ಪಿಎಂ ಕಿಸಾನ್ ನೋಂದಣಿ ಮಾಡಿಸುವುದು ಹೇಗೆ? ಇಲ್ಲಿದೆ ಮಾಹಿತಿ

Written by Ramlinganna

Updated on:

How to Register pm kisan scheme ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ರೈತರು ಮೊಬೈಲ್ ನಲ್ಲೇ ನೋಂದಣಿ ಮಾಡಿಸಬಹುದು. ಇದರೊಂದಿಗೆ ಈ ಹಿಂದೆ ನೋಂದಣಿ ಮಾಡಿಸಿದ್ದರೆ ಸರಿಯಾಗಿದೆಯೋ ಇಲ್ಲವೋ ಚೆಕ್ ಮಾಡಬಹುದು.

ಹೌದು, ಪಿಎಂ ಕಿಸಾನ್ ಯೋಜನೆ ನೋಂದಣಿ ಮಾಡಿಸುವುದಕ್ಕಿಂತ ಮೊದಲು ಯಾವ ಯಾವ ದಾಖಲೆ ಬೇಕು? ಅರ್ಜಿ ಎಲ್ಲಿ ಹೇಗೆ ಸಲ್ಲಿಸಬೇಕೆಂಬುದನ್ನು ತಿಳಿದುಕೊಳ್ಳಬೇಕು.  ಯಾವ ಯಾವ ಮಾಹಿತಿಗಳು ಸರಿಯಾಗಿರಬೇಕು? ಹಾಗೂ ಯಾವ ಯಾವ ದಾಖಲೆ ಸಲ್ಲಿಸುವುದು ಕಡ್ಡಾಯ ಎಂಬುದರ ಮಾಹಿತಿ ಇಲ್ಲಿದೆ.

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಹೆಸರು ನೋಂದಣಿ ಮಾಡಿಸುವುದು ಹೇಗೆ?

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಹೆಸರು ನೋಂದಣಿ ಮಾಡಿಸಲು ರೈತರು ಈ

https://pmkisan.gov.in/RegistrationFormNew.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ರೈತರು ಗ್ರಾಮೀಣ ಪ್ರದೇಶದವರಾಗಿದ್ದರೆ Rural Farmer Registration ನಗರ ಪ್ರದೇಶದವರಾಗಿದ್ದರೆ  Urban Farmer Registration ಆಯ್ಕೆ ಮಾಡಿಕೊಳ್ಳಬೇಕು. ಅಲ್ಲಿ ರೈತರು ಆಧಾರ್ ನಂಬರ್ ನಮೂದಿಸಿಬೇಕು. ನಂತರ ಮೊಬೈಲ್ ನಂಬರ್ ಹಾಕಬೇಕು. ನಂತರ ನಿಮ್ಮ ರಾಜ್ಯ ಆಯ್ಕೆ ಮಾಡಿಕೊಳ್ಳಬೇಕು. ನಂತರ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಿ ಗೆಟ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು. ನಿಮ್ಮ ಮೊಬೈಲಿಗೆ ಬಂದ ಓಟಿಪಿಯನ್ನು ನಮೂದಿಸಿ ಅಲ್ಲಿ ಕೇಳಲಾದ ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿ ಸಬ್ಮಿಟ್ ಮಾಡಬೇಕು.

How to Register pm kisan scheme ಪಿಎಂ ಕಿಸಾನ್ ಯೋಜನೆ ನೋಂದಣಿಗೆ ಯಾವ ಯಾವ ದಾಖಲೆ ಬೇಕು?

ಪಿಎಂ ಕಿಸಾನ್ ಯೋಜನೆ ನೋಂದಣಿಗೆ  ಆಧಾರ್ ಕಾರ್ಡ್ ಬೇಕು. ಇದರೊಂದಿಗೆ ಜಮೀನಿಗೆ ಸಂಬಂಧಿಸಿದ ದಾಖಲೆಗಳು ಅಂದರೆ ಆರ್.ಟಿಸಿ (ಪಹಣಿ) ಬೇಕು. ಜಾತಿ  ಮತ್ತು ಆದಾಯ ಪ್ರಮಾಣ ಪತ್ರ ಇರಬೇಕು.

ಇದನ್ನೂ ಓದಿ Panchamitra Whatsapp number 8277506000

ಬ್ಯಾಂಕ್ ಖಾತೆಯ ಮಾಹಿತಿ ಇರಬೇಕು. ಪಾಸ್ ಪೋರ್ಟ್ ಗಾತ್ರದ ಫೋಟೋ ಇರಬೇಕು. ಕರ್ನಾಟಕದ ರೈತರು ಫ್ರೂಟ್ಸ್ ತಂತ್ರಾಂಶದಲ್ಲಿ ತಮ್ಮ ಹೆಸರು ನೋಂದಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ.

