ರಾಜ್ಯ ಸರ್ಕಾರದ ಪಿಎಂ ಕಿಸಾನ್ ಎಷ್ಟು ಕಂತುಗಳು ಜಮೆ: ಚೆಕ್ ಮಾಡಿ

Written by Ramlinganna

Updated on:

state PM Kisan scheme  ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಯೋಜನೆಗೆ ರಾಜ್ಯ ಸರ್ಕಾರವು ಪ್ರತಿ ವರ್ಷ ನೀಡಲಾಗುವ ಹೆಚ್ಚುವರಿ 4 ಸಾವಿರ ರೂಪಾಯಿಗಳಲ್ಲಿ ಎಷ್ಟು ಕಂತುಗಳು ನಮ್ಮ ಖಾತೆಗೆ ಜಮೆಯಾಗಿರುವುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.

ಹೌದು, ಕೇಂದ್ರ ಸರ್ಕಾರವು ಪ್ರತಿ ವರ್ಷ ಮೂರು ಕಂತುಗಳಲ್ಲಿ 6 ಸಾವಿರ ರೂಪಾಯಿ ರೈತರ ಖಾತೆಗೆ ಜಮೆ ಮಾಡುತ್ತಿರುವುದು  ತಮಗೆಲ್ಲರಿಗೂ ಗೊತ್ತಿದ ಸಂಗತಿ. ಈಗಾಗಲೇ 12 ಕಂತುಗಳು ರೈತರ ಖಾತೆಗೆ ಜಮೆ ಮಾಡಿದೆ. ಇದೇ ಕೇಂದ್ರ ಸರ್ಕಾರದ ಪಿಎಂ ಕಿಸಾನ್  ಯೋಜನೆಗೆ ಹೆಚ್ಚುವರಿಯಾಗಿ ರಾಜ್ಯ ಸರ್ಕಾರವು ಪ್ರತಿ ವರ್ಷ 4 ಸಾವಿರ ರೂಪಾಯಿಯನ್ನು ಎರಡು ಕಂದುಗಳಲ್ಲಿ ರೈತರ ಖಾತೆಗೆ ಜಮೆ ಮಾಡುತ್ತಿದೆ.ಆದರೆ ಬಹುತೇಕ ರೈತರಿಗೆ ಜಮೆ ಮಾಡುತ್ತಿರುವ ಕುರಿತು ಗೊತ್ತಿರಲಿಕ್ಕಿಲ್ಲ.

ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಯೋಜನೆಯ ಸ್ಟೇಟಸ್ ನಂತೆ ರಾಜ್ಯ ಸರ್ಕಾರದ ವತಿಯಿಂದ ರೈತರ ಖಾತೆಗೆ ಜಮೆ ಮಾಡುವ ಕುರಿತು ಸ್ಟೇಟಸ್ ಚೆಕ್ ಮಾಡಬಹುದು. ಇಲ್ಲಿಯವರೆಗೆ ರೈತರ ಖಾತೆಗೆ ಎಷ್ಟು ಕಂತುಗಳು ಜಮೆಯಾಗಿದೆ? ಯಾವ ದಿನಾಂಕದಂದು ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಡಂಡಿದ್ದೀರಾ… ಇಲ್ಲಿದೆ ಮಾಹಿತಿ.

ಮೊಬೈಲ್ ನಲ್ಲೇ ಪಿಎಂ ಕಿಸಾನ್ ಯೋಜನೆಯ ಹೆಚ್ಚುವರಿ 4 ಸಾವಿರ ಜಮೆ ಸ್ಟೇಟಸ್ ಚೆಕ್ ಮಾಡುವುದು ಹೇಗೆ?

ರೈತರು ಪಿಎಂ ಕಿಸಾನ್ ಯೋಜನೆಯಡಿಯಲ್ಲಿ 4 ಸಾವಿರ ರೂಪಾಯಿ ಹೆಚ್ಚುವರಿಯಾಗಿ ನೀಡುವ ಹಣವು ನಿಮ್ಮ ಖಾತೆಗೆ ಜಮೆಯಾಗುತ್ತಿದೆಯೋ ಇಲ್ಲವೋ ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡಲು ಈ

https://fruitspmk.karnataka.gov.in/MISReport/FarmerDeclarationReport.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಫ್ರೂಟ್ಸ್ ತಂತ್ರಾಂಶದ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ರೈತರು ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ಹೋಬಳಿ ಆಯ್ಕೆ ಮಾಡಿಕೊಂಡು ಗ್ರಾಮ ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ. ನಂತರ ವೀಕ್ಷಿಸು ಮೇಲೆ ಕ್ಲಿಕ್ ಮಾಡಬೇಕು. ಆಗ ಪಿಎಂ ಕಿಸಾನ್ ಯೋಜನೆಯಡಿ ಹೆಚ್ಚುವರಿಯಾಗಿ ಪ್ರತಿ ವರ್ಷ 4 ಸಾವಿರ ರೂಪಾಯಿ ಜಮೆಯಾಗುತ್ತಿರುವ ರೈತರ ಪಟ್ಟಿ ಕಾಣುತ್ತದೆ.

