ಬೆಳೆವಿಮೆ ಸ್ಟೇಟಸ್ ಮೊಬೈಲ್ ನಲ್ಲಿ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Written by By: janajagran

Updated on:

How to check your crop insurance status  ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ವಿವಿಧ ಬೆಳೆಗಳಿಗೆ ವಿಮೆ ಮಾಡಿಸಿದ ರೈತರು ಈಗ ಮೊಬೈಲ್ ನಲ್ಲಿಯೇ ಅರ್ಜಿಯ ಸ್ಟೇಟಸ್ ನೋಡಬಹುದು. ಹೌದು ವಿವಿಧ ಬೆಳೆಗಳಿಗೆ ವಿಮೆ ಮಾಡಿಸಿದ ರೈತರ ಅರ್ಜಿ ಸ್ವೀಕೃತವಾಗಿಯೋ ಇಲ್ಲವೋ ಎಂಬುದನ್ನು ಮನೆಯಲ್ಲಿಯೇ ಕುಳಿತು ಮೊಬೈಲ್ ನಲ್ಲಿ ನೋಡಬಹುದು.

ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಮುಂಗಾರು ಮತ್ತು ಹಿಂಗಾರು ಬೆಳೆಗಳಿಗೆ ವಿಮೆ ಮಾಡಿಸಲು ರೈತರಿಂದ  ಅರ್ಜಿ ಆಹ್ವಾನಿಸಲಾಗಿತ್ತು. ಇದಕ್ಕಾಗಿ ರಾಜ್ಯದ ಲಕ್ಷಾಂತರ ರೈತರು ವಿವಿಧ ಬೆಳೆಗಳಿಗೆ ವಿಮೆಯನ್ನು ಸಹ ಮಾಡಿಸಿದ್ದಾರೆ. ವಿಮೆಗಾಗಿ ಕಾಯುತ್ತಿರುವ ರೈತರು ಈಗ ವಿಮೆಯ ಸ್ಟೇಟಸ್ ನಲ್ಲಿ ಯಾವ ದಿನಾಂಕದಂದು ವಿಮೆ ಕಟ್ಟಲಾಗಿದೆ.  ವಿಮೆ ಕಂಪನಿಯವರು ಅರ್ಜಿಯನ್ನು ಸ್ವೀಕರಿಸಿದ್ದಾರೆಯೋ ಇಲ್ಲವೋ ಎಂಬುದನ್ನು ಮೊಬೈಲ್ ನಲ್ಲಿ ನೋಡಬಹುದು.

How to check your crop insurance status  ಫಸಲ್ ಬಿಮಾ ಯೋಜನೆ ಸ್ಟೇಟಸ್ ನೋಡುವುದು ಹೇಗೆ?

ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ವಿವಿಧ ಬೆಳೆಗಳಿಗೆ ವಿಮೆ ಕಟ್ಟಿದ ರೈತರು ಈ

https://www.samrakshane.karnataka.gov.in/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಸಂರಕ್ಷಣೆ (SAMRAKSHANE) ಸರ್ಕಾರದ ವೆಬ್ ಪೇಜ್ ಓಪನ್ ಆಗುತ್ತದೆ. ಅಲ್ಲಿ ನೀವು ಮುಂಗಾರು ಬೆಳೆಯ ಅರ್ಜಿ ಸ್ಟೇಟಸ್ ನೋಡಬೇಕಾದರೆ 2023-24ನೇ ಆಯ್ಕೆ ಮಾಡಿಕೊಂಡು ಖಾರೀಫ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ/Go ಮೇಲೆ ಕ್ಲಿಕ್ ಮಾಡಬೇಕು.

