ರಾಜ್ಯದ ಎಲ್ಲಾ ರೈತರಿಗೆ ಕೃಷಿ ಇಲಾಖೆಯ ಎಲ್ಲಾ ಯೋಜನೆಗಳನ್ನು ಫ್ರೂಟ್ಸ್ ನೋಂದಣಿ ಗುರುತಿನ ಸಂಖ್ಯೆ ಬಳಸಿ ಕೆ ಕಿಸಾನ್ ತಂತ್ರಾಂಶದ ಮೂಲಕ ಅನುಷ್ಠಾನ ಮಾಡಲಾಗುತ್ತಿದೆ. ಅದೇ ರೀತಿಯಲ್ಲಿ ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿಯಾದ ರಾಜ್ಯದ ಎಲ್ಲಾ ರೈತರಿಗೆ ರೈತ ಶಕ್ತಿ ಯೋಜನೆಯಡಿಯಲ್ಲಿ ಎಕರೆಗೆ 250 ರೂಪಾಯಿಯಂತೆ ಗರಿಷ್ಠ 1250 ರೂಪಾಯಿಯನ್ನು ನೇರವಾಗಿ ರೈತರ ಖಾತೆಗೆ ಜಮೆ ಮಾಡಲಾಗುವುದು.

ಈ ಯೋಜನೆಯು ಅರ್ಹತಾಧಾರಿತ ಯೋಜನೆಯಾಗಿರುವುದರಿಂದ ಯಾವುದೇ ರೈತರು ಪ್ರತ್ಯೇಕವಾಗಿ ವೈಯಕ್ತಿಕ ಅರ್ಜಿ ಸಲ್ಲಿಸುವು ಅವಶ್ಯಕತೆಯಿರುವುದಿಲ್ಲ. ದಾಖಲೆಗಳ ಪರಿಶೀಲನೆಯನ್ನು ಸರ್ಕಾರದ ಫ್ರೂಟ್ಸ್ ಪೋರ್ಟಲ್ ನಲ್ಲಿ ಲಭ್ಯವಿರುವ ದತ್ತಾಂಶಗಳ ಆಧಾರದ ಮೇಲೆ ಮಾಡಲಾಗುವುದು. ಫ್ರೂಟ್ಸ್ ಪೋರ್ಟಲ್ ನಲ್ಲಿ ನಮೂದಿಸಲಾದ ಹಿಡುವಳಿಯ ವಿಸ್ತೀರ್ಣದ ಆಧಾರದ ಮೇಲೆ ಎಕರೆಗೆ 250 ರೂಪಾಯಿಯಂಯಂತೆ ಗರಿಷ್ಠ 1250 ರೂಪಾಯಿಯವರೆಗೆ ಡೀಸೆಲ್ ಸಹಾಯಧನವನ್ನು ನೇರ ನಗದು ವರ್ಗಾವಣೆ (ಡಿಬಿಟಿ) ಮೂಲಕ ರೈತರ ಖಾತೆಗೆ ವರ್ಗಾಯಿಸಲಾಗುವುದು.

ಒಂದು ಎಕರೆಗೆ 250 ರೂಪಾಯಿ, ಎರಡು ಎಕರೆಗೆ 500 ರೂಪಾಯಿ, ಮೂರು ಎಕರೆಗೆ 750 ರೂಪಾಯಿ, ನಾಲ್ಕು ಎಕರೆಗೆ 1000 ರೂಪಾಯಿ, ಐದು ಎಕರೆಗೆ 1250 ರೂಪಾಯಿ ಸಹಾಯಧನ ನೀಡಲಾಗುವುದು. ರೈತರು ಬಳಸುವ ಕೃಷಿ ಯಂತ್ರಗಳಿಗೆ ಅಗತ್ಯವಿರುವ ಡಿಸೆಲ್ ಗೆ ಸಹಾಯಧನ ನೀಡುವ ಯೋಜನೆ ಇದಾಗಿದೆ.

ಬಹುತೇಕ ಕೃಷಿ ಚಟುವಟಿಕೆಗಳು  ಯಂತ್ರಗಳ ಸಹಾಯದಿಂದ ನಡೆಯುತ್ತದೆ. ಟ್ರ್ಯಾಕ್ಟರ್, ಟಿಲ್ಲರ್, ರಾಶಿ ಯಂತ್ರಗಳಿಗೆ ಡೀಸೆಲ್ ಬಳಸುವುದಕ್ಕಾಗಿ ಈ ಸಹಾಯಧನ ನೀಡಲಾಗುವುದು.  ಡೀಸೆಲ್ ಸಹಾಯಧನಕ್ಕೆ ರೈತರು ಅರ್ಜಿ ಸಲ್ಲಿಸುವ ಅಗತ್ಯವಿಲ್ಲ.  ರೈತರು ಹೊಂದಿದ ಜಮೀನಿಗೆ ಅನುಗುಣವಾಗಿ ಸಹಾಯಧನವನ್ನು ನೇರವಾಗಿ ರೈತರ ಖಾತೆಗೆ ಜಮೆ ಮಾಡಲಾಗುವುದು. ಆದರೆ ರೈತರು ಕಡ್ಡಾಯವಾಗಿ ಫ್ರೂಟ್ಸ್ ತಂತ್ರಾಂಶದಲ್ಲಿ ತಮ್ಮ ಹೆಸರು ನೋಂದಣಿ ಮಾಡಿಸಿರಬೇಕು.

