ಪಿಎಂ ಕಿಸಾನ್ ಸ್ಟೇಟಸ್ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ

Written by Ramlinganna

Published on:

How to check PMkisan status : ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಖಾತೆಗೆ  ಇಂದು 18ನನೇ ಕಂತಿನ ಹಣ ಬಿಡುಗಡೆಯಾಗಿರುವುದರಿಂದ  ತಮ್ಮ ಖಾತೆಗೆ ಹಣ ಜಮೆಯಾಗಿದೆಯೋ ಇಲ್ಲವೋ ಎಂಬುದರ ಸ್ಟೇಟಸ್ ಚೆಕ್ ಮಾಡಬಹುದು.

ಹೌದು, ತಮಗೆಲ್ಲಾ ಗೊತ್ತಿದ್ದ ಹಾಗೆ ಪಿಎಂ ಕಿಸಾನ್ ಯೋಜನೆಯ 18ನೇ ಕಂತಿನ ಹಣವನ್ನು ನರೇಂದ್ರ ಮೋದಿಯವರು ಬಿಡುಗಡೆ ಮಾಡಿದ್ದಾರೆ. . ಆದರೆ ಯಾರು ಯಾರಿಗೆ ಪಿಎಂ ಕಿಸಾನ್ ಯೋಜನೆಯ ಹಣ ಜಮೆಯಾಗಿದೆ? ಯಾರಿಗೆ ಜಮೆಯಾಗಿಲ್ಲ ಇದರೊಂದಿಗೆ ನಿಮಗೆ ಯಾವ ಕಾರಣಕ್ಕಾಗಿ ಪಿಎಂ ಕಿಸಾನ್ ಹಣ ಜಮೆಯಾಗಿಲ್ಲ ಎಂಬುದನ್ನು ರೈತರು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಮಾಹಿತಿ.

How to check PMkisan status ಪಿಎಂ ಕಿಸಾನ್ ಯೋಜನೆಯ ಎಷ್ಟು ಕಂತುಗಳು ಜಮೆಯಾಗಿವೆ?

ಪಿಎಂ ಕಿಸಾನ್ ಯೋಜನೆಯ ಎಷ್ಟು ಕಂತುಗಳು ನಿಮಗೆ ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಲು ಈ

https://pmkisan.gov.in/BeneficiaryStatus_New.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪಿಎಂ ಕಿಸಾನ್ ಯೋಜನೆಯ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ಪಿಎಂ ಕಿಸಾನ್ ಯೋಜನೆಯ ನೋಂದಣಿ ಸಂಖ್ಯೆ ನಮೂದಿಸಬೇಕು. ನಂತರ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಿ ಗೆಟ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು.  ಆಗ ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ಆ ಓಟಿಪಿ ಸಂಖ್ಯೆಯನ್ನು ನಮೂದಿಸಿ ನೀವು ಪಿಎಂ ಕಿಸಾನ್ ಯೋಜನೆಯ ಸ್ಟೇಟಸ್ ಚೆಕ್ ಮಾಡಬಹುದು.

ನಿಮಗೆ ಪಿಎಂ ಕಿಸಾನ್ ಯೋಜನೆಯ ನೋಂದಣಿ ಸಂಖ್ಯೆ ಗೊತ್ತಿಲ್ಲದಿದ್ದರೆ ನೀವು ಈ

https://pmkisan.gov.in/KnowYour_Registration.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನೀವು ಅಲ್ಲಿ ನಿಮ್ಮ ಮೊಬೈಲ್ ನಂಬರ್ ನಮೂದಿಸಿ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಿ ಗೆಟ್ ಮೊಬೈಲ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು.  ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ಆ ಓಟಿಪಿ ನಮೂದಿಸಿ ಗೆಟ್ ಡಿಟೇಲ್ಸ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಪಿಎಂ ಕಿಸಾನ್ ಯೋಜನೆಯ ನೋಂದಣಿ ಸಂಖ್ಯೆ ಕಾಣಿಸುತ್ತದೆ. ನಿಮ್ಮ ಹೆಸರು ಕಾಣಿಸುತ್ತದೆ. ನಿಮ್ಮ ನೋಂದಣಿ ಸಂಖ್ಯೆ ಬರೆದಿಟ್ಟುಕೊಳ್ಳಬೇಕು.ಅಥವಾ ಕಾಪಿ ಮಾಡಿಕೊಳ್ಳಬೇಕು. ನಂತರ ಬ್ಯಾಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ನೀವು Know your status ಮೇಲೆ ಕ್ಲಿಕ್ ಮಾಡಬೇಕು. ಆಗ ತೆರೆದುಕೊಳ್ಳುವ ಪೇಜ್ ನಲ್ಲಿ ನಿಮ್ಮ ನೋಂದಣಿ ಸಂಖ್ಯೆ ನಮೂದಿಸಿ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಿ ಗೆಟ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು.