ಹಿಂಗಾರು ಬೆಳೆಗಳ ಅರ್ಜಿಯ ಸ್ಟೇಟಸ್ ನೋಡಬೇಕಾದರೆ Rabi ಆಯ್ಕೆ ಮಾಡಿಕೊಂಡು ಗೋ ಮೇಲೆ ಕ್ಲಿಕ್ ಮಾಡಬೇಕು.  ನಂತರ ಇನ್ನೊಂದು ಪೇಜ್ ಓಪನ್ ಆಗುತ್ತದೆ.  ಅಲ್ಲಿ ಸ್ಟೇಟಸ್ Farmers ಕಾಲಂ ಕೆಳಗಡೆಯಿರುವ ಚೆಕ್ ಸ್ಟೇಟಸ್ ಮೇಲೆ ಕ್ಲಿಕ್ ಮಾಡಬೇಕು. ನಂತರ ನೀವು ನಿಮ್ಮ ಮೊಬೈಲ್ ನಂಬರ್ ಆಯ್ಕೆ ಮಾಡಿಕೊಂಡು ನಿಮ್ಮ ಮೊಬೈಲ್ ನಂಬರ್ ನಮೂದಿಸಿ ಸರ್ಚ್ ಮೇಲೆ ಕ್ಲಿಕ್ ಮಾಡಬೇಕು.

ಆಗ ಇನ್ನೊಂದು ಪೇಜ್ ಓಪನ್ ಆಗುತ್ತದೆ. ನಿಮ್ಮ ಅರ್ಜಿಯು ವಿಮೆ ಕಂಪನಿಯಿಂದ ಸ್ವೀಕೃತವಾಗಿಯೋ ಇಲ್ಲವೆ ಎಂಬ ಮೆಸೇಜ್ ಕಾಣುತ್ತದೆ. ಅದರ ಕೆಳಗಡೆ ಬೆಳೆ ವಿಮೆ ನೋಂದಣಿಯ ಪ್ರಗತಿಯಲ್ಲಿದೆಯೋ ಇಲ್ಲವೆ ಮತ್ತು ಯಾಬ ಬ್ಯಾಂಕಿನಿಂದ ಅರ್ಜಿ ಪ್ರಗತಿಯಲ್ಲಿದೆ ಎಂಬ ಮೆಸೇಜ್ ಕಾಣುತ್ತದೆ. ಸೆಲೆಕ್ಟ್ ಮೇಲೆ ಕ್ಲಿಕ್ ಮಾಡಿದಾಗ ಅರ್ಜಿ ಯಾವ ದಿನಾಂಕದಂದು ಸ್ವೀಕೃತವಾಗಿದೆ ಎಂಬ ಮೆಸೇಜ್ ಕಾಣುತ್ತದೆ.

ಏನಿದು ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ?

ಪ್ರಕೃತಿ ವಿಕೋಪದಿಂದಾಗಿ ಬೆಳೆ ನಷ್ಚವಾದಾಗ ರೈತರ ಕೈಹಿಡಿಯಲು ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಆರಂಭಿಸಿದೆ. ಈ ಯೋಜನೆಯಡಿಯಲ್ಲಿ ರೈತರು ಮುಂಗಾರು ಮತ್ತು ಹಿಂಗಾರು ಬೆಳೆಗಳಿಗೆ ವಿಮೆ ಮಾಡಿಸಬಹುದು. ಬೆಳೆವಿಮೆ ಮಾಡಿಸಿದ ನಂತರ ಪ್ರಕೃತಿ ವಿಕೋಪದಿಂದಾಗಿ ಬೆಳೆಹಾನಿಯಾದರೆ ರೈತರಿಗೆ ಪರಿಹಾರ ನೀಡಲಾಗುವುದು.

ಇದನ್ನು ಓದಿ : ಪಿಎಂ ಕಿಸಾನ್ ಯೋಜನೆ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸುವುದು ಕಡ್ಡಾಯ

ಪ್ರಕೃತಿ ವಿಕೋಪಗಳಾದ ಆಲಿಕಲ್ಲು ಮಳೆ, ಭೂ ಕುಸಿತ ಮತ್ತು ಅತೀವೃಷ್ಟಿಯಿಂದಾಗಿ ಬೆಳೆ ಮುಳುಗಡೆಯಾಗಿ ಬೆಳೆ ನಷ್ಟವಾದಾಗ  ಬೆಳೆ ವಿಮಾ ನಷ್ಟ ಪರಿಹಾರವನ್ನು ನೀಡಲಾಗುವುದು.