ಪಿಎಂ ಕಿಸಾನ್ ಯೋಜನೆಯ ಕಂತುಗಳು

ಪಿಎಂ ಕಿಸಾನ್ ಯೋಜನೆಯಡಿ ಇಲ್ಲಿಯವರೆಗೆ 13 ಕಂತುಗಳು ಜಮೆಯಾಗಿದೆ. 14ನೇ ಕಂತು ಮುಂದಿನ ತಿಂಗಳು ಜಮೆಯಾಗುವ ಸಾಧ್ಯತೆಯಿದೆ. ಹಾಗಾಗಿ ರೈತರು 14ನೇ ಕಂತು ಜಮೆಯಾಗುವುದಕ್ಕಿಂತ ಮುಂಚಿತವಾಗಿ ತಮ್ಮ ಹೆಸರು ನೋಂದಣಿ ಮಾಡಿಸಿಕೊಂಡರೆ ಪಿಂ ಕಿಸಾನ್ ಯೋಜನೆಯ ಸೌಲಭ್ಯ ಪಡೆಯಬಹುದು.

ನಿಮ್ಮ ನೋಂದಣಿ ಸರಿಯಾಗಿದೆ? ಚೆಕ್ ಮಾಡಿ

ಪಿಎಂ ಕಿಸಾನ್ ಯೋಜನೆಗೆ ನಿಮ್ಮ ಹೆಸರು ನೋಂದಣಿ ಮಾಡಿಸಿದ್ದು ಸರಿಯಾಗಿದೆಯೋ ಇಲ್ಲವೋ ಚೆಕ್ ಮಾಡಲು ಈ

https://pmkisan.gov.in/FarmerStatus.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.  ಅಲ್ಲಿ ಆಧಾರ್ ನಂಬರ್ ಹಾಕಿದ ನಂತರ ಕ್ಯಾಪ್ಚ್ಯಾ ಕೋಡ್ ಹಾಕಿ ಸರ್ಚ್ ಮೇಲೆ ಕ್ಲಿಕ್ ಮಾಡಿ ಸ್ಟೇಟಸ್ ಚೆಕ್ ಮಾಡಬಹುದು.

ಪಿಎಂ ಕಿಸಾನ್ ಯೋಜನೆ ಯಾವಾಗ ಆರಂಭವಾಗಿದೆ?

ಪಿಎಂ ಕಿಸಾನ್ ಯೋಜನೆಯು 2018 ರ ಡಿಸೆಂಬರ್ ತಿಂಗಳಲ್ಲಿ ಆರಂಭವಾಗಿದೆ. ದೇಶದ ಸಣ್ಣ ರೈತರಿಗೆ ಆರ್ಥಿಕ ನೆರವಾಗಲೆಂಬ ಉದ್ದೇಶದಿಂದ ಪಿಎಂ ಕಿಸಾನ್ ಯೋಜನೆಯನ್ನು ಆರಂಭಿಸಲಾಗಿದೆ. ಕೃಷಿ ಚಟುವಟಿಕಗೆ ಸಹಾಯವಾಗಲೆಂಬ ಉದ್ದೇಶದಿಂದ ಆರಂಭಿಸಲಾದ ಈ ಯೋಜನೆಯಡಿಯಲ್ಲಿ ಪ್ರತಿ ವರ್ಷ 3 ಕಂತುಗಳಲ್ಲಿ ತಲಾ 2 ಸಾವಿರ ರೂಪಾಯಿಯಂತೆ ಒಟ್ಟು 6 ಸಾವಿರ ರೂಪಾಯಿ ಜಮೆ ಮಾಡಲಾಗುವುದು. ಈ ಯೋಜನೆಯೊಂದಿಗೆ ಪಿಎಂ ಕಿಸಾನ್ ಯೋಜನೆಗೆ ರಾಜ್ಯ ಸರ್ಕಾರದ ವತಿಯಿಂದ 4 ಸಾವಿರ ರೂಪಾಯಿ ಹೆಚ್ಚುವರಿ ಹಣ ಘೋಷಣೆ ಮಾಡಲಾಗಿದೆ. ಹೀಗಾಗಿ ಉಳಿದ ರಾಜ್ಯಗಳ ರೈತರಿಗೆ 6 ಸಾವಿರ ರೂಪಾಯಿ ಸಿಕ್ಕರೆ, ಕರ್ನಾಟಕ ರಾಜ್ಯದ ರೈತರಿಗೆ 10 ಸಾವಿರ ರೂಪಾಯಿ ಜಮೆಯಾಗುತ್ತದೆ.

ಪಿಎಂ ಕಿಸಾನ್ ಯೋಜನೆಯಡಿಯಲ್ಲಿ 2 ಹೆಕ್ಟೇರ್ ಗಿಂತ ಕಡಿಮೆ ಭೂ ಒಡೆತನ ಹೊಂದಿರುವ ಪ್ರತಿ ರೈತ ಕುಟುಂಬಕ್ಕೆ ಪಿಎಂ ಕಿಸಾನ್ ಸೌಲಭ್ಯ ಒದಗಿಸಲಾಗುವುದು.  ಒಟ್ಟು 2 ಹೆಕ್ಟೇರಗಳವರೆಗೆ  ಭೂಮಿ ಹೊಂದಿರುವ ಪತಿ, ಪತ್ನಿ ಹಾಗೂ ಅಪ್ರಾಪ್ತ ಮಕ್ಕಳನ್ನು ಹೊಂದಿರುವ ಕುಟುಂಬಕ್ಕೆ ಈ ಸೌಲಭ್ಯ ಸಿಗಲಿದೆ.

Leave a Comment