಕು
ಅರ್ಜಿಯನ್ನು ಭರ್ತಿ ಮಾಡುವ ಮೊದಲು ದಾಖಲೆಗಳು ಪಿಡಿಎಫ್ ಸ್ವರೂಪದಲ್ಲಿರಬೇಕು. ಪಿಡಿಎಫ್ ಕಡತಗಳನ್ನು ಮಾತ್ರ ಅಪ್ಲೋಡ್ ಮಾಡಬೇಕು. ಜಾತಿ ಪ್ರಮಾಣ ಪತ್ರ 200 ಕೆಬಿ ಗಿಂತ ಕಡಿಮೆ ಪಿಡಿಎಫ್ ಸ್ವರೂಪದಲ್ಲಿರಬೇಕು.
ಅರ್ಜಿ ಆಹ್ವಾನ
ಚಿಕ್ಕಬಳ್ಳಾಪುರ ಜಿಲ್ ಲಿಂಕ್ ಡಾಕ್ಯುಮೆಂಟ್ 2026-27ನೇ ಸಾಲಿನ ಮೀನುಗಾರಿಕೆ ಇಲಾಖೆಯ ವಿವಿಧ ಫಲಾನುಭವಿ ಆಧಾರಿತ ಯೋಜನೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಆಗಸ್ಟ್ 31 ರ ಸಂಜೆ 5 ಗಂಟೆಯೊಳಗೆ ಸಲ್ಲಿಸಬಹುದು.
ಒಳನಾಡು ಮೀನುಗಾರಿಕೆ ಅಭಿವೃದ್ಧಿ ಎಸ್.ಸಿ.ಪಿ ಟಿಎಸ್.ಪಿ ಯೋಜನೆ, ಮತ್ಸ್ಯ ವಾಹಿನಿ ಯೋಜನೆ, ಸಮಗ್ರ ಮೀನುಗಾರಿಕೆ ಅಭಿವೃದ್ಧಿ ಯೋಜನೆಗಳಡಿ ಸಹಾಯಧನ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿ ಅಥಾ ಮೀನುಗಾರಿಕೆ ಉಪನಿರ್ದೇಶಕರ ಕಚೇರಿ ಅಥವು ಮೀನುಗಾರಿಕೆ ಉಪನಿರ್ದೇಶಕರ ಕಚೇರಿ, ಮೂನುಗಾರಿಕೆ ಇಲಾಖೆ, ಜಿಲ್ಲಾಡಳಿತ ಭವನ, ಚಿಕ್ಕಬಳ್ಳಾಪುರ ದೂರವಾಣಿ ಸಂಕ್ಯೆ 08156277118 ಗೆ ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