ಇದನ್ನೂಓದಿ ದಸರಾ ಹಬ್ಬಕ್ಕೆ ಈ ಮಹಿಳೆಯರಿಗೆ ಗೃಹಲಕ್ಷ್ಮೀ ಹಣ ಜಮೆ

ಆಗ ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ಆ ಓಟಿಪಿ ನಮೂದಿಸಿ ಗೆಟ್ ಡಾಟಾ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅದೇ ನಿಮ್ಮ ಸ್ಟೇಟಸ್ ಪೇಜ್ ಆಗಿರುತ್ತದೆ.

ಪೇಜ್ ನಲ್ಲಿ ಏನೇನು ಮಾಹಿತಿ ಇರುತ್ತದೆ?

ಅಲ್ಲಿ ನೋಂದಣಿ ಸಂಖ್ಯೆ, ನೀವು ನೋಂದಣಿ ಮಾಡಿದ ದಿನಾಂಕ, ನಿಮ್ಮ ಹೆಸರು, ತಂದೆಯ ಹೆಸರು, ಊರು, ನಿಮ್ಮ ಮೊಬೈಲ್ ನಂಬರ್  ಕಾಣಿಸುತ್ತದೆ. ನಿಮಗೆ ಕೊನೆಯ ಯಾವ ಕಂತು ಜಮೆಯಾಗಿದೆ ಎಂಬ ಸ್ಟೇಟಸ್ ಕಾಣಿಸುತ್ತದೆ. ಯಾವ ಬ್ಯಾಂಕಿಗೆ ಹಾಗೂ ಯಾವಾಗ ಹಣ ಜಮೆಯಾಗಿದೆ ಎಂಬ ಮಾಹಿತಿ ಕಾಣಿಸುತ್ತದೆ.

ಈ ಕೆಳಗಿನ ವೀಡಿಯೋ ನೋಡಿ ಆಕಳು ತನ್ನ ಯಜಮಾನನನ್ನು ಬದುಕಿಸಿದ್ದು ಹೇಗೆ? ಆಕಳು ಮೂಕವಾಗಿದ್ದು ಹೇಗೆ?  ಈ ಕಥೆ ಕೇಳಿದರೆ ನೀವು ಭಾವುಕರಾಗುತ್ತೀರಿ ಫೋಟೋ ಮೇಲೆ ಕ್ಲಿಕ್ ಮಾಡಿದರೆ ಸಾಕು ವೀಡಿಯೋ ಓಪನ್ ಆಗುತ್ತದೆ

ಆಕಳು ತನ್ನ ಯಜಮಾನನನ್ನು ಬದುಕಿಸಿದ್ದು ಹೇಗೆ?

Eligibility status ಮೇಲೆ ಕ್ಲಿಕ್ ಮಾಡಿದಾಗ ಲ್ಯಾಂಡ್ ಸೀಡಿಂಗ್, ಇಕೆವೈಸಿ ಸ್ಟೇಟಸ್ ಹಾಗೂ ಆಧಾರ್ಬ್ಯಾಂಕ್ ಸೀಡಿಂಗ್ ಸ್ಟೇಟಸ್  ಈ ಎಲ್ಲಾ ಕಡೆ Yes ಇರಬೇಕು.

Reason of ineligibility (if any) ಮೇಲೆ ಕ್ಲಿಕ್ ಮಾಡಿದಾಗ ನೀವು ಪಿಎಂ ಕಿಸಾನ್ ಯೋಜನೆಗೆ ಅರ್ಹತೆ ಪಡೆದಿದ್ದೀರೋ ಇಲ್ಲವೋ ಎಂಬುದು ಕಾಣಿಸುತ್ತದೆ

Latest installments details ಮೇಲೆ ಕ್ಲಿಕ್ ಮಾಡಿದಾಗ ಯಾವಾಗ ಕೊನೆಯ ಕಂತು ಜಮೆಯಾಗಿದೆ ಎಂಬ ಮಾಹಿತಿ ಕಾಣಿಸುತ್ತದೆ.

Leave a Comment