ಮೊಬೈಲ್ ನಲ್ಲೇ ಪಿಎಂ ಕಿಸಾನ್ ಯೋಜನೆಗೆ ನೋಂದಣಿ ಮಾಡಿ

Written by Ramlinganna

Updated on:

How to register online pm kisan ಪಿಎಂ ಕಿಸಾನ್ ಯೋಜನೆಯ ಫಲಾನುಭವಿಯಾಗಲು ಈಗ ತುಂಬಾ ಸರಳವಾಗಿದೆ. ಮೊಬೈಲ್ ನಲ್ಲೇ ತಮ್ಮ ಹೆಸರು ನೋಂದಣಿಮಾಡಿಸಿ ರೈತರು ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಾಗಬಹುದು.

ಹೌದು, ಪಿಎಂ ಕಿಸಾನ್ ಯೋಜನೆಯ ನೋಂದಣಿ ಪ್ರಕ್ರಿಯನ್ನು ಈಗ ತುಂಬಾ ಸರಳಗೊಳಿಸಲಾಗಿದೆ. ಇದಕ್ಕಾಗಿ ಯಾರ ಸಹಾಯವೂ ಬೇಕಿಲ್ಲ. ಮೊಬೈಲ್ ನಲ್ಲಿ ಕೇಳಲಾದ ಅಗತ್ಯ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿದರೆ ಸಾಕು, ನೀವು ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಾಗಬಹುದು.

How to register online pm kisan ಪಿಎಂ ಕಿಸಾನ್ ಯೋಜನೆಗೆ ಯಾರು ಫಲಾನುಭವಿಗಳು 

2 ಹೆಕ್ಟೇರ್ ವರೆಗೆ ಜಮೀನು ಹೊಂದಿರುವ ಸಣ್ಣ ಮತ್ತು ಅತೀ ಸಣ್ಣ ರೈತ ಕುಟುಂಬವು ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಾಗಬಹುದು. ಪಿಎಂ ಕಿಸಾನ್ ಯೋಜನೆಯಡಿ ಒಂದು ಕುಟುಂಬದ ಒಬ್ಬ ಸದಸ್ಯರಿಗೆ ಲಾಭ ಸಿಗುತ್ತದೆ. ಈಗಾಗಲೇ ಕೆಲವು ರೈತರು ಒಂದು ಕುಟುಂಬದಲ್ಲಿಇಬ್ಬರು ಮೂವರು ಫಲಾನುಭವಿಗಳಾಗಿದ್ದಾರೆ. ಹಾಗಾಗಿ ಅಂತಹ ಫಲಾನುಭವಿಗಳನ್ನು ಕಂಡುಹಿಡಿಯಲು ಈಗ ಇಕೆವೈಸಿ ಕಡ್ಡಾಯಗೊಳಿಸಲಾಗಿದೆ. ಒಂದೇ ಕುಟುಂಬದ ಪತಿ ಪತ್ನಿಯರಿಬ್ಬರು ಪ್ರಯೋಜನ ಪಡೆಯುತ್ತಿದ್ದರೆ ಅಂತಹ ರೈತರನ್ನು ಅನರ್ಹರೆಂದು ಪರಿಗಣಿಸಲಾಗುತ್ತದೆ.

ರೈತ ಕುಟುಂಬದಲ್ಲಿ ಯಾರಾದರೂ ತೆರಿಗೆ ಪಾವತಿಸುತ್ತಿದ್ದರೆ ಈ ಯೋಜನೆಯ ಪ್ರಯೋಜನ ಪಡೆಯಲು ಸಾಧ್ಯವಿಲ್ಲ. ವೃತ್ತಿಪರ ನೋಂದಾಯಿತ ವೈದ್ಯರು, ಇಂಜಿನಿಯರ್, ವಕೀಲರು ಸರ್ಕಾರಿ ನೌಕರರು ಪಿಎಂ ಕಿಸಾನ್ ಯೋಜನೆಯ ಲಾಭ ಪಡೆಯಲು ಅನರ್ಹರಾಗಿರುತ್ತಾರೆ.

ಪಿಎಂ ಕಿಸಾನ್ ಯೋಜನೆಯ ಫಲಾನುಭವಿಯಾಗಲು ಯಾವ ಯಾವ ದಾಖಲೆ ಸಲ್ಲಿಸಬೇಕು (what are Documents need for PM kisan scheme Beneficiary)?

ರೈತರು ಪಿಎಂ ಕಿಸಾನ್ ಯೋಜನೆಯ ಫಲಾನುಭವಿಯಾಗಬೇಕಾದರೆ ತಮ್ಮ ಜಮೀನಿನ ಪಹಣಿಯ ಝರಾಕ್ಸ್ ಪ್ರತಿ ಸಲ್ಲಿಸಬೇಕು. ಬ್ಯಾಂಕ್ ಪಾಸ್ ಬುಕ್ ಝರಾಕ್ಸ್, ಪಡಿತರ ಚೀಟಿ ಹೊಂದಿರಬೇಕು. ಪಾಸ್ಪೋರ್ಟ್ ಸೈಜಿನ ಫೋಟೋ ಇರಬೇಕು. ಮೊಬೈಲ್ ನಂಬರ್ ಇರಬೇಕು.