ಡೀಸೆಲ್ ಸಹಾಯಧನ ಪಡೆಯಲು ಫ್ರೂಟ್ಸ್ ತಂತ್ರಾಂಶದಲ್ಲಿ ಹೆಸರು ನೋಂದಣಿ ಮಾಡಿಸುವುದು ಹೇಗೆ?

ರೈತರು ತಮ್ಮ ಮೊಬೈಲ್ ಮೂಲಕವೇ ಫ್ರೂಟ್ಸ್ ತಂತ್ರಾಂಶದಲ್ಲಿ ತಮ್ಮ ಹೆಸರು ನೋಂದಣಿ ಮಾಡಿಸಿಕೊಳ್ಳಬಹುದು. ಅದು ಹೇಗೆ ಅಂದುಕೊಂಡಿದ್ದೀರಾ.. ಇಲ್ಲಿದೆ ನೋಡಿ ಮಾಹಿತಿ.

ರೈತರು ತಮ್ಮ ಹೆಸರು ನೋಂದಣಿ ಮಾಡಿಸಲು ಈ

https://fruits.karnataka.gov.in/OnlineUserLogin.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಫ್ರೂಟ್ಸ್ ತಂತ್ರಾಂಶದ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ citizen registration ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಆಧಾರ್ ಕಾರ್ಡ್ ನಲ್ಲಿರುವಂತೆ ಹೆಸರು ನಮೂದಿಸಬೇಕು. ಆಧಾರ್ ಕಾರ್ಡ್ ನಂಬರ್ ನಮೂದಿಸಬೇಕು. I Agree ಬಾಕ್ಸ್ ಆಯ್ಕೆ ಮಾಡಿಕೊಂಡು ಸಬ್ಮಿಟ್ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮ್ಮ ಮೊಬೈಲ್ ನಂಬರ್ ನಮೂದಿಸಬೇಕು. ಮೇಲ್ ಐಡಿ ಇದ್ದರೆ ಎಸ್ ಇಲ್ಲದಿದ್ದರೆ ನೋ ಮೇಲೆ ಕ್ಲಿಕ್ ಮಾಡಬೇಕು. ಆಮೇಲೆ ಪ್ರೊಸೀಡ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಅಲ್ಲಿ ಕೇಳಲಾದ ಮಾಹಿತಿಗಳನ್ನು ಒಂದೊಂದಾಗಿ ಭರ್ತಿ ಮಾಡುತ್ತಾ ಫ್ರೂಟ್ಸ್ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಿದರೆ ಸಾಕು. ನೀವು ಕ್ರಿಯೇಟ್ ಮಾಡಿದ ಪಾಸ್ವರ್ಡ್ ನೆನಪಿಟ್ಟುಕೊಳ್ಳಬೇಕು.  ಫ್ರೂಟ್ಸ್ ನೋಂದಣಿ ಪ್ರಕ್ರಿಯೆ ಪೂರ್ಣಗೊಂಡನಂತರ ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿಯಾದ ಎಲ್ಲಾ ರೈತರಿಗೆ ಅಂತಿಮ ದಿನಾಂಕವನ್ನು ನಿಗದಿಪಡಿಸಿ ಏಕಕಾಲದಲ್ಲಿ ಡೀಸೆಲ್ ಸಹಾಯಧನವನ್ನುಜಮೆ ಮಾಡುವುದು. ಈ ಸಹಾಯಧವನ್ನು ವರ್ಷಕ್ಕೆ ಒಂದು ಸಲ ರೈತರ ಖಾತೆಗೆ ಜಮೆ ಮಾಡುವುದು.

ಇದನ್ನೂಓದಿ : ಭಾಗ್ಯಲಕ್ಷ್ಮೀ ಬಾಂಡ್ ಯೋಜನೆಯಡಿ ನಿಮ್ಮ ಮಗುವಿನ ಹೆಸರಿಗೆ ಎಷ್ಟು ಹಣ ಜಮೆಯಾಗಿದೆ? ಮೊಬೈಲ್ ನಲ್ಲೇ ಚೆಕ್ ಮಾಡಿ

ಫ್ರೂಟ್ಸ್ ತಂತ್ರಾಂಶದಲ್ಲಿ ಹೆಸರು ನೋಂದಾಯಿಸಲು ಸಮಸ್ಯೆಯಾಗುತ್ತಿದ್ದರೆ ರೈತರು ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ನೋಂದಣಿ ಮಾಡಿಸಿಕೊಳ್ಳಬಹುದು.ಇದಕ್ಕಾಗಿ ಪಹಣಿ, ಬ್ಯಾಂಕ್ ಪಾಸ್ ಬುಕ್, ಆಧಾರ್ ಕಾರ್ಡ್ ಫೋಟೋ ಬೇಕಾಗುತ್ತದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟಪಂಗಡದವರಾಗಿದ್ದರೆ ಜಾತಿ ಪ್ರಮಾಣ ಪತ್ರ ಆರ್.ಡಿ ಸಂಖ್ಯೆ ನಮೂದಿಸಬೇಕು.

Leave a Reply

Your email address will not be published. Required fields are marked *