ಗೃಹಲಕ್ಷ್ಮೀ ಹಣ ಜಮೆ-How to check Gruha lakshmi ಸ್ಟೇಟಸ್

Written by Ramlinganna

Updated on:

How to check Gruha lakshmi  ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದ ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯಡಿ ನೋಂದಾಯಿಸಿಕೊಂಡ ಫಲಾನುಭವಿಗಳ ಖಾತೆಗೆ ಇದೇ ತಿಂಗಳ 2 ಸಾವಿರ ರೂಪಾಯಿ ಜಮೆಯಾಗಲಿದೆ.

ಹೌದು, ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದರೆ ಐದು ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತರಲಾಗುವುದು ಎಂದು ಘೋಷಣೆ ಮಾಡಿತ್ತು. ಅದರಂತೆ ಅಧಿಕಾರಕ್ಕೆ ಬಂದ ನಂತರ ಸರ್ಕಾರವು ಒಂದೊಂದಾಗಿ ಯೋಜನೆಗಳನ್ನು ಜಾರಿಗೆ ತಂದಿದೆ. ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ ಹಾಗೂ ಯುವನಿಧಿ ಯೋಜನೆಗಳನ್ನು ಘೋಷಣೆ ಮಾಡಿತ್ತು.

ಶಕ್ತಿಯೋಜನೆಯು ಈಗಾಗಲೇ ರಾಜ್ಯದಲ್ಲಿ ಯಶಸ್ವಿಯಾಗಿ ನಡೆಯುತ್ತಿದೆ. ಅದರಂತೆ ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ಸೌಲಭ್ಯ ನೀಡಲಾಗುತ್ತಿದೆ. ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಕೆಜಿ ಅಕ್ಕಿಯ ಬದಲಾಗಿ ಫಲಾನುಭವಿಗಳ ಖಾತೆಗೆ ಹಣವೂ ಜಮೆ ಮಾಡಲಾಗುತ್ತಿದೆ.

ಇದನ್ನೂ ಓದಿ ಪಿಎಂ ಕಿಸಾನ್ ಗ್ರಾಮವಾರು ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

ಗೃಹಲಕ್ಷ್ಮೀ ಯೋಜನೆಯಡಿ ನೋಂದಣಿ ಮಾಡಿಸಿಕೊಂಡ ಫಲಾನುಭವಿಗಳ ಖಾತೆಗೆ ಈಗಾಗಲೇ ಆಗಸ್ಟ್ 30 ರಂದು ಹಣ ಬಿಡುಗಡೆ ಮಾಡಲಾಗಿತ್ತು. ಹಾಗೂ ಫಲಾನುಭವಿಗಳ ಖಾತೆಗೂ ಹಣ ಜಮೆಯಾಗಿದೆ. ಈಗ ಗೃಹಲಕ್ಷ್ಮೀ ಯೋಜನೆಯ ಎರಡನೇ ಕಂತು ಇದೇ ತಿಂಗಳು ಸೆಪ್ಟೆಂಬರ್ 30 ರಂದು ಜಮೆಯಾಗುವ ಸಾಧ್ಯತೆಯಿದೆ. ಏಕೆಂದರೆ ಕಳೆದ ತಿಂಗಳು ಸಹ ಆಗಸ್ಟ್ 30 ರಂದು ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡಲಾಗಿತ್ತು.

ಈ ಹಿಂದೆ ಸರ್ಕಾರವು ಪ್ರತಿ ತಿಂಗಳು 26 ನೇ ತಾರೀಖಿನಂದು ಗೃಹಲಕ್ಷ್ಮೀ ಹಣ ಖಾತೆಗೆ ಸೇರಲಿದೆ ಎಂದು ಹೇಳಿತ್ತು. ಮೊದಲ ಕಂದು ಕಾರ್ಯಕ್ರಮ ಆಯೋಜನೆಯಲ್ಲಿ ಸ್ವಲ್ವ ವಿಳಂಬವಾಗಿದ್ದರಿಂದ ಆಗಸ್ಟ್ 30 ರಂದು ಬಿಡುಗಡೆ ಮಾಡಲಾಗಿತ್ತು.  ಸೆಪ್ಟೆಂಬರ್ 26 ರಂದು ಜಮೆಯಾಗದಿದ್ದರೆ ಸೆಪ್ಟೆಂಬರ್ 30 ರಂದು ಫಲಾನುಭವಿಗಳ ಖಾತೆಗೆ ಜಮೆಯಾಗುವ ಸಾಧ್ಯತೆಯಿದೆ.

How to check Gruha lakshmi ಸ್ಟೇಟಸ್ ಚೆಕ್ ಮಾಡಿ

ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ ನೋಂದಣಿ ಮಾಡಿಸಿಕೊಂಡವರಿಗೆ ಹಣ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ

https://play.google.com/store/apps/details?id=com.dbtkarnataka

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮಗೆ ಡಿಬಿಟಿ ಆ್ಯಪ್ ಕಾಣಿಸುತ್ತದೆ. ಅಲ್ಲಿ ನೀವು ಇನಸ್ಟಾಲ್ ಮೇಲೆ ಕ್ಲಿಕ್ ಮಾಡಿ ಓಪನ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಅಲೋ ಮೇಲೆ ಕ್ಲಿಕ್ ಮಾಡಿ ನಿಮ್ಮ ಆಧಾರ್ ಕಾರ್ಡ್ ನಂಬರ್ ಹಾಕಿ  ಕಂಡಿಶನ್ ಬಾಕ್ಸ್ ಆಯ್ಕೆ ಮಾಡಿಕೊಳ್ಳಬೇಕು.  ನಂತರ ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ಓಟಿಪಿ ನಂಬರ್ ಹಾಕಿದ ಮೇಲೆ ಒಂದು ಪಾಸ್ವರ್ಡ್ ನೀವು ಕ್ರಿಯೇಟ್ ಮಾಡಿಕೊಳ್ಳಬೇಕು. ನಂತರ ಸಬ್ಮಿಟ್ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮ್ಮ ಮೊಬೈಲ್ ನಂಬರ್ ನಮೂದಿಸಿ ನಿಮಗೆ ಗೃಹಲಕ್ಷ್ಮೀ ಯೋಜನೆಯ ಮೊದಲನೇ ಕಂತಿನ  ಹಣ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಿಕೊಳ್ಳಬಹುದು.

ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ 1 ಕೋಟಿಗೂ ಅಧಿಕ ಅರ್ಜಿಗಳು ಸಲ್ಲಿಕೆಯಾಗಿದ್ದರೂ 82 ಲಕ್ಷ ಜನರ ಖಾತೆಗೆ ಮಾತ್ರ ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗಿತ್ತು.  ಯಾರು ಯಾರಿಗೆ ಹಣ ಜಮೆಯಾಗಿಲ್ಲವೋ ಅಂತಹವರಿಗೆ ಈ ತಿಂಗಳು ಕಳೆದ ತಿಂಗಳಿನ ಹಣ ಸೇರಿ ಒಟ್ಟು 4 ಸಾವಿರ ರೂಪಾಯಿ ಜಮೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟನೆ ನೀಡಿದ್ದರು. ಈ ಆಧಾರದ ಮೇಲೆ ಈ ತಿಂಗಳು ಕಳೆದತಿಂಗಳು ವಂಚಿತವರಿಗೆಲ್ಲಾ 4 ಸಾವಿರ ರೂಪಾಯಿ ಜಮೆಯಾಗುವ ಸಾಧ್ಯತೆಯಿದೆ.

Leave a Comment