ಇದನ್ನೂ ಓದಿ ನಿಮ್ಮ ಜಮೀನು ಯಾರಿಂದ ಯಾರಿಗೆ ವರ್ಗಾವಣೆಯಾಗಿದೆ? ಚೆಕ್ ಮಾಡಿ

ಅಲ್ಲಿ ಜಿಲ್ಲೆ, ತಾಲೂಕು, ಹೋಬಳಿ ಗ್ರಾಮ ಹಾಗೂ ಪಿಎಂಕೆಐಡಿ, ಹೆಸರು, ಸ್ಟೇಟಸ್ ಸೇರಿದಂತೆ ಇನ್ನಿತರ ಮಾಹಿತಿಯ ಪಟ್ಟಿ ಕಾಣುತ್ತದೆ. ಅಲ್ಲಿ ನಿಮ್ಮ ಹೆಸರಿನ ಹಿಂದಿರುವ ಪಿಎಂಕೆಐಡಿಯನ್ನು ಕಾಪಿ ಮಾಡಿಕೊಳ್ಳಬೇಕು. ಅಥವಾ ಒಂದು ಕಡೆ ಬರೆದಿಟ್ಟುಕೊಳ್ಳಬಹುದು. ಇದಾದ ಮೇಲೆ  ಪಿಎಂ ಕಿಸಾನ್ ಸ್ಟೇಟಸ್ ನೋಡುವ ಈ

https://fruitspmk.karnataka.gov.in/MISReport/CheckStatus.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಅಲ್ಲಿನೀವು ಕಾಪಿ ಮಾಡಿಕೊಂಡು ಅಥವಾ ಬರೆದಿಟ್ಟುಕೊಂಡ ಪಿಎಂಕೆಐಡಿ  ಹಾಕಬೇಕು. ನಂತರ ಹುಡುಕಿ ಮೇಲೆ ಕ್ಲಿಕ್ ಮಾಡಿದರೆ ಸಾಕು ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅದೇ ಅರ್ಜಿಯ ಸ್ಥಿತಿ ವೀಕ್ಷಿಸಿ ಪೇಜ್.  ಇಲ್ಲಿ ನಿಮ್ಮ ಹೆಸರು, ಅರ್ಜಿಯ ಸ್ಥಿತಿ ಅಪ್ರೂವ್ ಆಗಿದೆಯೋ ಇಲ್ಲವೋ ಎಂಬ ಸಂದೇಶವಿರುತ್ತದೆ.

state PM Kisan scheme  ರೈತರ ಖಾತೆಗೆ ಎಷ್ಟು ಕಂತುಗಳು ಜಮೆಯಾಗಿದೆ?

ಅದರ ಕೆಳಗಡೆ ಇಲ್ಲಿಯವರೆಗೆ ನಿಮ್ಮ ಖಾತೆಗೆ ಎಷ್ಟು ಕಂತುಗಳು ಜಮೆಯಾಗಿದೆ? ಯಾವ ದಿನಾಂಕದಂದು ಜಮೆಯಾಗಿದೆ? ಎಷ್ಟು ಹಣ ಜಮೆಯಾಗಿದೆ? ನಿಮ್ಮ ಫ್ರೂಟ್ಸ್ ಐಡಿ ಸಂಖ್ಯೆ ಇರುತ್ತದೆ. ಈ ಫ್ರೂಟ್ಸ್ ಐಡಿಯನ್ನು ಸಹ ನೀವು ಬರೆದಿಟ್ಟುಕೊಳ್ಳಬೇಕು.ಇದು ನಿಮಗೆ ಮುಂದೆ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆಯಿಂದ ಸಹಾಯಧನ ಪಡೆಯುವಾಗ ಬೇಕಾಗುತ್ತದೆ. ಆಧಾರ್ ಕಾರ್ಡ್ ನಂತೆ ಈ ಫ್ರೂಟ್ಸ್ ರೈತರಿಗೆ ಮಹತ್ವದ್ದಾಗಿರುತ್ತದೆ. ಇದನ್ನೇ  ರೈತರ ಗುರುತಿನ ಚೀಟಿ ಎಂದು ಸಹ ಹೇಳಬಹುದು.

Leave a Comment