ನಿಮ್ಮ ಜಮೀನು ಹಿಂದೆ ಯಾರ ಹೆಸರಿನಲ್ಲಿತ್ತು? ಇಲ್ಲೇ ಚೆಕ್ ಮಾಡಿ

Written by Ramlinganna

Updated on:

karnataka Land history ರೈತರ ಹೆಸರಿನಲ್ಲಿರುವ ಜಮೀನು ಹಾಗೂ  ಅಕ್ಕಪಕ್ಕದ ಜಮೀನು ಯಾರ ಹೆಸರಿನಿಂದ ಯಾರ ಹೆಸರಿಗೆ ವರ್ಗಾವಣೆಯಾಗಿದೆ ಎಂಬುದನ್ನುಮೊಬೈಲ್ ನಲ್ಲೇ ಚೆಕ್ ಮಾಡಬಹುದು.

ಇಲ್ಲೇ ಯೂಟೂಬ್ ಚಾನೆಲ್ ಸಬಸ್ಕ್ರೈಬ್ ಮಾಡಿ ಕೃಷಿ ಮಾಹಿತಿ ಪಡೆಯಿರಿ

ಹೌದು, ರೈತರ ಬಳಿಯಿರುವ ಮೊಬೈಲ್ ನಲ್ಲೇ ಕೇವಲ ಒಂದೇ ನಿಮಿಷದಲ್ಲಿ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

karnataka Land history ಜಮೀನಿನ ಬದಲಾವಣೆ ಮೊಬೈಲ್ ನಲ್ಲಿ ಚೆಕ್ ಮಾಡುವುದು ಹೇಗೆ?

ರೈತರ ಜಮೀನು ಯಾರ ಹೆಸರಿನಿಂದ ಯಾರ ಹೆಸರಿಗೆ ಬದಲಾವಣೆಯಾಗಿದೆ ಎಂಬುದನ್ನು ಚೆಕ್ ಮಾಡಲು ಈ

https://landrecords.karnataka.gov.in/Service11/MR_MutationExtract.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಭೂಮಿ ಆನ್ಲೈನ್ ಮುಟೇಶನ್ ಎಕ್ಸಟ್ರ್ಯಾಕ್ಟ್ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವುನಿಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿಕೊಳ್ಳಬೇಕು. ನಂತರ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ಹೋಬಳಿ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಊರು ಆಯ್ಕೆ ಮಾಡಿಕೊಳ್ಳಬೇಕು.

ನೀವು ಯಾವ ಸರ್ವೆ ನಂಬರ್ ಚೆಕ್ ಮಾಡಬೇಕೆಂದುಕೊಂಡಿದ್ದೀರೋ ಆ ಸರ್ವೆ ನಂಬರ್ ನಮೂದಿಸಬೇಕು.  ನಂತರ Fetch Details ಮೇಲೆ ಕ್ಲಿಕ್ ಮಾಡಬೇಕು.

ಆಗ ನೀವು ನಮೂದಿಸಿದ ಸರ್ವೆ ನಂಬರ್ ಅಕ್ಕಪಕ್ಕದಲ್ಲಿರುವ ಹಿಸ್ಸಾ ನಂಬರ್ ಗಳ ಪಟ್ಟಿ ಕಾಣಿಸುತ್ತದೆ. ಅದರ ಎದುರುಗಡೆ ನಿಮ್ಮ ಸರ್ವೆ ನಂಬರ್ ಅಕ್ಕಪಕ್ಕದಲ್ಲಿರುವ ಹಿಸ್ಸಾ ನಂಬರ್ ಯಾವ ವರ್ಷ ಬದಲಾವಣೆ ಆಗಿದೆ ಎಂಬ ವರ್ಷ ಕಾಣಿಸುತ್ತದೆ. ನಂತರ ಮುಟೇಶನ್ ನಂಬರ್ ಕಾಣಿಸುತ್ತದೆ.

ಅದರ ನಂತರ ಜಮೀನು ಒಬ್ಬರಿಂದ ಇನ್ನೊಬ್ಬರಿಗೆ ಹೇಗೆ ಬದಲಾವಣೆಯಾಗಿದೆ  ಹಾಗೂ ತಹಶೀಲ್ದಾರರು ಯಾವಾಗ ಅಪ್ರೂವ್ ಮಾಡಿದ್ದಾರೆ ಎಂಬ ಮಾಹಿತಿ ಕಾಣಿಸುತ್ತದೆ.

