10 ತಿಂಗಳ ಉಚಿತ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ

Written by Ramlinganna

Updated on:

Horticulture training ತೋಟಗಾರಿಕೆ ಇಲಾಖೆಯ ವತಿಯಿಂದ ರೈತರ ಮಕ್ಕಳಿಗಾಗಿ ಚಿಂಚೋಳಿ ತಾಲೂಕಿನ ಚಂದ್ಕಂಪಳ್ಳಿ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ಹತ್ತು ತಿಂಗಳ ಅವಧಿಗೆ ತೋಟಗಾರಿಕೆ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.

ಹೌದು, ಜೂನ್ 2 ರಿಂದಕಲಬುರಗಿ ಜಿಲ್ಲೆಯ ರೈತರ ಮಕ್ಕಳಿಗಾಗಿ ಈ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ತೋಟಗಾರಿಕೆ ತರಬೇತಿಯಲ್ಲಿ ಪಾಲ್ಗೊಳ್ಳಬಹುದು.

Horticulture training ತೋಟಗಾರಿಕೆ ತರಬೇತಿಗೆ ಅರ್ಹತೆ

ಸದರಿ ತರಬೇತಿಗಾಗಿ ಅಭ್ಯರ್ಥಿಯು ಕನಿಷ್ಟ ಎಸ್.ಎಸ್.ಎಲ್.ಸಿ ಕನ್ನಡ ವಿಷಯದೊಂದಿಗೆ ಪಾಸಾಗಿರಬೇಕು. ಅಭ್ಯರ್ಥಿಯು ದೃಢಕಾಯದವರಾಗಿರಬೇಕು. ಅಭ್ಯರ್ಥಿಗಳು (ಮಾಜಿ ಸೈನಿಕರು ಹಾಗೂ ಇತರ ಎಲ್ಲಾ ಅಭ್ಯರ್ಥಿಗಳು) ತಂದೆ ತಾಯಿ ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು. ಹಾಗೂ ಸ್ವಂತ ಸಾಗುವಳಿ ಮಾಡುತ್ತಿರಬೇಕು. ಈ ಬಗ್ಗೆ ಪಹಣಿಯನ್ನು ಕಡ್ಡಾಯವಾಗಿ ನೀಡಬೇಕು.

ನಿಗದಿತ ಅರ್ಜಿ ನಮೂನೆಗಳನ್ನು ಕಲಬುರಗಿ ತೋಟಗಾರಿಕೆ ಉಪ ನಿರ್ದೇಶಕರು (ಜಿಲ್ಲಾ ಪಂಚಾಯತ) ರಾಜ್ಯ ವಲಯದ ಹಿರಿಯ ಸಹಾಯಕ  ತೋಟಗಾರಿಕೆ ನಿರ್ದೇಶಕರ ಕಚೇರಿ, ಆಯಾ ತಾಲೂಕಿನ ತೋಟಗಾರಿಕೆ ಕಚೇರಿಯಿಂದ ಅಥವಾ ಇಲಾಖೆಯ

https://horticulturedir.karnataka.gov.in/

ವೆಬ್ ಸೈಟ್ ಮೇಲೆ ಕ್ಲಿಕ್ ಮಾಡಬೇಕು. ಆಗ ತೋಟಗಾರಿಕೆ ಇಲಾಖೆಯ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ

2023ನೇ ಸಾಲಿನ ಮೇ ತಿಂಗಳಲ್ಲಿ ಪ್ರಾರಂಭವಾಗುವ ತೋಟಗಾರಿಕೆ ತರಬೇತಿ ಅರ್ಜಿ ಸ್ಕ್ರಾಲ್ ಆಗುತ್ತಿರುತ್ತದೆ. ಅದರ ಮೇಲೆ ಕ್ಲಿಕ್ ಮಾಡಿ  ಮೇ 22 ರವರೆಗೆ ಡೌನ್ಲೋಡ್ ಮಾಡಿಕೊಳ್ಳಬೇಕು. ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಯೊಂದಿಗೆ ಅವಶ್ಯಕ ದಾಖಲೆಗಳು ಹಾಗೂ ಇತ್ತೀಚಿನ 2 ಭಾವಚಿತ್ರಗಳನ್ನು ಲಗತ್ತಿಸಿ ಕಲಬುರಗಿ (ಜಿಲ್ಲಾ ಪಂಚಾಯತ) ತೋಟಗಾರಿಕೆ ಉಪ ನಿರ್ದೇಶಕರ ಕಚೇರಿ / ಹಿರಿಯ ಸಹಾಯಕ ನಿರ್ದೇಶಕರು (ರಾ.ವ) ಕಚೇರಿಯಲ್ಲಿ ಕಚೇರಿ ಸಮಯದಲ್ಲಿ ಮೇ 22 ಸಂಜೆ 5 ಗಂಟೆಯೊಳಗಾಗಿ ಅರ್ಜಿ ಸಲ್ಲಿಸಬೇಕು.  ಮೇ25 ರ ಬೆಳಗ್ಗೆ 10 ಗಂಟೆಗೆ ತಮ್ಮ ಮೂಲ ದಾಖಲೆಗಳೊಂದಿಗೆ ಕಲಬುರಗಿ ತೋಟಗಾರಿಕೆ ಉಪನಿರ್ದೇಶಕರು (ಜಿಲ್ಲಾ ಪಂಚಾಯತ್) ಕಚೇರಿಯಲ್ಲಿ ಸಂದರ್ಶನಕ್ಕೆ ಹಾಜರಾಗಬೇಕು.

ವಿಧಾನಸಭಾ ಚುನಾವಣಾ ನೀತಿ ಸಂಹಿತಿ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಈ ಹಿಂದೆ ತೋಟಗಾರಿಕೆ ತರಬೇತಿ ಕಾರ್ಯಕ್ರಮದ ಅವಧಿ ಹಾಗೂ ಸಂದರ್ಶನದ ದಿನಾಂಕ ಮುಂದೂಡಲಾಗಿತ್ತು ಎಂದು ಕಲಬುರಗಿ (ರಾಜ್ಯ ವಲಯ) ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತರಬೇತಿಗೆ ಅರ್ಜಿ ಆಹ್ವಾನ

ಕಲಬುರಗಿ ಎಸ್.ಬಿ.ಐ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಜಿಲ್ಲೆಯ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಉಚಿತವಾಗಿ ಇದೇ ಮೇ 22 ರಿಂದ 31 ರವರೆಗೆ 10 ದಿನಗಳ ಕಾಲ ಉಚಿತವಾಗಿ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗದೆ ಎಂದು ಸಂಸ್ಥೆಯ ಎಸ್.ಬಿ.ಐ. ಅರ್ಸೆಟ್ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : ಈ ಲಿಸ್ಟ್ ನಲ್ಲಿರುವ ರೈತರಿಗೆ ಪಿಎಂ ಕಿಸಾನ್ ಹಣ ಜಮೆಯಾಗಲ್ಲ  ನಿಮ್ಮ ಹೆಸರಿದೆಯೇ ಇಲ್ಲೇ ಚೆಕ್ ಮಾಡಿ

ಈ ತರಬೇತಿ ಸಂದರ್ಭದಲ್ಲಿ ಉಚಿತ ಊಟ ಹಾಗೂ ವಸತಿ ಸೌಲಭ್ಯ ನೀಡಲಾಗುತ್ತದೆ. ವಯೋಮಿತಿ 18 ರಿಂದ 45 ವರ್ಷದೊಳಗಿನ ಬಿ.ಪಿ.ಎಲ್, ಅಂತ್ಯೋದಯ ರೇಷನ್  ಕಾರ್ಡ್, ಎಮ್.ಜಿ.ಎನ್.ಆರ್.ಇ.ಜಿ.ಎ ಕಾರ್ಡ್ ಹೊಂದಿದ ಕುಟುಂಬದ ನಿರುದ್ಯೋಗಿ ಅಭ್ಯರ್ಥಿಗಳು ಸಂಸ್ಥೆಯಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿದ ಅವಶ್ಯಕ ದಾಖಲೆಗಳೊಂದಿಗೆ ಮೇ 20 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತರಬೇತಿ ಸಂಸ್ಥೆಯಲ್ಲಿ ಇದೇ ಮೇ 20 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 3.30 ಗಂಟೆಯವರೆಗೆ ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕು.

ಹೆಚ್ಚಿನ ಮಾಹಿತಿಗಾಗಿ ರೈತರು ತರಬೇತಿ ಸಂಸ್ಥೆಯನ್ನು ಹಾಗೂ ಮೊಬೈಲ್ ಸಂಖ್ಯೆ 9886781239, 9900135705 ಹಾಗೂ 9448994585 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.

Leave a Comment