ರೈತರು ಬೆಳೆ ನಷ್ಟವಾದಾಗ ಯಾವಾಗ ಮಾಹಿತಿ ನೀಡಬೇಕು?

ವಿಮೆ ಮಾಡಿಸಿರುವ ರೈತರು ಈ ಬಗ್ಗೆ ಸಂಬಂಧಪಟ್ಟ ಹಣಕಾಸು ಸಂಸ್ಥೆ ಅಥವಾ ವಿಮಾ ಸಂಸ್ಥೆಯ ಕಚೇರಿಗಳಿಗೆ 48 ಗಂಟೆಯೊಳಗೆ ಮಾಹಿತಿ ನೀಡಬೇಕು. ಯಾವುದೇ ಸಂದರ್ಭದಲ್ಲಿ ವಿಮೆ ಮಾಡಿಸಿದ ಬೆಳೆಯ ವಿವರಗಳನ್ನು, ಹಾನಿಯ ವ್ಯಾಪ್ತಿ ಹಾಗೂ ಹಾನಿಗೆ ಕಾರಣವನ್ನು 48 ಗಂಟೆಗಳೊಳಗಾಗಿ ತಿಳಿಸಿದಲ್ಲಿ ಮಾತ್ರ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು.

ಬೆಳೆ ವಿಮೆ ಪರಿಹಾರ ಹೇಗೆ ನಿರ್ಧರಿಸಲಾಗುವುದು?

ಮುಂಗಾರು ಹಂಗಾಮಿನಲ್ಲಿ ಅಧಿಸೂಚಿತ ಘಟಕದಲ್ಲಿ ಶೇ.75ಕ್ಕಿಂತ ಹೆಚ್ಚಿನ ಕ್ಷೇತ್ರದಲ್ಲಿ ಬಿತ್ತನೆ ವಿಫಲಗೊಂಡಲ್ಲಿ ವಿಮಾ ಮೊತ್ತದ ಗರಿಷ್ಟ ಶೇ. 25 ರಷ್ಟು ಬೆಳೆ ವಿಮಾ ನಷ್ಟ ಪರಿಹಾರ ನೀಡಲಾಗುವುದು. ಬಿತ್ತನೆಯಿಂದ ಕಟಾವು ಹಂತದವರೆಗಿನ ಮಧ್ಯದ ಅವಧಿಯಲ್ಲಿ ಶೇ. 50 ಕ್ಕಿಂತ ಹೆಚ್ಚು ಬೆಳೆ ನಷ್ಟ ಸಂಭವಿಸಿದರೆ ಮುಂಚಿತವಾಗಿ ಅಂದಾಜು ಮಾಡಲಾದ ಬೆಳೆ ವಿಮಾ ನಷ್ಟ ಪರಿಹಾರದಲ್ಲಿ ಶೇ.25 ರಷ್ಟು ಹಣವನ್ನು ಪರಿಹಾರವಾಗಿ ನೀಡಲಾಗುವುದು. ಅಲ್ಲದೆ ಕಟಾವಿನ ನಂತರ ಬೆಳೆಯನ್ನು ಜಮೀನಿನಲ್ಲಿ ಒಣಗಲು ಬಿಟ್ಟಂತಹ ಸಂದರ್ಭದಲ್ಲಿ ಎರಡು ವಾರದೊಳಗೆ (ಹದಿನಾಲ್ಕು ದಿನಗಳು) ಚಂಡಮಾರುತ, ಚಂಡಮಾರುತ ಸಹಿತ ಮಳೆ ಮತ್ತು ಅಕಾಲಿಕ ಮಳೆಯಿಂದಾಗಿ ಬೆಳೆ ನಷ್ಟವಾದಾಗ ವೈಯಕ್ತಿಕವಾಗಿ ವಿಮಾ ಸಂಸ್ಥೆಯು ನಷ್ಟ ನಿರ್ಧಾರ ಮಾಡಿ ರೈತರಿಗೆ ಬೆಳೆ ನಷ್ಟ ಪರಿಹಾರವನ್ನು ನೀಡುವುದು.

Leave a Comment