ಇದನ್ನೂ ಓದಿ Voter listನಲ್ಲಿ ನಿಮ್ಮ ಹೆಸರು ಇದೆಯೇ? ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಸರ್ವೆ ನಂಬರ್ ಹಾಗೂ ಹಿಸ್ಸಾನಂಬರ್ ಹಿಂದಿರುವ ಸೆಲೆಕ್ಟ್ ಮೇಲೆ ಕ್ಲಿಕ್ ಮಾಡಬೇಕು.ನಂತರ ಅಲ್ಲಿ ಕಾಣುವ Preview ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ಓಪನ್ ಆಗುತ್ತದೆ. ಅಲ್ಲಿ ಸರ್ವೆ ನಂಬರ್, ಸ್ವಾಧೀನದಾರರ ಹೆಸರು, ಜಮೀನು, ಖಾತೆ ನಂಬರ್ ಹಾಗೂ ಸ್ಟೇಟಸ್ ಚೆಕ್ ಮಾಡಿಕೊಳ್ಳಬಹುದು.

ರೈತರ ಮುಖ್ಯವಾದ ದಾಖಲೆ ಜಮೀನು

ರೈತರಿಗೆ ಅತೀ ಮುಖ್ಯವಾದ ದಾಖಲೆ ಪಹಣಿಯಾಗಿದೆ. ರೈತರು ತಮ್ಮ ಜಮೀನಿನ ಪಹಣಿಯಲ್ಲಿ ತಮ್ಮ ಹೆಸರು ಸರಿಯಾಗಿದೆಯೋ ಇಲ್ಲವೋ ಎಂಬುದನ್ನು ಮೊದಲು ಚೆಕ್ ಮಾಡಿಕೊಳ್ಳಬೇಕು. ಅಂದರೆ ಆಧಾರ್ ಕಾರ್ಡ್ ಹಾಗೂ ಜಮೀನಿನ ಪಹಣಿಯಲ್ಲಿ ಹೆಸರು ಒಂದೇ ಆಗಿರಬೇಕು. ಹೆಸರು ವ್ಯತ್ಯಾಸವಾಗಿದ್ದರೆ ಕೂಡಲೇ ಜಮೀನಿನ ದಾಖಲೆ ಸರಿಪಡಿಸಿಕೊಳ್ಳಬೇಕು. ಇಲ್ಲದಿದ್ದರೆ ನಿಮ್ಮ ಜಮೀನಿನ ಮೇಲೆ ನಿಮಗೆ ಸರ್ಕಾರಿ ಸೌಲಭ್ಯ ಸಿಗುವುದಿಲ್ಲ.

ಹೌದು, ಬೆಳೆ ವಿಮೆ, ಬೆಳೆ ಹಾನಿ ಪರಿಹಾರ ಸೇರಿದಂತೆ ಸರ್ಕಾರದ ಇತರ ಸೌಲಭ್ಯ ಸಿಗಬೇಕಾದರೆ ನಿಮ್ಮ ಹೆಸರು, ತಂದೆಯ ಹೆಸರು ಒಂದೇ ಆಗಿರಬೇಕು. ಇದರೊಂದಿಗೆ  ರೇಶನ್ ಕಾರ್ಡ್ ಹಾಗೂ ಬ್ಯಾಂಕ್ ಪಾಸ್ ಬುಕ್ ಪ್ರತಿಯಲ್ಲಿಯೂ ಒಂದೇ ರೀತಿಯಾಗಿರಬೇಕು.

ಜಮೀನಿನ ಪಹಣಿ ಆಗಾಗ ಚೆಕ್ ಮಾಡಿಕೊಳ್ಳಿ

ರೈತರು ತಮ್ಮ ಜಮೀನಿನ ದಾಖಲೆಯನ್ನು ಆಗಾಗ ಮೊಬೈಲ್ ನಲ್ಲಿ ಚೆಕ್ ಮಾಡಿಕೊಳ್ಳಬೇಕು. ಏಕೆಂದರೆ ಜಮೀನಿನಲ್ಲಿ ಆಗುವ ಬದಲಾವಣೆಯನ್ನು ಚೆಕ್ ಮಾಡಿಕೊಳ್ಳಬಹುದು.  ರೈತರಿಗೆ ಗೊತ್ತಿಲ್ಲದೆ ಕೆಲವು ಕಡೆ ಜಮೀನು ಬೇರೆಯವರ ಹೆಸರಿಗೆ ವರ್ಗಾವಣೆಯಾಗುವ ಹೆಚ್ಚು ಎಕರೆ ನಮೂದಿಸಿಕೊಳ್ಳುತ್ತಿರುತ್ತಾರೆ. ನಂತರ ಜಮೀನನಲ್ಲಿ ಆಗಿದ್ದ ಬದಲಾವಣೆ ಗೊತ್ತಾಗುವುದಿಲ್ಲ. ಹಾಗಾಗಿ ಆನ್ಲೈನ್ ನಲ್ಲೇ ರೈತರು ಚೆಕ್ ಮಾಡಿಕೊಳ್ಳಬಹುದು.

Leave a Comment