ಪಿಎಂ ಕಿಸಾನ್ ಯೋಜನೆಯ ಫಲಾನುಭವಿಯಾಗಲು ಆನ್ಲೈನ್ ನಲ್ಲಿ ಹೇಗೆ ನೋಂದಣಿ ಮಾಡಿಸಬೇಕು (How to register for pm kisan scheme) ?

ರೈತರು ಮೊಬೈಲ್ ನಲ್ಲಿಯೇ ಆನ್ಲೈನ್ ನಲ್ಲಿ ಪಿಎಂ ಕಿಸಾನ್ ಯೋಜನೆಯ ಫಲಾನುಭವಿಯಾಗಬೇಕಾದರೆ ಈ

https://pmkisan.gov.in/RegistrationFormnew.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.ಆಗ ಪಿಎಂ ಕಿಸಾನ್ ಯೋಜನೆಯ ವೆಬ್ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ಗ್ರಾಮಾಂತರ ರೈತರೋ ಅಥವಾ ನಗರದ ರೈತರು ಎರಡರಲ್ಲಿ ಒಂದನ್ನು ಆಯ್ಕೆ ಮಾಡಿಕೊಳ್ಳಬೇಕು. ಆಧಾರ್ ಕಾರ್ಡ್ ನಮೂದಿಸಬೇಕು.  ಮೊಬೈಲ್ ನಂಬರ್ ನಮೂದಿಸಬೇಕು. ರಾಜ್ಯ ಆಯ್ಕೆ ಮಾಡಿಕೊಳ್ಳಬೇಕು. ನಂತರ ಇಮೆಜ್ ಕೋಡ್ ಹೇಗೆ ತೋರಿಸಲಾಗಿದೆಯೋ ಹಾಗೆಯೇ ಟೈಪ್ ಮಾಡಿ ಸೆಂಡ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಮೊಬೈಲಿಗೆ ಒಂದು ಓಟಿಪಿ ಬರುತ್ತದೆ. ಈ ಓಟಿಪಿಯನ್ನು ನಮೂದಿಸಿದ ನಂತರ ಅರ್ಜಿ ತೆರೆದುಕೊಳ್ಳುತ್ತದೆ. ಅಲ್ಲಿ ನಿಮ್ಮ ಆಧಾರ್ ಕಾರ್ಡ್ ನಲ್ಲಿರುವಂತೆ ಸರಿಯಾಗಿ ಹೆಸರು, ತಂದೆಯ ಹೆಸರು, ಗ್ರಾಮ, ಹೋಬಳಿ, ತಾಲೂಕು, ಜಿಲ್ಲೆ, ಪಹಣಿಯ ಸರ್ವೆ ನಂಬರ್, ಬ್ಯಾಂಕ್ ಪಾಸ್ ಬುಕ್, ಪಡಿತರ ಚೀಟಿ ಸೇರಿದಂತೆ ಇನ್ನಿತರ ಮಾಹಿತಿಗಳನ್ನು ಸರಿಯಾಗಿ ಭರ್ತಿ ಮಾಡಿ ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಾಗಬಹುದು.

ಇದನ್ನೂ ಓದಿ  ನಿಮ್ಮ ಜಮೀನಿನ ಅಕ್ಕಪಕ್ಕ ಯಾರಿಗೆಷ್ಟು ಜಮೀನಿದೆ? ಚೆಕ್ ಮಾಡಿ

ಒಂದುವೇಳೆ ನಿಮಗೆ ಮೊಬೈಲ್ ನಲ್ಲೇ ಪಿಎಂ ಕಿಸಾನ್ ಯೋಜನೆಗೆ ಅರ್ಜಿ ಸಲ್ಲಿಸಲು ಸಮಸ್ಯೆಯಾಗುತ್ತಿದ್ದರೆ  ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ತೆರಳಿ ಮೇಲೆ ತಿಳಿಸಿದ ಎಲ್ಲಾ ದಾಖಲೆಗಳನ್ನು ಸಲ್ಲಿಸಬೇಕು. ನೀವು ಯಾವ ಹೋಬಳಿಗೆ ಸಂಬಂಧಪಟ್ಟಿರುತ್ತೀರೋ ಅಲ್ಲಿ ರೈತ ಸಂಪರ್ಕ ಕೇಂದ್ರ ಇರುತ್ತದೆ. ಅಲ್ಲಿ ನೀವು ನಿಮ್ಮ ದಾಖಲೆಗಳನ್ನು ಸಲ್ಲಿಸಿ ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಾಬಹುದು.

ಪಿಎಂ ಕಿಸಾನ್ ಯೋಜನೆಯ ಸಹಾಯವಾಣಿ (PM kisan Helpline Number)

ರೈತರಿಗೆ ಪಿಎಂ ಕಿಸಾನ್ ಯೋಜನೆಯ ಹಣ ಜಮೆ, ನೋಂದಣಿಯಲ್ಲಿ ಸಮಸ್ಯೆಯಾಗುತ್ತಿದ್ದರೆ ನೇರವಾಗಿ ಸಹಾಯವಾಣಿಗೆ ಕರೆ ಮಾಡಿ ಸಂಪರ್ಕಿಸಬುದು. ರೈತರು ಏನಾದರೂ ಸಮಸ್ಯೆ ಎದುರಿಸುತ್ತಿದ್ದರೆ  011-24300606 ಅಥವಾ 155261 ಗೆ ಕರೆ ಮಾಡಬಹುದು.

Leave a Comment